Loksabha Election : ಕರ್ನಾಟಕದ 20 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್ – ಎಂಟು ಹಾಲಿ ಸಂಸದರಿಗೆ ಕೊಕ್ : ನಳಿನ್, ಪ್ರತಾಪ್ ಸಿಂಹಗಿಲ್ಲ ಅದೃಷ್ಟ…!!

Loksabha Election : ಕರ್ನಾಟಕದ 20 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್ – ಎಂಟು ಹಾಲಿ ಸಂಸದರಿಗೆ ಕೊಕ್ : ನಳಿನ್, ಪ್ರತಾಪ್ ಸಿಂಹಗಿಲ್ಲ ಅದೃಷ್ಟ…!!

ನ್ಯೂಸ್ ಆ್ಯರೋ ‌: ಭಾರೀ ನಿರೀಕ್ಷೆ ಮೂಡಿಸಿದ್ದ ಬಿಜೆಪಿಯ ಲೋಕಸಭಾ ಅಭ್ಯರ್ಥಿಗಳ ದ್ವಿತೀಯ ಪಟ್ಟಿ ಬಿಡುಗಡೆಯಾಗಿದ್ದು, ಕರ್ನಾಟಕದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಂಡಿದೆ.

ಬಿಜೆಪಿಯ ಒಟ್ಟು 8 ಹಾಲಿ ಸದಸ್ಯರಿಗೆ ಈ ಬಾರಿ ಟಿಕೆಟ್‌ ತಪ್ಪಿದ್ದು, ಮೈಸೂರು ಸಂಸದ ಪ್ರತಾಪ್‌ ಸಿಂಹ, ಡಿವಿ ಸದಾನಂದ ಗೌಡ, ಕರಡಿ ಸಂಗಣ್ಣ, ಶಿವಕುಮಾರ್‌ ಉದಾಸಿ, ಜಿಎಸ್‌ ಬಸವರಾಜು ಅವರಿಗೆ ಟಿಕೆಟ್‌ ತಪ್ಪಿದೆ. ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಿಜೆಪಿ ಟಿಕೆಟ್ ಇನ್ನೂ ಘೋಷಣೆಯಾಗಿಲ್ಲ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಬ್ರಿಜೇಶ್ ಚೌಟ ಹೆಸರು ಅಂತಿಮಗೊಂಡಿದ್ದು, ನಳಿನ್ ಕುಮಾರ್ ಕಟೀಲ್ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಬ್ರಿಜೇಶ್ ಚೌಟ ಅವರಿಗೆ ಟಿಕೆಟ್ ಸಿಗುವ ಬಗ್ಗೆ ನಿನ್ನೆಯೇ ನ್ಯೂಸ್ ಆ್ಯರೋ ವರದಿ ಪ್ರಸಾರ ಮಾಡಿದ್ದು, ಆ ವರದಿ ಸದ್ಯ ನಿಜವಾಗಿದೆ.

ಟಿಕೆಟ್ ಪಡೆದವರ ಪಟ್ಟಿ..

ಬಿಜಾಪುರ- ರಮೇಶ್ ಜಿಗಜಿಣಗಿ
ಚಿಕ್ಕೋಡಿ- ಅಣ್ಣಾ ಸಾಹೇಬ್ ಜೊಲ್ಲೆ
ಬಾಗಲಕೋಟೆ- ಪಿ.ಸಿ. ಗದ್ದಿಗೌಡರ
ಕಲಬುರಗಿ- ಉಮೇಶ್ ಜಾಧವ್
ಬೀದರ್- ಭಗವಂತ ಖೂಬಾ
ಕೊಪ್ಪಳ- ಡಾ. ಬಸವರಾಜ ಕ್ಯಾವತೋರ್
ಬಳ್ಳಾರಿ- ಶ್ರೀರಾಮುಲು
ಹಾವೇರಿ- ಬಸವರಾಜ ಬೊಮ್ಮಾಯಿ
ಧಾರವಾಡ- ಪ್ರಹ್ಲಾದ್ ಜೋಶಿ
ದಾವಣಗೆರೆ- ಗಾಯತ್ರಿ ಸಿದ್ದೇಶ್ವರ
ಶಿವಮೊಗ್ಗ- ಬಿ.ವೈ. ರಾಘವೇಂದ್ರ
ಉಡುಪಿ-ಚಿಕ್ಕಮಗಳೂರು- ಕೋಟಾ ಶ್ರೀನಿವಾಸ ಪೂಜಾರಿ
ದಕ್ಷಿಣ ಕನ್ನಡ – ಕ್ಯಾ.ಬ್ರಿಜೇಶ್ ಚೌಟಾ
ತುಮಕೂರು – ವಿ. ಸೋಮಣ್ಣ
ಮೈಸೂರು- ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
ಚಾಮರಾಜನಗರ- ಎಸ್. ಬಸವರಾಜು
ಬೆಂಗಳೂರು ಗ್ರಾಮಾಂತರ- ಡಾ.ಸಿ.ಎನ್. ಮಂಜುನಾಥ್
ಬೆಂಗಳೂರು ಉತ್ತರ- ಶೋಭಾ ಕರಂದ್ಲಾಜೆ
ಬೆಂಗಳೂರು ಕೇಂದ್ರ – ಪಿ.ಸಿ. ಮೋಹನ್
ಬೆಂಗಳೂರು ದಕ್ಷಿಣ- ತೇಜಸ್ವಿ ಸೂರ್ಯ

Related post

ದಿನ‌ ಭವಿಷ್ಯ 13-05-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 13-05-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುತ್ತದೆ. ಆದರೆ ತುಂಬಾ ಸಂತೋಷ ಸ್ವಲ್ಪ ಸಮಸ್ಯೆಗಳನ್ನು ಉಂಟುಮಾಡಬಹುದಾದ್ದರಿಂದ ನಿಮ್ಮ ಉತ್ಸಾಹವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ. ನೀವು ಸಾಲ ತೆಗೆದುಕೊಳ್ಳಲು ಹೊರಟಿದ್ದರೆ ಮತ್ತು ಈ ಕೆಲಸದಲ್ಲಿ…

ಅಕ್ರಮ ಭ್ರೂಣ ಹತ್ಯೆ ಹಗರಣ; ವೈದ್ಯರ ವಿರುದ್ಧದ ಪ್ರಕರಣ ರದ್ದು ಸಾಧ್ಯವಿಲ್ಲ…

ನ್ಯೂಸ್ ಆ್ಯರೋ : ಕರ್ನಾಟಕದಲ್ಲಿ ವ್ಯಾಪಿಸಿರುವ ಅಕ್ರಮ ಭ್ರೂಣ ಹತ್ಯೆ ಹಗರಣದಲ್ಲಿ ಆರೋಪ ಎದುರಿಸುತ್ತಿರುವ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರ ವಿರುದ್ಧದ ಪ್ರಕರಣವನ್ನು ರದ್ದುಪಡಿಸಲು ಕರ್ನಾಟಕ ಹೈಕೋರ್ಟ್‌ ನಿರಾಕರಿಸಿದೆ. “ಪ್ರಕರಣ…
ದಿನ‌ ಭವಿಷ್ಯ 12-05-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 12-05-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಹೆಚ್ಚು ಆಶಾವಾದಿಗಳಾಗಿರಲು ನಿಮ್ಮನ್ನು ನೀವೇ ಪ್ರೇರೇಪಿಸಿಕೊಳ್ಳಿ. ಇದು ವಿಶ್ವಾಸ ಮತ್ತು ನಮ್ಯತೆಯನ್ನು ಹೆಚ್ಚಿಸುತ್ತದಾದರೂ ಅದೇ ಸಮಯದಲ್ಲಿ ಭಯ, ದ್ವೇಷ, ಅಸೂಯೆ, ಸೇಡಿನಂಥ ನಕಾರಾತ್ಮಕ ಭಾವನೆಗಳನ್ನು ಹಿಂದೆ ಬಿಡಲು ಸಿದ್ಧವಾಗಿ.…

Leave a Reply

Your email address will not be published. Required fields are marked *