ಪಿಎಸ್‌ಐ ನೇಮಕಾತಿ ಅಕ್ರಮ ನೇಮಕಾತಿ ಪ್ರಕರಣ – ಇಂದು ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿರುವ ಹೈಕೋರ್ಟ್

ಪಿಎಸ್‌ಐ ನೇಮಕಾತಿ ಅಕ್ರಮ ನೇಮಕಾತಿ ಪ್ರಕರಣ – ಇಂದು ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿರುವ ಹೈಕೋರ್ಟ್

ನ್ಯೂಸ್ ಆ್ಯರೋ : ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಅಕ್ರಮ ಹಗರಣ ಸಂಬಂಧ ಮರುಪರೀಕ್ಷೆ ನಡೆಸುವ ಬಗ್ಗೆ ಇಂದು ಕರ್ನಾಟಕ ಹೈಕೋರ್ಟ್‌ ಮಹತ್ವದ ತೀರ್ಪು ನೀಡಲಿದೆ.

ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಹೊಸದಾಗಿ ಪರೀಕ್ಷೆ ನಡೆಸಲು ಹಿಂದಿನ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಈ ಆದೇಶವನ್ನು ರದ್ದುಪಡಿಸಿ ಎಂದು ಆಯ್ಕೆಯಾಗಿದ್ದ ಹಲವು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಗಳ ಕುರಿತ ತೀರ್ಪನ್ನು ಹೈಕೋರ್ಟ್ ಇಂದು ಪ್ರಕಟಿಸಲಿದ್ದು, ಪಿಎಸ್​ಐ ಆಗಿ ಆಯ್ಕೆಯಾಗಿದ್ದ ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.

ಸರ್ಕಾರದ ಆದೇಶ ರದ್ದು ಕೋರಿ ಎನ್.ವಿ.ಚಂದನ್ ಸೇರಿದಂತೆ ಪಿಎಸ್​​ಐ ಆಯ್ಕೆ ಪಟ್ಟಿಯಲ್ಲಿದ್ದ 100ಕ್ಕೂ ಹೆಚ್ಚು ಅಭ್ಯರ್ಥಿಗಳು ಸಲ್ಲಿಸಿರುವ ತಕರಾರು ಅರ್ಜಿಗಳ ವಿಚಾರಣೆಯನ್ನು 2023ರ ಅ.26ರಂದು ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಲಾಗಿದೆ. ನ್ಯಾಯಮೂರ್ತಿಗಳಾದ ಪಿ.ಎಸ್.ದಿನೇಶ್ ಕುಮಾರ್ ಅವರ ನೇತೃತ್ವದ ವಿಭಾಗೀಯ ಪೀಠ ಇಂದು ಮಧ್ಯಾಹ್ನ ಮಹತ್ವದ ತೀರ್ಪನ್ನು ನೀಡಲಿದೆ.

Related post

ಯಶ್ ಮೂವಿಯಲ್ಲಿ ಶೂರ್ಪನಖಿಯಾಗಿ ಮಿಂಚಲಿದ್ದಾರೆ ರಾಕುಲ್!

ಯಶ್ ಮೂವಿಯಲ್ಲಿ ಶೂರ್ಪನಖಿಯಾಗಿ ಮಿಂಚಲಿದ್ದಾರೆ ರಾಕುಲ್!

ನ್ಯೂಸ್ ಆರೋ: ಕೆಜಿಎಫ್ ನಂತರ ಹಿಟ್ ಸಿನಿಮಾಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿರುವ ಯಶ್ ಇದೀಗ ಮತ್ತೊಂದು ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಆ ಚಿತ್ರಕ್ಕೆ ಶೂರ್ಪನಖಿಯಾಗಿ ರಕುಲ್ ಕಾಣಿಸಿಕೊಳ್ಳಲಿದ್ದಾರೆ. ಹೌದು,ಶೂರ್ಪನಕಿಯಾಗಿ…
ಪಾಕ್ ಆಕ್ರಮಿತ ಕಾಶ್ಮೀರ ಜನರಿಗೆ ಬಂಪರ್ ಪ್ಯಾಕೇಜ್; ಆಹಾರ ಉತ್ಪನ್ನಗಳ- ವಿದ್ಯುತ್‌ ದರ ಇಳಿಕೆ ಮಾಡಿದ ಪಾಕ್‌ ಸರ್ಕಾರ

ಪಾಕ್ ಆಕ್ರಮಿತ ಕಾಶ್ಮೀರ ಜನರಿಗೆ ಬಂಪರ್ ಪ್ಯಾಕೇಜ್; ಆಹಾರ ಉತ್ಪನ್ನಗಳ- ವಿದ್ಯುತ್‌…

ನ್ಯೂಸ್ ಆರೋ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಜನರು ಭಾರತಕ್ಕೆ ಸೇರುತ್ತೇವೆ ಎಂದು ನಡೆಸುತ್ತಿದ್ದ ಪ್ರತಿಭಟನೆಗೆ ಪಾಕಿಸ್ತಾನದ ಸರ್ಕಾರ ಮಣಿದಿದೆ. ಹೌದು, ಜನರ ಪ್ರತಿಭಟನೆ ಬೆನ್ನಲ್ಲೇ ಪಾಕ್‌ ಆಕ್ರಮಿತ ಕಾಶ್ಮೀರದ…
ಸಂಜೆಯ ಸ್ನ್ಯಾಕ್ಸ್‌ಗೆ ಮಾಡಿ ರುಚಿರುಚಿಯಾದ ಗೋಧಿ ಉಸ್ಲಿ; ಆರೋಗ್ಯಕ್ಕೂ ಒಳ್ಳೆಯದು, ರುಚಿನೂ ಸೂಪರ್

ಸಂಜೆಯ ಸ್ನ್ಯಾಕ್ಸ್‌ಗೆ ಮಾಡಿ ರುಚಿರುಚಿಯಾದ ಗೋಧಿ ಉಸ್ಲಿ; ಆರೋಗ್ಯಕ್ಕೂ ಒಳ್ಳೆಯದು, ರುಚಿನೂ…

ನ್ಯೂಸ್ ಆರೋ: ಆರೋಗ್ಯಕ್ಕೆ ಹಿತ ಎನಿಸುವ ಹಾಗೂ ರುಚಿಕಟ್ಟಾದ ರೆಸಿಪಿಯೊಂದನ್ನು ನಾವಿಂದು ಹೇಳಿಕೊಡುತ್ತೇವೆ. ಈ ಗೋಧಿ ಉಸ್ಲಿ ರೆಸಿಪಿಯನ್ನು ನೀವು ಬೇಕೆಂದರೆ ಸ್ನ್ಯಾಕ್ಸ್ ಆಗಿಯೂ ಬೆಳಗ್ಗಿನ ಉಪಾಹಾರವಾಗಿಯೂ ಮಾಡಿ…

Leave a Reply

Your email address will not be published. Required fields are marked *