ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ನಳಿನ್ ಕುಮಾರ್ ಅಧಿಕೃತ ಅಭ್ಯರ್ಥಿ – ಪುತ್ತಿಲಗಿಲ್ಲ‌ ಅವಕಾಶ : ರಾಜ್ಯಾಧ್ಯಕ್ಷ ನೀಡಿದ ಸುಳಿವು ಏನದು?

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ನಳಿನ್ ಕುಮಾರ್ ಅಧಿಕೃತ ಅಭ್ಯರ್ಥಿ – ಪುತ್ತಿಲಗಿಲ್ಲ‌ ಅವಕಾಶ : ರಾಜ್ಯಾಧ್ಯಕ್ಷ ನೀಡಿದ ಸುಳಿವು ಏನದು?

ನ್ಯೂಸ್ ಆ್ಯರೋ : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದರನ್ನೇ ಕಣಕ್ಕಿಳಿಸುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬ್ಯಾಟ್ ಬೀಸಿದ್ದಾರೆ.

ಮಂಗಳೂರು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ವಿಜಯೇಂದ್ರ, ಮುಂದಿನ ಲೋಕಸಭಾ ಚುನಾವಣೆಯನ್ನು ನಾವು ಗಂಭೀರವಾಗಿ ತೆಗೆದುಕೊಳ್ಳಬೇಕಿದೆ. ಮತ್ತೊಮ್ಮೆ ನಮ್ಮ ಪಕ್ಷದ ಅಭ್ಯರ್ಥಿಯಾದ ನಳಿನ್ ಕುಮಾರ್ ಕಟೀಲ್ ಅವರನ್ನು ಗೆಲ್ಲಿಸುವ ಕೆಲಸ ಮಾಡಬೇಕಿದೆ ಎಂದು ನಳಿನ್ ಕಟೀಲ್ ಪರ ವಿಜಯೇಂದ್ರ ಬ್ಯಾಟಿಂಗ್ ಮಾಡಿದ್ದಾರೆ.

ಸದ್ಯ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಭಾರೀ ಗೊಂದಲದ ಗೂಡಾಗಿದ್ದು, ಹಿಂದು ಸಂಘಟನೆಗಳ ಮುಂಚೂಣಿ ನಾಯಕ, ಪುತ್ತಿಲ ಪರಿವಾರದ ಮುಖಂಡ ಅರುಣ್ ಪುತ್ತಿಲ ಬಿಜೆಪಿಯಿಂದ ಲೋಕಸಭೆ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಅದೇ ರೀತಿ ಹಲವರು ಸಂಸದ ಸ್ಥಾನದ ಟಿಕೆಟ್ ಗಾಗಿ ಬಿಜೆಪಿಯಲ್ಲಿ ಬೇಡಿಕೆಯಿಟ್ಟಿದ್ದಾರೆ.

ಈ ಮಧ್ಯೆ ಮತ್ತೆ ನಳಿನ್ ಗೆಲ್ಲಿಸಿ ಎಂದ ವಿಜಯೇಂದ್ರ ಕರೆ ಕೊಟ್ಟಿರುವುದು ಭಾರಿ ಕುತೂಹಲ ಕೆರಳಿಸಿದೆ. ಇನ್ನು ಭಾರತ ಆಸ್ಟ್ರೇಲಿಯಾ ಪಂದ್ಯ ವೇಳೆ ಪ್ರಧಾನಿ ಕ್ರೀಡಾಂಗಣಕ್ಕೆ ಕಾಲಿಟ್ಟ ಶಕುನದಿಂದಲೇ ಭಾರತ ಸೋತು ಸುಣ್ಣವಾಗಿದೆ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ವಿಜಯೇಂದ್ರ ಏಕವಚನದಲ್ಲಿಯೇ ರಾಹುಲ್ ವಿರುದ್ಧ ಕೆರಳಿಕೆಂಡವಾಗಿದ್ದಾರೆ.

ರಾಹುಲ್ ಗಾಂಧಿ ಹೇಳ್ತಾನೆ ನರೇಂದ್ರ ಮೋದಿ ಪಂದ್ಯ ವೀಕ್ಷಣೆಗೆ ಬಂದಿದ್ದು ಅಪಶಕುನ ಎಂದು. ಆದರೆ 50-60 ವರ್ಷದ ಕಾಂಗ್ರೆಸ್‌ ಆಡಳಿತಕ್ಕೆ ಇತಿಶ್ರೀ ಹಾಡಿದ್ದು ರಾಹುಲ್ ಗಾಂಧಿ. ರಾಹುಲ್ ಗಾಂಧಿ ಗೂ ರಾಹುಕಾಲಕ್ಕೂ ಏನೂ ವ್ಯತ್ಯಾಸವಿಲ್ಲ. ರಾಹುಲ್ ಗಾಂಧಿ ಜವಾಬ್ದಾರಿ ವಹಿಸಿಕೊಂಡ ಬಳಿಕ ಕಾಂಗ್ರೆಸ್ ಗೆ ರಾಹುಕಾಲ ಆರಂಭವಾಗಿದೆ. ಯಾವಾಗ ಅವ್ರು ಪಕ್ಷದ ಜವಾಬ್ದಾರಿ ತೆಗೆದುಕೊಂಡರೋ ಅಂದಿನಿಂದ ಕಾಂಗ್ರೆಸ್ ಗೆ ರಾಹುಕಾಲ ಆರಂಭವಾಗಿದೆ ಎಂದು ವ್ಯಂಗ್ಯವಾಡಿದರು. ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನ ಮಂತ್ರಿಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

Related post

7 ದಿನ ಪರಪ್ಪನ ಅಗ್ರಹಾರ ಕಾರಾಗೃಹದ ಪಾಲಾದ ಮಾಜಿ ಸಚಿವ ಎಚ್. ಡಿ. ರೇವಣ್ಣ; ಮೇ 14 ರವರೆಗೆ ನ್ಯಾಯಾಂಗ ಬಂಧನ

7 ದಿನ ಪರಪ್ಪನ ಅಗ್ರಹಾರ ಕಾರಾಗೃಹದ ಪಾಲಾದ ಮಾಜಿ ಸಚಿವ ಎಚ್.…

ನ್ಯೂಸ್ ಆ್ಯರೋ : ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ (Hassan Pen Drive) ಹಾಗೂ ಸಂತ್ರಸ್ತೆಯನ್ನು…
TECH TIPS: ಕಿರಿಕಿರಿ ನೀಡುವ ಸ್ಪ್ಯಾಮ್ ಕರೆಗಳಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ..!

TECH TIPS: ಕಿರಿಕಿರಿ ನೀಡುವ ಸ್ಪ್ಯಾಮ್ ಕರೆಗಳಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ..!

ನ್ಯೂಸ್ ಆ್ಯರೋ : ಮನಸ್ಸಿಗೆ ಕಿರಿಕಿರಿ ನೀಡುವ ಮತ್ತು ತಮ್ಮ ಕೆಲಸದ ವೇಳೆಯಲ್ಲಿ ಅಡಚಣೆ ಉಂಟು ಮಾಡುವ ಸ್ಪ್ಯಾಮ್ ಕರೆಗಳನ್ನು (Spam call) ತಡೆಯುವುದು ಇಂದು ದೊಡ್ಡ ಸಾಹಸ…
ಡ್ರೈ ಸ್ಕಿನ್ ಸಮಸ್ಯೆಗೆ ಸೌತೆಕಾಯಿ ಫೇಸ್ ಪ್ಯಾಕ್ ಬೆಸ್ಟ್; ನೀವೂ ಟ್ರೈ ಮಾಡಿ

ಡ್ರೈ ಸ್ಕಿನ್ ಸಮಸ್ಯೆಗೆ ಸೌತೆಕಾಯಿ ಫೇಸ್ ಪ್ಯಾಕ್ ಬೆಸ್ಟ್; ನೀವೂ ಟ್ರೈ…

ನ್ಯೂಸ್ ಆ್ಯರೋ : ಅಡುಗೆ, ಸಲಾಡ್, ಜ್ಯೂಸ್​ನಲ್ಲೂ ಬಳಸುವ ಸೌತೆಕಾಯಿಗಳು ಸೌಂದರ್ಯದ ದೃಷ್ಟಿಯಿಂದಲೂ ಬಹಳ ಕೊಡುಗೆ ನೀಡುತ್ತವೆ. ಈ ಪೌಷ್ಟಿಕ ತರಕಾರಿ ನಿಮ್ಮ ಚರ್ಮಕ್ಕೆ ಚಿಕಿತ್ಸೆ ನೀಡಲು ಉತ್ತಮ…

Leave a Reply

Your email address will not be published. Required fields are marked *