ಉಡುಪಿ : ಕಾಲೇಜಿನ ಶೌಚಾಲಯದಲ್ಲಿ ವೀಡಿಯೊ ಚಿತ್ರೀಕರಣ ಪ್ರಕರಣ – ಸಿಐಡಿಯಿಂದ ಚಾರ್ಜ್‌ಶೀಟ್ ಸಲ್ಲಿಕೆ

ಉಡುಪಿ : ಕಾಲೇಜಿನ ಶೌಚಾಲಯದಲ್ಲಿ ವೀಡಿಯೊ ಚಿತ್ರೀಕರಣ ಪ್ರಕರಣ – ಸಿಐಡಿಯಿಂದ ಚಾರ್ಜ್‌ಶೀಟ್ ಸಲ್ಲಿಕೆ

ನ್ಯೂಸ್ ಆ್ಯರೋ : ಉಡುಪಿಯ ಖಾಸಗಿ ಕಾಲೇಜ್‌ವೊಂದರ‌ ಶೌಚಾಲಯದಲ್ಲಿ ಕಳೆದ ಜುಲೈ ತಿಂಗಳಲ್ಲಿ ನಡೆದಿರುವ ವೀಡಿಯೊ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷಾರೋಪಣಾ (ಚಾರ್ಜ್‌ಶೀಟ್) ಪಟ್ಟಿಯನ್ನು ಸಿಓಡಿ ಪೊಲೀಸರು ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಪ್ರಕರಣದ ತನಿಖೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಿಓಡಿ ಡಿವೈಎಸ್ಪಿ ಅಂಜು ಮಾಲಾ ಅವರು ಎರಡು ಸಂಪುಟಗಳಲ್ಲಿ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಧೀಶೆ ದೀಪಾ ಅವರಿಗೆ ಸಲ್ಲಿಕೆ ಮಾಡಿದರು. ಈ ಸಂದರ್ಭದಲ್ಲಿ ಹಿರಿಯ ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ ಎಚ್.ಎಂ. ನದಾಫ್ ಹಾಜರಿದ್ದರು.

2023ರ ಜು.18ರಂದು ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಶೌಚಾಲಯಕ್ಕೆ ಹೋದ ಅದೇ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳ ವಿಡಿಯೋ ಚಿತ್ರೀಕರಣ ಮಾಡಿರುವುದಾಗಿ ಆರೋಪಿಸಲಾಗಿತ್ತು. ಈ ಪ್ರಕರಣ ರಾಜ್ಯಾದ್ಯಂತ ಸಾಕಷ್ಟು ಚರ್ಚೆಗೆ ಕಾರಣವಾಗಿ ವಿವಾದ ಸೃಷ್ಠಿಸಿತ್ತು. ಈ ಕುರಿತು ಮಲ್ಪೆ ಪೊಲೀಸರು ವಾರದ ಬಳಿಕ ಸ್ವಯಂ ಪ್ರೇರಿತರಾಗಿ ಮೂವರು ವಿದ್ಯಾರ್ಥಿನಿಯರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದರು.

ಈ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಬಿಜೆಪಿ, ಎಬಿವಿಪಿ ಹಾಗೂ ಸಂಘಪರಿವಾರ ಪ್ರತಿಭಟನೆಗಳನ್ನು ನಡೆಸಿದ್ದವು. ಬಳಿಕ ಮಲ್ಪೆ ಪೊಲೀಸ್ ವೃತ್ತ ನಿರೀಕ್ಷಕ ಮಂಜುನಾಥ್ ಗೌಡ ಅವರನ್ನು ತನಿಖಾಧಿಕಾರಿ ಸ್ಥಾನದಿಂದ ಬದಲಾಯಿಸಿ ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಅವರನ್ನು ನೇಮಕ ಮಾಡಲಾಗಿತ್ತು. ಆ.7ರಂದು ರಾಜ್ಯ ಸರಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿ ಆದೇಶ ನೀಡಿತ್ತು. ಸದ್ಯ ಸಿಐಡಿ ಚಾರ್ಜ್ ಶೀಟ್ ಸಲ್ಲಿಸಿದ್ದು, ಮತ್ತೆ ಪ್ರಕರಣಕ್ಕೆ ಮರುಜೀವ ಬಂದಂತಾಗಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *