ಗೋಕರ್ಣದಲ್ಲಿ ಪಿತೃಕಾರ್ಯ ನೆರವೇರಿಸಿದ ಮುಸ್ಲಿಂ ಕುಟುಂಬ – ಮಾನಸಿಕ ನೆಮ್ಮದಿಗೂ ಜ್ಯೋತಿಷ್ಯರ ಮೊರೆ ಹೋಗಿತ್ತು ಈ ಕುಟುಂಬ..!!

ಗೋಕರ್ಣದಲ್ಲಿ ಪಿತೃಕಾರ್ಯ ನೆರವೇರಿಸಿದ ಮುಸ್ಲಿಂ ಕುಟುಂಬ – ಮಾನಸಿಕ ನೆಮ್ಮದಿಗೂ ಜ್ಯೋತಿಷ್ಯರ ಮೊರೆ ಹೋಗಿತ್ತು ಈ ಕುಟುಂಬ..!!

ನ್ಯೂಸ್ ಆ್ಯರೋ : ಪಿತೃಪಕ್ಷದ ಪರ್ವಕಾಲದಲ್ಲಿ ಧಾರವಾಡದ ಮುಸ್ಲಿಂ ಕುಟುಂಬವೊಂದು ಈಚೆಗೆ ಗೋಕರ್ಣದಲ್ಲಿ ಪಿತೃಕಾರ್ಯ ನೆರವೇರಿಸಿರುವ ಘಟನೆ ನಡೆದಿದೆ.

ಧಾರವಾಡದಲ್ಲಿ ಮರದ ಕೆಲಸ ಮಾಡುವ ಮುಸ್ಲಿಂ ಕುಟುಂಬದ ಸದಸ್ಯರು ಜ್ಯೋತಿಷಿಯೊಬ್ಬರ ಸಲಹೆ ಮೇರೆಗೆ ನಾರಾಯಣ ಬಲಿ, ತ್ರಿಪಿಂಡಿ ಶ್ರಾದ್ಧ ಮತ್ತು ತಿಲ ಹವನವನ್ನು ಇಲ್ಲಿಯ ಪಿತೃಶಾಲೆಯಲ್ಲಿ ನೆರವೇರಿಸಿದರು.

ಹಿಂದೂ ಸಂಪ್ರದಾಯದ ಜತೆ ಹಿಂದಿನಿಂದಲೂ ನಂಟು

ಈ ಬಗ್ಗೆ ಕುಟುಂಬದ ಶಂಶಾದ್ ಅವರು ಪ್ರತಿಕ್ರಿಯಿಸಿ, ಮೊದಲಿನಿಂದಲೂ ಹಿಂದೂ ಸಂಪ್ರದಾಯದ ಕೆಲ ಆಚರಣೆಗಳನ್ನು ಪಾಲಿಸುತ್ತಿದ್ದೇವೆ. ನಮ್ಮ ತಂದೆ ಗದಗಿನ ವೀರನಾರಾಯಣ ದೇವಸ್ಥಾನದ ಬಳಿ ಬ್ರಾಹ್ಮಣ ಮತ್ತು ಲಿಂಗಾಯತ ಸಮುದಾಯದವರ ಜತೆ ಬೆಳೆದವರು. ತಮ್ಮನಿಗೆ ಮದುವೆ ಮಾಡಲು ಹೆಣ್ಣು ಸಿಗದಿದ್ದಾಗ, ಜ್ಯೋತಿಷಿಯ ಮೊರೆ ಹೋಗಿದ್ದೆವು. ಅವರ ಸಲಹೆಯಂತೆ ತಮ್ಮನ ಮದುವೆ, ಮಾನಸಿಕ ಶಾಂತಿಗೆ ಈ ಕಾರ್ಯವನ್ನು ಮಾಡಿದ್ದೇವೆ ಎಂದರು.

ಪುರೋಹಿತರಾದ ನಾಗರಾಜ ಭಟ್ ಗುರ್ಲಿಂಗ್, ಸುಬ್ರಮಣ್ಯ ಚಿತ್ರಿಗೆಮಠ ನೇತೃತ್ವದಲ್ಲಿ ಪೂಜೆ ಕಾರ್ಯ ನೆರವೇರಿಸಿದರು. ಈ ಬಗ್ಗೆ ಅರ್ಚಕರು ಪ್ರತಿಕ್ರಿಯಿಸಿ, ಗೋಕರ್ಣದಲ್ಲಿ ಕ್ರೈಸ್ತ ಸಮುದಾಯದವರು ಪಿತೃಕಾರ್ಯ ನೆರವೇರಿಸಿದ ಉದಾಹರಣೆಗಳಿವೆ. ಆದರೆ, ಮುಸ್ಲಿಂ ಕುಟುಂಬ ಪಿತೃಕಾರ್ಯ ಮಾಡಿದ್ದು ಅಪರೂಪ ಎಂದರು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *