ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ, ಚಂಡಮಾರುತ ಭೀತಿ – ಕರಾವಳಿಯಲ್ಲಿ ಮುಂದಿನ 3-4 ದಿನ ಗುಡುಗು ಸಹಿತ ಮಳೆಯ ಮುನ್ಸೂಚನೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ, ಚಂಡಮಾರುತ ಭೀತಿ – ಕರಾವಳಿಯಲ್ಲಿ ಮುಂದಿನ 3-4 ದಿನ ಗುಡುಗು ಸಹಿತ ಮಳೆಯ ಮುನ್ಸೂಚನೆ

ನ್ಯೂಸ್ ಆ್ಯರೋ : ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯ ವಿವಿಧೆಡೆ ಬುಧವಾರ ರಾತ್ರಿ ಮತ್ತು ಇಂದು ಬೆಳಗ್ಗೆ ಮಳೆ ಸುರಿಯುತ್ತಿದ್ದು, ಸೆಕೆಯಿಂದ ಬಳಲುತ್ತಿದ್ದ ಜನರಿಗೆ ಈ ದಿಢೀರ್‌ ಮಳೆ ತಂಪೆರೆದಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಈ ಮಳೆ ಬಂದಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಬಂಟ್ವಾಳ, ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ ತಾಲೂಕುಗಳ ಹಲವೆಡೆ ಬುಧವಾರ ರಾತ್ರಿಯಿಂದಲೇ ಗುಡುಗು ಮಿಂಚು ಸಹಿತ ಎಡೆಬಿಡದೆ ಸುರಿದಿದೆ. ಬಂಟ್ವಾಳ ತಾಲೂಕಿನ ಸಜಿಪ, ಇರಾ, ಮಂಚಿ, ಮುಡಿಪು ಭಾಗದಲ್ಲಿ ಭಾರೀ ಮಳೆಯಾಗಿದೆ. ಉಳ್ಳಾಲ ತಾಲೂಕಿನ ಕೊಣಾಜೆ, ಬೀರಿ, ತಲಪಾಡಿ, ಕೋಟೆಕಾರ್‌, ತೊಕ್ಕೊಟ್ಟು ಪ್ರದೇಶಗಳಲ್ಲಿ ಇಂದು ಬೆಳಗ್ಗೆ ಉತ್ತಮ ಮಳೆ ಬಂದಿದೆ.

ಬಹುಪಾಲು ಮಂಗಳೂರು ನಗರದಲ್ಲಿಯೂ ಸಾಧಾರಣ ಮಳೆಯಾಗಿದೆ. ಜಿಲ್ಲೆಯಲ್ಲಿ ನಿನ್ನೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಇವತ್ತು ಕೂಡಾ ಅದೇ ಪರಿಸ್ಥಿತಿ ಇದೆ. ಮೋಡ ಕವಿದ ವಾತಾವರಣದಿಂದಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ವಿಮಾನಗಳು ಇಳಿಯಲು ಕಷ್ಟ ಸಾಧ್ಯವಾಗಿತ್ತು. ಹವಾಮಾನ ಇಲಾಖೆಯು ಮುಂದಿನ 3-4 ದಿನ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ದಕ್ಷಿಣ ತಮಿಳುನಾಡು, ಕೇರಳ, ಕರ್ನಾಟಕದ ಕರಾವಳಿ ಮತ್ತು ಲಕ್ಷದ್ವೀಪದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆಯೂ ಇದೆ. ಸಮುದ್ರದಲ್ಲಿ ಗಂಟೆಗೆ 40 ರಿಂದ 55 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *