3,500‌ ಕಿ.ಮೀ ದೂರದ ಥೈಲ್ಯಾಂಡ್‌ನಿಂದ ಅಯೋಧ್ಯೆ ರಾಮಮಂದಿರಕ್ಕೆ ಬರಲಿದೆ ಮಣ್ಣು – ಇದಕ್ಕೆ ಕಾರಣ ಏನ್ ಗೊತ್ತಾ?

3,500‌ ಕಿ.ಮೀ ದೂರದ ಥೈಲ್ಯಾಂಡ್‌ನಿಂದ ಅಯೋಧ್ಯೆ ರಾಮಮಂದಿರಕ್ಕೆ ಬರಲಿದೆ ಮಣ್ಣು – ಇದಕ್ಕೆ ಕಾರಣ ಏನ್ ಗೊತ್ತಾ?

ನ್ಯೂಸ್ ಆ್ಯರೋ : ಭಾರತದಲ್ಲಿ ನಿರ್ಮಾಣಗೊಳ್ಳುತ್ತಿರುವ ಐತಿಹಾಸಿಕ ರಾಮಮಂದಿರ‌ನಿ ರ್ಮಾಣಕ್ಕೆ ಇನ್ನೊಂದೇ ತಿಂಗಳು ಬಾಕಿ ಇದೆ. ರಾಮಮಂದಿರದ ಕಾಮಗಾರಿಯೂ ಸಮರೋಪಾದಿಯಲ್ಲಿ ನಡೆಯುತ್ತಿದೆ. ಈ ನಡುವೆ ರಾಮಮಂದಿರಕ್ಕೆ 3,500 ಕಿ.ಮೀ ದೂರದ ಥೈಲ್ಯಾಂಡ್ ಅಯುತಾಯ ನಗರದಿಂದ ವಿಶೇಷ ಮಣ್ಣನ್ನು ತರಲಾಗುತ್ತಿದೆ. ಇಷ್ಟೊಂದು ದೂರದಿಂದ ಮಣ್ಣನ್ನು‌ ತರಲು ಕಾರಣವೇನು? ಭಾರತದ ಹಾಗೂ ಥೈಲ್ಯಾಂಡ್ ನಡುವೆ ಇರುವ ಐತಿಹಾಸಿಕ ಸಂಬಂಧ ಎಂತಹದ್ದು? ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ.

ಭಾರತದೊಂದಿಗೆ ಥೈಲ್ಯಾಂಡ್ ಐತಿಹಾಸಿಕ‌ ಸಂಬಂಧ!

ಥೈಲ್ಯಾಂಡ್‌ನ ಸಿಯಾಮ್ ಸಾಮ್ರಾಜ್ಯದಲ್ಲಿರುವ ಅಯುತಾಯಾವನ್ನು 13ನೇ ಶತಮಾನದಲ್ಲಿ ಸ್ಥಾಪಿಸಲಾಗಿದೆ ಎನ್ನಲಾಗುತ್ತದೆ. ಸಿಯಾಮ್ ಸಾಮ್ರಾಜ್ಯದ ರಾಜಧಾನಿ ಮತ್ತು ಆರ್ಥಿಕ ಕೇಂದ್ರವೂ ಆಗಿತ್ತು. ಆದರೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಥೈಲ್ಯಾಂಡ್‌ನಿಂದ ಈ ರೀತಿ ಮಣ್ಣು ಕಳುಹಿಸುತ್ತಿರುವುದು ಇದೇ ಮೊದಲಲ್ಲ.

ಈ ಹಿಂದೆ ರಾಮ ಮಂದಿರಕ್ಕಾಗಿ ಥೈಲ್ಯಾಂಡ್‌ನಿಂದ ವಿಶೇಷ ನೀರನ್ನು ಕಳುಹಿಸಲಾಗಿತ್ತು. ಈ ಕ್ರಿಯೆಯು ಥೈಲ್ಯಾಂಡ್ ಮತ್ತು ಭಾರತದ ನಡುವಿನ ಅನನ್ಯ ಸಾಂಸ್ಕೃತಿಕ ಸಂಬಂಧಗಳಿಂದ ಹುಟ್ಟಿಕೊಂಡಿದೆ. ಇದು ಮುಂದಿನ ದಿನಗಳಲ್ಲಿ ಮತ್ತಷ್ಟು ಆಳವಾಗಲಿದೆ. ವಿಶ್ವ ಹಿಂದೂ ಪರಿಷತ್ ಕೈಗೊಂಡ ಉಪಕ್ರಮ ಮತ್ತು ವಿಎಚ್‌ಪಿಯ ಥೈಲ್ಯಾಂಡ್ ಅಧ್ಯಾಯದ ಅಧ್ಯಕ್ಷ ಸುಶೀಲ್‌ಕುಮಾರ್ ಸರಾಫ್ ಅವರ ಸಹಾಯದಿಂದ ಇದು ಸಾಧ್ಯವಾಗಿದೆ.

ಸ್ವಾಮಿ ವಿಜ್ಞಾನಂದ ಹೇಳಿದ್ದಿಷ್ಟು!

ಈ ಬಗ್ಗೆ ಮಾತನಾಡಿರುವ ಸ್ವಾಮಿ ವಿಜ್ಞಾನಂದರು, ‘ಥೈಲ್ಯಾಂಡ್‌ನ ಹಲವಾರು ರಾಜರು ರಾಮನ ವಂಶಸ್ಥರ ಭಾಗವಾಗಿದ್ದಾರೆ. ಇಲ್ಲಿರುವ ಪ್ರತಿಯೊಬ್ಬ ರಾಜನಿಗೂ ಅವರ ಹೆಸರಿನಲ್ಲಿ ರಾಮನ ಬಿರುದು ಇರುವುದನ್ನು ಗಮನಿಸಬಹುದು.

ಥಾಯ್ಲೆಂಡ್‌ನ ರಾಜಧಾನಿ ಬ್ಯಾಂಕಾಕ್ ಶ್ರೀಮಂತ ಹಿಂದೂ ಸಾಂಸ್ಕೃತಿಕ ಪರಂಪರೆಗೆ ನೆಲೆಯಾಗಿದೆ. ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಪನೆಗೆ ಸಾಕ್ಷಿಯಾಗುವ 51 ದೇಶಗಳನ್ನು ನಾವು ಗುರುತಿಸಿದ್ದೇವೆ. ಸಮಾರಂಭವನ್ನು ಬ್ಯಾಂಕಾಕ್‌ನಲ್ಲಿ ನೇರಪ್ರಸಾರ ಮಾಡಲಾಗುವುದು ಮತ್ತು ಪ್ರಪಂಚದಾದ್ಯಂತದ ಹಿಂದೂಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ’ ಎಂದು ತಿಳಿಸಿದ್ದಾರೆ.

ಯಾಕಾಗಿ ಥೈಲ್ಯಾಂಡ್ ಮಣ್ಣು!

ಸದ್ಯ, ಭಾರತದಲ್ಲಿ ನಿರ್ಮಾಣಗೊಳ್ಳುತ್ತಿರುವ ಭವ್ಯವಾದ ಶ್ರೀರಾಮಮಂದಿರ 2024ರ‌ ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ಲೋಕಾರ್ಪಣೆಗೊಳ್ಳಲಿದೆ. ಇದೀಗ ಈ ಉದ್ಘಾಟನಾ ಸಮಾರಂಭಕ್ಕೆ ಥೈಲ್ಯಾಂಡ್ ಮಣ್ಣನ್ನು ತರಿಸಲಾಗುತ್ತಿದ್ದು, ಉದ್ಘಾಟನೆಯ ವೇಳೆ ಈ ಮಣ್ಣನ್ನು ವಿಶೇಷವಾಗಿ ಬಳಸಲಾಗುತ್ತದೆ ಎನ್ನಲಾಗಿದೆ.

ಇದರೊಂದಿಗೆ 51 ದೇಶಗಳಿಗೆ ಆಮಂತ್ರಣ ನೀಡಲಾಗಿದ್ದು, ಇದರೊಂದಿಗೆ ಪ್ರಪಂಚದ ಪ್ರಮುಖ ವ್ಯಕ್ತಿಗಳನ್ನು ಕೂಡ ಆಹ್ವಾನಿಸಲಾಗಿದೆ. ಒಟ್ಟಾರೆಯಾಗಿ ಅಯೋಧ್ಯೆಯ ಶ್ರೀರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮವು ಭಾರತೀಯ ಇತಿಹಾಸದಲ್ಲಿ ಪ್ರಮುಖ ಎನಿಸಿಕೊಳ್ಳುವುದಂತೂ ಸುಳ್ಳಲ್ಲ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *