ವಾಯುಭಾರ ಕುಸಿತ : ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ

1000148322
Spread the love

ನ್ಯೂಸ್ ಆ್ಯರೋ : ಹವಾಮಾನ ವೈಪರಿತ್ಯದಿಂದ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದೆ. ಇದು ತೆಲಂಗಾಣ ಮತ್ತು ಕರ್ನಾಟಕದ ಕರಾವಳಿ ಭಾಗಗಳ ಮೇಲೆ ಹೆಚ್ಚು ಪ್ರಭಾವ ಬೀರಲಿದೆ.

ಈ ವಾಯು ಭಾರ ಕುಸಿತದಿಂದ ರಾಜ್ಯಾದ್ಯಂತ ಸೆ. 07 ರ ವರೆಗೆ ಭಾರೀ ಮಳೆಯಾಗಲಿದೆ. ಈ ವೈಪರಿತ್ಯ ಪ್ರಭಾದಿಂದಾಗಿ ಆಂಧ್ರ ಪ್ರದೇಶ, ಓಡಿಶಾ, ತೆಲಂಗಾಣ ರಾಜ್ಯಗಳಲ್ಲಿ ಅತ್ಯಧಿಕ ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಹ ಧಾರಾಕಾರ ಮಳೆಯಾಗಲಿದ್ದು, ಈ ಐದು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಕೂಡ ಸಾಧಾರಣ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

Leave a Comment

Leave a Reply

Your email address will not be published. Required fields are marked *

error: Content is protected !!