ಅಯ್ಯಪ್ಪ ಮಾಲಾಧಾರಿಗಳಿಗೆ ಗುಡ್ ನ್ಯೂಸ್..! – ಶಬರಿಗಿರಿ ದರ್ಶನದ ಸಮಯ ಒಂದು ಗಂಟೆ ವಿಸ್ತರಣೆ..!

ಅಯ್ಯಪ್ಪ ಮಾಲಾಧಾರಿಗಳಿಗೆ ಗುಡ್ ನ್ಯೂಸ್..! – ಶಬರಿಗಿರಿ ದರ್ಶನದ ಸಮಯ ಒಂದು ಗಂಟೆ ವಿಸ್ತರಣೆ..!

ನ್ಯೂಸ್ ಆ್ಯರೋ : ಇನ್ನೇನೋ ಮಕರ ಸಂಕ್ರಾಂತಿ ದಿನ ಸಮೀಪಿಸುತ್ತಿದೆ. ಹೊಸ ವರ್ಷದ ಪ್ರಾರಂಭದಲ್ಲಿ ಅಯ್ಯಪ್ಪ ಮಾಲಾಧಾರಿಗಳು ಶಬರಿಮಲೆಗೆ ಹೋಗಿ ಜ್ಯೋತಿ ವೀಕ್ಷಿಸುತ್ತಾರೆ. ಇರುಮುಡಿ ಹೊತ್ತು ಅನೇಕ ಕಡೆಗಳಿಂದ ಅಲ್ಲಿಗೆ ಸಾಗಿ ಬರುತ್ತಾರೆ. ಇದೀಗ ಅವರಿಗೆ ಒಂದು ಶುಭಸುದ್ದಿ ಕೇಳಿಬಂದಿದೆ.

ದೇವರ ದರ್ಶನಕ್ಕೆ 1ಗಂಟೆ ವಿಸ್ತರಣೆ:

ತಿರುವಾಂಕೂರು ದೇವಸ್ಥಾನಂ ಮಂಡಳಿ ಅಯ್ಯಪ್ಪ ಭಕ್ತರಿಗೆ ಸಿಹಿಸುದ್ದಿ ನೀಡಿದೆ. ಶಬರಿಗಿರಿಯ ದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರಿಂದ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ದರ್ಶನ ಸಮಯವನ್ನು ಇನ್ನೂ ಒಂದು ಗಂಟೆ ಕಾಲ ವಿಸ್ತರಿಸಲಾಗಿದೆ.

ಪ್ರತಿದಿನ ಸಂಜೆ 4 ರಿಂದ ರಾತ್ರಿ 11ರ ವರೆಗೆ ಭಕ್ತರು ದೇಗುಲಕ್ಕೆ ಭೇಟಿ ನೀಡುವ ಸಮಯವಾಗಿತ್ತು. ಆದ್ರೆ ಈಗ ಮಧ್ಯಾಹ್ನ 3 ರಿಂದ ದೇಗುಲಕ್ಕೆ ಭೇಟಿ ನೀಡಬಹುದು ಎಂದು ಅವರು ಹೇಳಿದರು. ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ಕಾಯುವ ಭಕ್ತರಿಗೆ ನೀರು, ಬಿಸ್ಕತ್‌ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಮತ್ತೊಂದೆಡೆ, ದಿನಕ್ಕೆ 75 ಸಾವಿರ ಭಕ್ತರಿಗೆ ಮಾತ್ರ ಅವಕಾಶ ನೀಡುವಂತೆ ಟಿಡಿಬಿಗೆ ಮನವಿ ಮಾಡಲಾಗಿದೆ. ವರ್ಚುವಲ್ ಕ್ಯೂ ಮೂಲಕ ನಿತ್ಯ 90 ಸಾವಿರ ಹಾಗೂ ಸ್ಪಾಟ್ ಬುಕ್ಕಿಂಗ್ ಮೂಲಕ ಸುಮಾರು 30 ಸಾವಿರ ಬುಕ್ಕಿಂಗ್ ಆಗುತ್ತಿದ್ದು, ಭಕ್ತರ ಸಂಖ್ಯೆ ಹೆಚ್ಚಿದೆ. ಶಬರಿಮಲೆಗೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು, ಮಹಿಳೆಯರು, ವೃದ್ಧರು ಆಗಮಿಸುತ್ತಿರುವುದು ಬಯಲಾಗಿದೆ.

ಆಧ್ಯಾತ್ಮಿಕವಾಗಿ ಪರಿಗಣಿಸಲ್ಪಟ್ಟಿರುವ 18 ಮೆಟ್ಟಿಲುಗಳನ್ನು ಹತ್ತಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದು ಐಜಿ ಸ್ಪರ್ಜನ್ ಕುಮಾರ್ ಹೇಳಿದ್ದಾರೆ. ಇನ್ನು ಮಂಡಲ ಪೂಜೆಗಾಗಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ನವೆಂಬರ್ 16 ರಂದು ಸಂಜೆ ತೆರೆಯಲಾಯಿತು. ನವೆಂಬರ್ 17 ರಂದು ಸ್ವಾಮಿಯ ದರ್ಶನ ಪ್ರಾರಂಭವಾಯಿತು. ಆಗ ಮಂಡಲ ಮಕರವಿಳಕ್ಕು ಆಚರಣೆಯೂ ಆರಂಭವಾಯಿತು. ಎರಡು ತಿಂಗಳ ಕಾಲ ನಡೆಯುವ ಮಣಿಕಂಠನ ಮಹಾದರ್ಶನಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಈ ಬಾರಿ ರಾಜ್ಯ ಸರ್ಕಾರವು ಬೆಟ್ಟದಲ್ಲಿ ಭಕ್ತರ ಸುರಕ್ಷಿತ ದರ್ಶನಕ್ಕಾಗಿ ಡೈನಾಮಿಕ್ ಕ್ಯೂ-ಕಂಟ್ರೋಲ್ ವ್ಯವಸ್ಥೆಯನ್ನು ಪರಿಚಯಿಸಿದೆ.

ಶಬರಿಮಲೆಯ ವ್ಯವಸ್ಥೆಯ ಬಗ್ಗೆ ವಿರೋಧ ವ್ಯಕ್ತವಾಗಿತ್ತು..!

ಸರತಿ ಸಾಲಿನಲ್ಲಿ ಕಾಯುವ ಅಯ್ಯಪ್ಪ ಭಕ್ತರಿಗೆ ಸೌಲಭ್ಯ ಸರಿಯಾಗಿಲ್ಲ. ನೀರಿನ ವ್ಯವಸ್ಥೆ ಮಾಡುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ವಿ ಡಿ ಸತೀಶನ್ ಆರೋಪಿಸಿದ್ದರು. “ಭಕ್ತರು ದರ್ಶನಕ್ಕೆ 15 ರಿಂದ 20 ಗಂಟೆಗಳ ಕಾಲ ಕಾಯಬೇಕಾಗಿದೆ. ಶಬರಿಮಲೆಯಲ್ಲಿ ಸಾಕಷ್ಟು ಪೊಲೀಸರನ್ನು ನಿಯೋಜಿಸಲಾಗಿಲ್ಲ. ಯಾತ್ರಾರ್ಥಿಗಳ ವ್ಯವಸ್ಥೆಗೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ನೀಡಿದ ಮಾರ್ಗಸೂಚಿಗಳು ಅನುಷ್ಠಾನಗೊಳ್ಳುತ್ತಿಲ್ಲ. ಸಮರ್ಪಕ ಆಂಬ್ಯುಲೆನ್ಸ್ ಸೇವೆಯೂ ಲಭ್ಯವಿಲ್ಲ,” ಎಂದು ವಿ ಡಿ ಸತೀಶನ್ ಧ್ವನಿ ಎತ್ತಿದ್ದರು.

ರಾಜ್ಯ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಶಬರಿಮಲೆಯಲ್ಲಿ ಭಕ್ತರು ತೀವ್ರ ತೊಂದರೆ ಎದುರಿಸಬೇಕಾಗುತ್ತದೆ ಎಂದು ವಿ ಡಿ ಸತೀಶನ್ ಹೇಳಿದ್ದಾರೆ. ಈ ವಿಷಯವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿ ಮಾಡಿದ್ದರು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *