ನಾಡಿನೆಲ್ಲೆಡೆ 50ನೇ ವರ್ಷದ ‘ಕನ್ನಡ ರಾಜ್ಯೋತ್ಸವ’ ಸಂಭ್ರಮ – ಮೈಸೂರು ರಾಜ್ಯ ಕರ್ನಾಟಕವಾಗಿ ನಾಮಕರಣಗೊಂಡ ಹಿನ್ನೆಲೆ ಗೊತ್ತಾ?

ನಾಡಿನೆಲ್ಲೆಡೆ 50ನೇ ವರ್ಷದ ‘ಕನ್ನಡ ರಾಜ್ಯೋತ್ಸವ’ ಸಂಭ್ರಮ – ಮೈಸೂರು ರಾಜ್ಯ ಕರ್ನಾಟಕವಾಗಿ ನಾಮಕರಣಗೊಂಡ ಹಿನ್ನೆಲೆ ಗೊತ್ತಾ?

ನ್ಯೂಸ್ ಆ್ಯರೋ : ಇಂದು ರಾಜ್ಯದಾದ್ಯಂತ 50ನೇ ಕನ್ನಡ ರಾಜ್ಯೋತ್ಸವವನ್ನು ಭಾರೀ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಮೈಸೂರು ರಾಜ್ಯವಾಗಿದ್ದ(ಈಗಿನ ಕರ್ನಾಟಕ) 1956 ರ ನವೆಂಬರ್ 1ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ.

ಮೈಸೂರು ರಾಜ್ಯವನ್ನು ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಲಾಯಿತು. ಈ ದಿನದಂದು ಕರ್ನಾಟಕ ರಾಜ್ಯಕ್ಕೆ ಸರ್ಕಾರಿ ರಜೆಯನ್ನು ನೀಡಲಾಗಿದೆ. ಆದರೆ ಸರ್ಕಾರಿ ಕಚೇರಿಗಳಲ್ಲಿ, ಶಾಲಾ ಕಾಲೇಜುಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಕರ್ನಾಟಕದ ಇತಿಹಾಸವನ್ನು ಈ ದಿನದಂದು ಸಾರಲಾಗುತ್ತದೆ. ಇನ್ನೊಂದು ವಿಶೇಷ ಏನೆಂದರೆ ಈ ದಿನದಂದು ರಾಜ್ಯೋತ್ಸವ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರ ಹಮ್ಮಿಕೊಂಡು, ಪ್ರಶಸ್ತಿ ಪ್ರದಾನ ಮಾಡುತ್ತಾರೆ.

ಮೈಸೂರ ರಾಜ್ಯದ ಇತಿಹಾಸ

ಕನ್ನಡದ ಕುಲಪುರೋಹಿತರಾದ ಆಲೂರು ವೆಂಕಟರಾಯರು, ಕರ್ನಾಟಕ ಏಕೀಕರಣ ಚಳುವಳಿಯನ್ನು 1905 ರಲ್ಲಿ ಪ್ರಾರಂಭಿಸಿದರು. 1950ರಲ್ಲಿ, ಭಾರತವು ಗಣರಾಜ್ಯವಾದ ನಂತರ ಭಾರತದ ವಿವಿಧ ಪ್ರಾಂತ್ಯಗಳು, ಭಾಷೆಗಳ ಆಧಾರದ ಮೇಲೆ ರಾಜ್ಯಗಳಾಗಿ ರೂಪ ಗೊಂಡವು. ಈ ಹಿಂದೆ ರಾಜರ ಆಳ್ವಿಕೆಯಲ್ಲಿ ದಕ್ಷಿಣ ಭಾರತದಲ್ಲಿ ಹಲವಾರು ಸಂಸ್ಥಾನಗಳನ್ನು ಒಳಗೊಂಡಂತೆ ರಾಜ್ಯಗಳು ರೂಪುಗೊಂಡಿದ್ದವು. ಕನ್ನಡ ಮಾತನಾಡುವ ಪ್ರಾಂತ್ಯಗಳು ಸೇರಿ, ಮೈಸೂರು ರಾಜ್ಯವು ಉದಯವಾಯಿತು.

ಮೈಸೂರು ರಾಜ್ಯ ಕರ್ನಾಟಕವಾಗಿ ಬದಲಾಯಿತು

1956 ರ ನವೆಂಬರ್ 1 ರಂದು, ಮದ್ರಾಸ್, ಮುಂಬಯಿ, ಹೈದರಾಬಾದ್ ಪ್ರಾಂತ್ಯದ ಕನ್ನಡ ಮಾತನಾಡುವ ಪ್ರದೇಶಗಳು ವಿಲೀನಗೊಂಡು ಮೈಸೂರು ರಾಜ್ಯ ಉದಯವಾಯಿತು ಹಾಗೂ ಉತ್ತರ ಕರ್ನಾಟಕ, ಮಲೆನಾಡು ಮತ್ತು ಹಳೆಯ ಮೈಸೂರು ಎಂಬುದಾಗಿ ಹೊಸದಾಗಿ ರೂಪು ಗೊಂಡ ಮೈಸೂರು ರಾಜ್ಯವನ್ನು ಮೂರು ಪ್ರದೇಶಗಳಲ್ಲಿ ಗುರುತಿಸಲಾಯಿತು.1973ರಲ್ಲಿ ಮೈಸೂರು ರಾಜ್ಯವನ್ನು ಕರ್ನಾಟಕ ರಾಜ್ಯವನ್ನಾಗಿ ಮರು ನಾಮಕರಣ ಮಾಡಲಾಯಿತು.

ಹೊಸದಾಗಿ ಏಕೀಕೃತಗೊಂಡ ರಾಜ್ಯದ ಆರಂಭದಲ್ಲಿ ಹೊಸ ಘಟಕದ ಕೋರ್ ರೂಪುಗೊಂಡು ಹಿಂದಿನ ರಾಜ್ಯದ ಹೆಸರು ಇರಲೆಂದು ‘ಮೈಸೂರು’ ಹೆಸರನ್ನು ಉಳಿಸಿಕೊಂಡರು. ಆದರೆ ಉತ್ತರ ಕರ್ನಾಟಕದ ಜನರ ತರ್ಕ ಮಾನ್ಯತೆಗಾಗಿ, ರಾಜ್ಯದ ಹೆಸರು ನವೆಂಬರ್ 1, 1973 ರಂದು ‘ಕರ್ನಾಟಕ’ ಎಂದು ಬದಲಾಯಿತು.

ಕನ್ನಡ ಧ್ವಜ

ರಾಜ್ಯೋತ್ಸವ ದಿನದಂದು ಕೆಂಪು ಮತ್ತು ಹಳದಿ ಕನ್ನಡ ಧ್ವಜಗಳು ರಾಜ್ಯದ ಎಲ್ಲೆಡೆ ಹಾರಿಸಲ್ಪಡುತ್ತವೆ. ಕನ್ನಡ ನಾಡಗೀತೆ (ಜಯ ಭಾರತ ಜನನಿಯ ತನುಜಾತೆ)ಯನ್ನು ಹಾಡಲಾಗುತ್ತದೆ. ಸರ್ಕಾರಿ ಕಚೇರಿ ಮತ್ತು ಹಲವಾರು ಪ್ರಮುಖ ಪ್ರದೇಶಗಳಲ್ಲಿ ವಾಹನಗಳ ಮೇಲೆ ಭುವನೇಶ್ವರಿ ಚಿತ್ರವನ್ನಿಟ್ಟು ಮೆರವಣಿಗೆ ನಡೆಸಲಾಗುತ್ತದೆ.

ಸರ್ವಧರ್ಮದವರು ಸಂಭ್ರಮಿಸುವ ದಿನ:

ರಾಜ್ಯೋತ್ಸವವನ್ನು ಕರ್ನಾಟಕದಲ್ಲಿರುವ ಹಿಂದೂಗಳು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ಧರ್ಮಬೇಧವಿಲ್ಲದೆ ಆಚರಿಸುತ್ತಾರೆ. ಆಟೋ ರಿಕ್ಷಾಗಳು ಮತ್ತು ಇತರೆ ವಾಹನಗಳು ಕನ್ನಡ ಧ್ವಜದ ಬಣ್ಣಗಳಾದ ಕೆಂಪು ಮತ್ತು ಹಳದಿ ವರ್ಣಗಳ ಬಾವುಟ ದೊಂದಿಗೆ ಅಲಂಕರಿಸುತ್ತಾರೆ.

ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ:

ರಾಜ್ಯೋತ್ಸವದ ಪ್ರಯುಕ್ತ ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿಶ್ವದಾದ್ಯಂತ ಹಮ್ಮಿಕೊಳ್ಳಲಾಗುತ್ತದೆ. ರಾಜ್ಯದ ಮುಖ್ಯಮಂತ್ರಿ ಸಾಧಕರಿಗೆ ಈ ಪ್ರಶಸ್ತಿಯನ್ನು ವಿತರಿಸುತ್ತಾರೆ.

50ರ ರಾಜ್ಯೋತ್ಸವಕ್ಕೆ ಕನ್ನಡಾಂಬೆಗೆ ವಿಶೇಷ ನುಡಿ ನಮನ:

ಇಂದು 50ನೇ ವರ್ಷದ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ವಿಶೇಷವಾಗಿ ಈ ಬಾರಿ ನಾಡಿನ ಹೆಸರಾಂತ 5 ಕವಿಗಳು ರಚಿಸಿರುವ ಗೀತೆಗಳನ್ನು ರಾಜ್ಯೋತ್ಸವ ಸಮಾರಂಭದಲ್ಲಿ ಕಡ್ಡಾಯವಾಗಿ ಹಾಡುವ ಮೂಲಕ ನುಡಿ ನಮನ ಸಲ್ಲಿಸಲು ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ.

ಇದರನ್ವಯ ಹುಯಿಲಗೋಳ ನಾರಾಯಣರಾಯರು ರಚಿಸಿರುವ ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’, ಕುವೆಂಪು ರಚಿತ ‘ಎಲ್ಲಾದರು ಇರು ಎಂತಾದರು ಇರು’, ದ.ರಾ.ಬೇಂದ್ರ ರಚಿಸಿರುವ ‘ಒಂದೇ ಒಂದೇ ಕರ್ನಾಟಕ ಒಂದೇ’, ಸಿದ್ದಯ್ಯ ಪುರಾಣಿಕರು ರಚಿಸಿರುವ ‘ಹೊತ್ತಿತೋ ಹೊತ್ತಿತು ಕನ್ನಡದ ದೀಪ’, ಹಾಗೂ ಚನ್ನವೀರ ಕಣವಿ ಅವರು ಬರೆದಿರುವ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಎಂಬ 5 ಗೀತೆಗಳನ್ನು ಕಡ್ಡಾಯವಾಗಿ ಹಾಡುವಂತೆ ಸೂಚನೆ ನೀಡಲಾಗಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *