ಪ್ರವೀಣ್ ನೆಟ್ಟಾರು‌ ಕೊಲೆ ಪ್ರಕರಣದ 21 ನೇ ಆರೋಪಿಗಿಲ್ಲ ಜಾಮೀನು – ಡಿಫಾಲ್ಟ್ ಜಾಮೀನು ಅರ್ಜಿ ನಿರಾಕರಿಸಿದ ವಿಶೇಷ ನ್ಯಾಯಾಲಯದ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಪ್ರವೀಣ್ ನೆಟ್ಟಾರು‌ ಕೊಲೆ ಪ್ರಕರಣದ 21 ನೇ ಆರೋಪಿಗಿಲ್ಲ ಜಾಮೀನು – ಡಿಫಾಲ್ಟ್ ಜಾಮೀನು ಅರ್ಜಿ ನಿರಾಕರಿಸಿದ ವಿಶೇಷ ನ್ಯಾಯಾಲಯದ ಆದೇಶ ಎತ್ತಿ ಹಿಡಿದ ಹೈಕೋರ್ಟ್

ನ್ಯೂಸ್ ಆ್ಯರೋ : ಬಿಜೆಪಿಯ ಯುವ ಮೋರ್ಚಾದ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ 21ನೇ ಆರೋಪಿಯಾಗಿರುವ ಮೊಹಮ್ಮದ್‌ ಜಬೀರ್‌ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ತಿರಸ್ಕರಿಸಿದೆ.

ದ. ಕ. ಜಿಲ್ಲೆಯ ಪುತ್ತೂರು ತಾಲ್ಲೂಕಿನ ನಿವಾಸಿಯಾದ 35 ವರ್ಷದ ಜಾಬೀರ್‌ ಅವರು ತಮ್ಮ ಕಸ್ಟಡಿ ವಿಸ್ತರಣೆ ಮಾಡಿ ಡಿಫಾಲ್ಟ್‌ ಜಾಮೀನು ತಿರಸ್ಕರಿಸಿ ವಿಶೇಷ ಎನ್‌ಐಎ ನ್ಯಾಯಾಲಯವು 2023ರ ಫೆಬ್ರವರಿ 9ರಂದು ಮಾಡಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಶ್ರೀನಿವಾಸ್‌ ಹರೀಶ್‌ ಕುಮಾರ್‌ ಮತ್ತು ವಿಜಯಕುಮಾರ್‌ ಎ. ಪಾಟೀಲ್‌ ಅವರ ನೇತೃತ್ವದ ವಿಭಾಗೀಯ ಪೀಠವು ವಜಾ ಮಾಡಿದೆ.

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಆರೋಪಿ ಜಬೀರ್‌ 21ನೇ ಆರೋಪಿಯಾಗಿದ್ದು, ಆತನ ವಿರುದ್ಧ ಐಪಿಸಿ ಸೆಕ್ಷನ್‌ 302, ಶಸ್ತ್ರಾಸ್ತ್ರ ಕಾಯಿದೆ ಹಾಗೂ ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯಿದೆ ಸೆಕ್ಷನ್‌ಗಳಾದ 16, 18, 19 ಮತ್ತು 20ರ ಅಡಿ ಪ್ರಕರಣ ದಾಖಲಿಸಲಾಗಿದೆ.

ಕಳೆದ 07.11.2022ರಂದು ಜಬೀರ್‌ ಬಂಧನವಾಗಿದ್ದು, 08.11.2022ರಂದು ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. 20.01.2023 ರಂದು 20 ಆರೋಪಿಗಳ ವಿರುದ್ಧ ಎನ್‌ಐಎ ಆರೋಪ ಪಟ್ಟಿ ಸಲ್ಲಿಸಿ, ಹೆಚ್ಚುವರಿ ತನಿಖೆಗೆ ಮನವಿ ಮಾಡಿತ್ತು. ಆದರೆ, ಜಬೀರ್‌ ಅವರ ವಿರುದ್ಧ ಯಾವುದೇ ಆರೋಪ ಪಟ್ಟಿ ಸಲ್ಲಿಸಿರಲಿಲ್ಲ. 06.02.2023ರಂದು ಜಬೀರ್‌ ಅವರ 90 ದಿನಗಳ ಬಂಧನ ಅವಧಿ ಮುಗಿದಿದ್ದರೂ ಎನ್‌ಐಎ ಆರೋಪ ಪಟ್ಟಿ ಸಲ್ಲಿಸಿರಲಿಲ್ಲ.

07.02.2023ರಂದು ಪ್ರಕರಣದ ವಿಚಾರಣೆಯ ದಿನ ಜಬೀರ್‌ ಅವರು ಜಾಮೀನು ಕೋರಿರಲಿಲ್ಲ. ಎನ್‌ಐಎ ಕಸ್ಟಡಿ ವಿಸ್ತರಣೆಯನ್ನೂ ಕೋರಿರಲಿಲ್ಲ. 08.02.2023ರಂದು ಎನ್‌ಐಎ ಕಸ್ಟಡಿ ವಿಸ್ತರಣೆ ಕೋರಿದ್ದು, ಅದೇ ದಿನ ಅರ್ಜಿದಾರರು ಡೀಫಾಲ್ಟ್‌ ಜಾಮೀನು ಕೋರಿದ್ದರು. ಇದನ್ನು ವಿಶೇಷ ನ್ಯಾಯಾಲಯ ತಿರಸ್ಕರಿಸಿತ್ತು. ಆ ಆದೇಶವನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ.

Related post

ದಿನ‌ ಭವಿಷ್ಯ 10-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 10-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಸಾಧ್ಯವಾದರೆ ದೀರ್ಘ ಪ್ರಯಾಣವನ್ನು ತಪ್ಪಿಸಿ. ಏಕೆಂದರೆ ನೀವು ಪ್ರಯಾಣಿಸು ತುಂಬಾ ದುರ್ಬಲರಾಗಿದ್ದೀರಿ ಹಾಗೂ ಇದು ಮತ್ತಷ್ಟು ನಿಮ್ಮನ್ನು ದುರ್ಬಲಗೊಳಿಸುತ್ತದೆ. ಇಂದು ಷೇರು ಮಾರುಕಟ್ಟೆಯಲ್ಲಿ ಹಣವನ್ನು ಹೂಡಿಕೆ ಮಾಡುವವರು ತಮ್ಮ…
7 ದಿನ ಪರಪ್ಪನ ಅಗ್ರಹಾರ ಕಾರಾಗೃಹದ ಪಾಲಾದ ಮಾಜಿ ಸಚಿವ ಎಚ್. ಡಿ. ರೇವಣ್ಣ; ಮೇ 14 ರವರೆಗೆ ನ್ಯಾಯಾಂಗ ಬಂಧನ

7 ದಿನ ಪರಪ್ಪನ ಅಗ್ರಹಾರ ಕಾರಾಗೃಹದ ಪಾಲಾದ ಮಾಜಿ ಸಚಿವ ಎಚ್.…

ನ್ಯೂಸ್ ಆ್ಯರೋ : ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ (Hassan Pen Drive) ಹಾಗೂ ಸಂತ್ರಸ್ತೆಯನ್ನು…
TECH TIPS: ಕಿರಿಕಿರಿ ನೀಡುವ ಸ್ಪ್ಯಾಮ್ ಕರೆಗಳಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ..!

TECH TIPS: ಕಿರಿಕಿರಿ ನೀಡುವ ಸ್ಪ್ಯಾಮ್ ಕರೆಗಳಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ..!

ನ್ಯೂಸ್ ಆ್ಯರೋ : ಮನಸ್ಸಿಗೆ ಕಿರಿಕಿರಿ ನೀಡುವ ಮತ್ತು ತಮ್ಮ ಕೆಲಸದ ವೇಳೆಯಲ್ಲಿ ಅಡಚಣೆ ಉಂಟು ಮಾಡುವ ಸ್ಪ್ಯಾಮ್ ಕರೆಗಳನ್ನು (Spam call) ತಡೆಯುವುದು ಇಂದು ದೊಡ್ಡ ಸಾಹಸ…

Leave a Reply

Your email address will not be published. Required fields are marked *