Nandini Milk Price Hike : ನಾನು ನಂದಿನಿ, ಮತ್ತೆ ಕಾಸ್ಟ್ಲೀ ಆಗ್ತೀನಿ..!! – ಹೊಸ ವರ್ಷಕ್ಕೆ ದರ ಏರಿಸಲು ಸರ್ಕಾರದ ಚಿಂತನೆ

Nandini Milk Price Hike : ನಾನು ನಂದಿನಿ, ಮತ್ತೆ ಕಾಸ್ಟ್ಲೀ ಆಗ್ತೀನಿ..!! – ಹೊಸ ವರ್ಷಕ್ಕೆ ದರ ಏರಿಸಲು ಸರ್ಕಾರದ ಚಿಂತನೆ

ನ್ಯೂಸ್ ಆ್ಯರೋ : ನೂತನ ವರ್ಷಕ್ಕೆ ನಂದಿನಿ ಉತ್ಪನ್ನಗಳ ದರ ಏರಿಕೆಯಾಗುವ ಸಾಧ್ಯತೆ ಇದೆ. ಹಾಲು, ಮೊಸರು (Nandini Milk, Curd) ದರ ಹೆಚ್ಚುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಕುರಿತು ಅಧಿವೇಶನದಲ್ಲಿ (Belagavi Session) ಸರ್ಕಾರ ದರ ಏರಿಸುವ ಸಾಧ್ಯತೆ ಬಗ್ಗೆ ಸೂಚನೆ ನೀಡಿದೆ.

ನಂದಿನಿ ಹಾಲಿನ ದರ ಹೆಚ್ಚಳ ಕುರಿತು ಮಾಲೂರು ಶಾಸಕ ಕೆ.ವೈ ನಂಜೇಗೌಡ ಅವರ ಪ್ರಶ್ನೆಗೆ ಪಶು ಸಂಗೋಪನೆ ಖಾತೆ ಸಚಿವ ಕೆ. ವೆಂಕಟೇಶ್ ಉತ್ತರ ನೀಡಿದ್ದು, ಹಾಲಿನ ದರ ಏರಿಕೆ ಪ್ರಸ್ತಾಪ ಪರಿಶೀಲನೆಯಲ್ಲಿದೆ ಎಂದು ತಿಳಿಸಿದ್ದಾರೆ. ಇತರೆ ಖಾಸಗಿ ಬ್ರ್ಯಾಂಡ್‌ಗಳ ದರಕ್ಕಿಂತ ನಂದಿನಿ ಬ್ರ್ಯಾಂಡ್‌ಗಳ ದರ 10-12 ರೂ. ಕಡಿಮೆ ಇದೆ. ಹಾಲು ಉತ್ಪಾದಕರು, ಒಕ್ಕೂಟಗಳು ನಷ್ಟದಲ್ಲಿದ್ದು, ಗ್ರಾಹಕರಿಗೆ ಹೊರೆಯಾಗದಂತೆ ದರ ಹೆಚ್ಚಿಸುವುದಾಗಿ ತಿಳಿಸಿದ್ದಾರೆ.

ಕಳೆದ ಆಗಸ್ಟ್ 1ರಿಂದ ಹಾಲಿನ ದರದಲ್ಲಿ 3 ರೂ.ಗಳಷ್ಟು ಹೆಚ್ಚಳ ಮಾಡಲಾಗಿತ್ತು. ಮೊಸರಿನ ದರ ಸೇರಿದಂತೆ ಇನ್ನಿತರ ಉತ್ಪನ್ನಗಳ ದರವನ್ನು ಏರಿಸಲಾಗಿತ್ತು. ಮತ್ತೆ ನಾಲ್ಕೇ ತಿಂಗಳಲ್ಲಿ ಮತ್ತೊಂದು ದರ ಹೆಚ್ಚಳ ಶಾಕ್ ಕೊಡಲು ಸರ್ಕಾರ ಮುಂದಾಗಿದೆ. ಮತ್ತೆ ನಂದಿನಿ ಹಾಲಿನ ದರ ಏರಿಕೆ ಮಾಡುವ ಬಗ್ಗೆ ಕೆಎಂಎಫ್‌ (KMF) ಚಿಂತನೆ ನಡೆಸಿದೆ. ಸರ್ಕಾರ ಒಪ್ಪಿದಂತಿದೆ. ಆದರೆ ಎಷ್ಟು ರೂಪಾಯಿ ಏರಿಕೆ ಆಗಲಿದೆ ಎಂಬುದು ಮಾತ್ರ ಇನ್ನೂ ನಿರ್ಧಾರ ಆಗಿಲ್ಲ.

ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF) ಕಳೆದ ಬಾರಿ ತೀರ್ಮಾನ ತೆಗೆದುಕೊಳ್ಳಲು 14 ಹಾಲು ಒಕ್ಕೂಟಗಳ ಮನವಿ ಕಾರಣವಾಗಿತ್ತು. ಕಳೆದ ಬಾರಿ 5 ರೂಪಾಯಿ ಹೆಚ್ಚಳ ಮಾಡುವ ಪ್ರಸ್ತಾಪ ಇದ್ದರೂ, ವ್ಯಾಪಕ ವಿರೋಧ ವ್ಯಕ್ತವಾಗಿದ್ದರಿಂದ 3 ರೂಪಾಯಿ ಹೆಚ್ಚಳ ಮಾಡಿ ಆದೇಶಿಸಲಾಗಿತ್ತು. ಈ 3 ರೂಪಾಯಿಯನ್ನು ನೇರವಾಗಿ ರೈತರಿಗೆ ನೀಡುವಂತೆ ಸೂಚಿಸಲಾಗಿತ್ತು. ಇದು ಹಾಲು ಒಕ್ಕೂಟಗಳಿಗೆ ಹೊಡೆತ ನೀಡಿತ್ತು. ಹಾಲು ಒಕ್ಕೂಟಗಳಿಗೆ ಆಗುತ್ತಿದ್ದ ನಷ್ಟವನ್ನು ಸರಿದೂಗಿಸಲು ದರ ಪರಿಷ್ಕರಣೆ ಅನಿವಾರ್ಯ ಎಂದು ಕೆಎಂಎಫ್‌ಗೆ ಮನವಿ ಸಲ್ಲಿಸಲಾಗಿತ್ತು. ಹೀಗಾಗಿ ಉನ್ನತ ಮಟ್ಟದಲ್ಲಿ ದರ ಏರಿಕೆ ಚರ್ಚೆಗಳು ನಡೆದಿವೆ.

ಈ ಸಂಬಂಧ ಜನವರಿಯಲ್ಲಿ 14 ಹಾಲು ಒಕ್ಕೂಟಗಳ ಸಭೆ ಕರೆಯಲು ಕೆಎಂಎಫ್‌ ಚಿಂತನೆ ನಡೆಸಿದೆ ಎನ್ನಲಾಗಿದೆ. ಇಲ್ಲಿ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಸಿ ವರದಿ ಸಿದ್ಧಪಡಿಸಿ, ಬಳಿಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವ ಆಲೋಚನೆಯಲ್ಲಿ ಕೆಎಂಎಫ್ ಇದೆ ಎನ್ನಲಾಗಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *