Mangalore : ಕೊನೆಗೂ ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನ – ತಣ್ಣಗಾಗದ ಇತ್ತಂಡಗಳ ಕಾರ್ಯಕರ್ತರ ಅಂತರ್ಯುದ್ಧ : ವಿಲೀನ ವೇಳೆಯೂ ತಗಾದೆ…!!

Mangalore : ಕೊನೆಗೂ ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನ – ತಣ್ಣಗಾಗದ ಇತ್ತಂಡಗಳ ಕಾರ್ಯಕರ್ತರ ಅಂತರ್ಯುದ್ಧ : ವಿಲೀನ ವೇಳೆಯೂ ತಗಾದೆ…!!

ನ್ಯೂಸ್ ಆ್ಯರೋ : ಕಳೆದೆರಡು ದಿನಗಳ ಆಂತರಿಕ ಜಟಾಪಟಿ, ವಿರೋಧ, ಗೊಂದಲದ ಬಳಿಕ ಪುತ್ತಿಲ ಪರಿವಾರದ ಕಾರ್ಯಕರ್ತರು ಅರುಣ ಪುತ್ತಿಲ ನೇತೃತ್ವದಲ್ಲಿ ಬಿಜೆಪಿ ಜೊತೆಗೆ ವಿಲೀನವಾಗುವ ಮೂಲಕ ಕಳೆದ ವಿಧಾನಸಭೆ ಚುನಾವಣೆಯಿಂದ ಕರಾವಳಿಯಲ್ಲಿ ಬಿಜೆಪಿಗೆ ಕಾಡುತ್ತಿದ್ದ ಸಮಸ್ಯೆಗೆ ಪರಿಹಾರ ಸಿಕ್ಕಿದೆ.

ಶನಿವಾರ ಸಂಜೆ ಮಂಗಳೂರಿನ ಬಂಟ್ಸ್ ಹಾಸ್ಟೆಲ್‌ ಬಳಿಯ ಬಿಜೆಪಿ ಚುನಾವಣಾ ಕಚೇರಿಗೆ ನೂರಾರು ಬೆಂಬಲಿಗರ ಜೊತೆಗೆ ಬಂದಿದ್ದ ಅರುಣ್ ಪುತ್ತಿಲ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ಬರಮಾಡಿಕೊಂಡರು.

ಇದೇ ವೇಳೆ ಮಾತನಾಡಿದ ಸತೀಶ್ ಕುಂಪಲ, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕಾಗಿದೆ. ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಆಗಿಸುವುದಷ್ಟೇ ನಮ್ಮ ಗುರಿ. ಅರುಣ್ ಪುತ್ತಿಲ ಅವರು ರಾಜ್ಯಾಧ್ಯಕ್ಷ ವಿಜಯೇಂದ್ರ ಸಮ್ಮುಖದಲ್ಲಿ ಪಕ್ಷ ಸೇರಿದ್ದಾರೆ. ಆದರೆ ಕೆಲವು ಕಾರ್ಯಕರ್ತರಿಗೆ ಇದರಲ್ಲಿ ಗೊಂದಲ ಇದೆ.

ನಾವು ಪಕ್ಷದ ಪ್ರಮುಖರ ಸೂಚನೆಯಂತೆ ಕೆಲಸ ಮಾಡುವುದಾಗಿದ್ದು ಪಕ್ಷದ ಕೆಲಸ ಎನ್ನುವುದು ಜವಾಬ್ದಾರಿ. ನಿಮ್ಮಲ್ಲಿ ನೂರು ಚಿಂತನೆಗಳು ಇರಬಹುದು. ಜಿಲ್ಲಾಧ್ಯಕ್ಷನಾಗಿ ನಾನು ಪಕ್ಷದ ಎಲ್ಲ ಕಾರ್ಯಕರ್ತರನ್ನೂ ಜೋಡಿಸಿಕೊಂಡು ಹೋಗಬೇಕಾಗಿದೆ. ಎಲ್ಲರ ಮಾತು ಕೇಳುವುದು ನನ್ನ ಕರ್ತವ್ಯ ಎಂದರು.

ಅರುಣ ಪುತ್ತಿಲ ಮತ್ತು ನಮಗೆ ಯಾವುದೇ ಗೊಂದಲ ಇರಲಿಲ್ಲ. ಹಾಗಾಗಿ, ಕಾರ್ಯಕರ್ತರು ಗೊಂದಲಕ್ಕೆ ಒಳಗಾಗುವುದು, ಸೋಶಿಯಲ್ ಮೀಡಿಯಾದಲ್ಲಿ ಬರೆದು ಆಕ್ರೋಶ ತೀರಿಸಿಕೊಳ್ಳುವುದು ಸರಿಯಲ್ಲ. ರಾಜ್ಯಾಧ್ಯಕ್ಷರ ಸೂಚನೆಯಂತೆ ನಾವು ಕೆಲಸ ಮಾಡಬೇಕಾಗಿದೆ. ನಾವೆಲ್ಲ ಈಗ ಒಂದಾಗಿದ್ದು ನೀವು ಬೇರೆಯಲ್ಲ. ನಾವು ಬೇರೆಯಲ್ಲ. ನಿಮ್ಮ ಬೇಕು ಬೇಡಗಳನ್ನು ನಾವು ಕೇಳಬೇಕಾಗುತ್ತದೆ. ಅದು ನನ್ನ ಜವಾಬ್ದಾರಿ. ನಮ್ಮ ಗುರಿ ಇನ್ನು ಅತ್ಯಧಿಕ ಮತಗಳಿಂದ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವುದು ಅಷ್ಟೇ ಎಂದು ಹೇಳಿದರು.

ಅರುಣ್ ಪುತ್ತಿಲ ಮಾತನಾಡಿ, ನಾವು ನರೇಂದ್ರ ಮೋದಿ ಅವರನ್ನು ಮತ್ತೆ ಹತ್ತು ವರ್ಷಗಳ ಕಾಲ ಪ್ರಧಾನಿ ಮಾಡುವ ಉದ್ದೇಶದಿಂದ ಜೊತೆಯಾಗಿದ್ದೇವೆ. ಹಿಂದಿನ ಕಹಿ ನೆನಪುಗಳನ್ನು ಮರೆತು ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು. ಇದೇ ವೇಳೆ, ಒಬ್ಬ ಉಪ್ಪಿನಂಗಡಿ ಮೂಲದ ಪುತ್ತಿಲ ಪರಿವಾರದ ಕಾರ್ಯಕರ್ತನೊಬ್ಬ ನಮಗೆ ಕಿಶೋರ್ ಪುತ್ತೂರು ಜೊತೆಗೆ ಮಾತನಾಡಲಿಕ್ಕಿದೆ, ಮೀಡಿಯಾದವರು ಹೊರಗೆ ಹೋಗಿ ಎಂದು ಹೇಳಿದ್ದು ಸ್ವಲ್ಪ ಹೊತ್ತು ಗೊಂದಲಕ್ಕೆ ಕಾರಣವಾಯಿತು. ಇದೇ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಆತ ಅನುಚಿತವಾಗಿ ವರ್ತಿಸಿದ್ದ ಎನ್ನಲಾಗಿದೆ.

ಆನಂತರ, ಪಕ್ಷದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮತ್ತು ಹಿಂದಿನ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದ್ರೆ, ಅರುಣ ಪುತ್ತಿಲ ಸೇರಿದಂತೆ ಪರಿವಾರದ ಪ್ರಮುಖರಿಗೆ ಶಾಲು ಹೊದಿಸಿ ಪಕ್ಷಕ್ಕೆ ಸ್ವಾಗತಿಸಿದರು. ಅಲ್ಲದೆ, ಸಾಂಕೇತಿಕವಾಗಿ ಬಿಜೆಪಿ ಪ್ರಾಥಮಿಕ ಸದಸ್ಯತ್ವವನ್ನು ಅರುಣ್ ಕುಮಾರ್ ಪುತ್ತಿಲರಿಗೆ ಕೊಟ್ಟು ಪಕ್ಷಕ್ಕೆ ಅಧಿಕೃತವಾಗಿ ಬರಮಾಡಿಕೊಂಡರು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *