Kejriwal Arrest : ದೆಹಲಿ ಮದ್ಯ ಹಗರಣ ಪ್ರಕರಣ – ಇಡಿ ಅಧಿಕಾರಿಗಳಿಂದ ದೆಹಲಿ ಸಿಎಂ ಕೇಜ್ರಿವಾಲ್ ಬಂಧನ

Kejriwal Arrest : ದೆಹಲಿ ಮದ್ಯ ಹಗರಣ ಪ್ರಕರಣ – ಇಡಿ ಅಧಿಕಾರಿಗಳಿಂದ ದೆಹಲಿ ಸಿಎಂ ಕೇಜ್ರಿವಾಲ್ ಬಂಧನ

ನ್ಯೂಸ್ ಆ್ಯರೋ : ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಇಡಿ ತನ್ನನ್ನು ಬಂಧಿಸದಂತೆ ಕೋರಿ ದೆಹಲಿ‌ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣಾ ನ್ಯಾಯಾಲಯ ವಜಾಗೊಳಿಸಿದ ಬೆನ್ನಲ್ಲೇ ಕೇಜ್ರಿವಾಲ್ ಮನೆಗೆ ದಾಳಿ ನಡೆಸಿದ ಇಡಿ ಅಧಿಕಾರಿಗಳ ತಂಡ ಎರಡು ಗಂಟೆಗಳ ವಿಚಾರಣೆ ಬಳಿಕ ಬಂಧಿಸಿದೆ‌.

ಗುರುವಾರ ಇಡಿ ಮುಂದೆ ಹಾಜರಾಗುವಂತೆ ಇಡಿ ಒಂಬತ್ತನೇ ಬಾರಿಗೆ ಸಮನ್ಸ್ ಕಳುಹಿಸಿದ ನಂತರ ಕೇಜ್ರಿವಾಲ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಸಮನ್ಸ್ ಅಕ್ರಮವಾಗಿದೆ ಎಂದು ಉಲ್ಲೇಖಿಸಿ ಅವರು ಇಡಿ ಮುಂದೆ ನಿರಂತರವಾಗಿ ಹಾಜರಾಗಿರಲಿಲ್ಲ ಎಂದು ಅವರ ಪರ ವಕೀಲರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.

ನ್ಯಾಯಮೂರ್ತಿಗಳಾದ ಸುರೇಶ್ ಕುಮಾರ್ ಕೈಟ್ ಮತ್ತು ಮನೋಜ್ ಜೈನ್ ಅವರ ದೆಹಲಿ ಹೈಕೋರ್ಟ್ ಪೀಠವು ಕೇಜ್ರಿವಾಲ್‌ಗೆ ಬಲವಂತದ ಕ್ರಮದಿಂದ ಯಾವುದೇ ರಕ್ಷಣೆ ನೀಡಲು ನಿರಾಕರಿಸಿತ್ತು. ಆದರೆ ಮುಂದಿನ ವಿಚಾರಣೆಯನ್ನು ಏಪ್ರಿಲ್ 22ಕ್ಕೆ ಮುಂದೂಡಲಾಗಿತ್ತು‌. ಇದರ ನಡುವೆ ಹಠಾತ್ ಬೆಳವಣಿಗೆ ನಡೆದಿದೆ.

ಇಡಿ ಸಲ್ಲಿಸಿರುವ ಚಾರ್ಜ್ ಶೀಟ್‌ಗಳಲ್ಲಿ ಕೇಜ್ರಿವಾಲ್ ಹೆಸರನ್ನು ಹಲವು ಬಾರಿ ಉಲ್ಲೇಖಿಸಲಾಗಿದೆ. ಅಬಕಾರಿ ನೀತಿಯನ್ನು ರೂಪಿಸಲು ಆರೋಪಿಗಳು ಕೇಜ್ರಿವಾಲ್ ಅವರೊಂದಿಗೆ ಸಂಪರ್ಕದಲ್ಲಿದ್ದರು, ಇದರಿಂದಾಗಿ ಅವರಿಗೆ ಅನಪೇಕ್ಷಿತ ಲಾಭಗಳು ಉಂಟಾಗಿವೆ. ಅವರು ಎಎಪಿಗೆ ಕಿಕ್‌ಬ್ಯಾಕ್ ಪಾವತಿಸಿದ್ದಾರೆ ಎಂದು ಇಡಿ ಆರೋಪಿಸಿದೆ.

ಇತ್ತೀಚೆಗಷ್ಟೇ ಮದ್ಯ ಹಗರಣ ಪ್ರಕರಣದಲ್ಲಿ ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಪುತ್ರಿ ಕವಿತಾ ಕಲ್ವಕುಂಟ್ಲಾ ಅವರನ್ನು ಇಡಿ ಬಂಧಿಸಿತ್ತು. ಪ್ರಸ್ತುತ, ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಕವಿತಾ ಅವರಂತಹ ಅನೇಕ ನಾಯಕರು ಈ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ.

Related post

ಹಾಸನ ಪೆನ್‌ಡ್ರೈವ್ ಪ್ರಕರಣ; 16 ಬೇಡಿಕೆಗಳನ್ನು ಮುಂದಿಟ್ಟು ಸಿಎಂಗೆ ಬಂತು ಬಹಿರಂಗ ಪತ್ರ

ಹಾಸನ ಪೆನ್‌ಡ್ರೈವ್ ಪ್ರಕರಣ; 16 ಬೇಡಿಕೆಗಳನ್ನು ಮುಂದಿಟ್ಟು ಸಿಎಂಗೆ ಬಂತು ಬಹಿರಂಗ…

ನ್ಯೂಸ್ ಆರೋ: ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ಸಚಿವ ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು ಸಿಕ್ಕಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪ್ರಜ್ಞಾವಂತ ನಾಗರೀಕರು ಎಂಬ ಹೆಸರಿನಲ್ಲಿ…
ಯಶ್ ಮೂವಿಯಲ್ಲಿ ಶೂರ್ಪನಖಿಯಾಗಿ ಮಿಂಚಲಿದ್ದಾರೆ ರಾಕುಲ್!

ಯಶ್ ಮೂವಿಯಲ್ಲಿ ಶೂರ್ಪನಖಿಯಾಗಿ ಮಿಂಚಲಿದ್ದಾರೆ ರಾಕುಲ್!

ನ್ಯೂಸ್ ಆರೋ: ಕೆಜಿಎಫ್ ನಂತರ ಹಿಟ್ ಸಿನಿಮಾಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿರುವ ಯಶ್ ಇದೀಗ ಮತ್ತೊಂದು ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಆ ಚಿತ್ರಕ್ಕೆ ಶೂರ್ಪನಖಿಯಾಗಿ ರಕುಲ್ ಕಾಣಿಸಿಕೊಳ್ಳಲಿದ್ದಾರೆ. ಹೌದು,ಶೂರ್ಪನಕಿಯಾಗಿ…
ಪಾಕ್ ಆಕ್ರಮಿತ ಕಾಶ್ಮೀರ ಜನರಿಗೆ ಬಂಪರ್ ಪ್ಯಾಕೇಜ್; ಆಹಾರ ಉತ್ಪನ್ನಗಳ- ವಿದ್ಯುತ್‌ ದರ ಇಳಿಕೆ ಮಾಡಿದ ಪಾಕ್‌ ಸರ್ಕಾರ

ಪಾಕ್ ಆಕ್ರಮಿತ ಕಾಶ್ಮೀರ ಜನರಿಗೆ ಬಂಪರ್ ಪ್ಯಾಕೇಜ್; ಆಹಾರ ಉತ್ಪನ್ನಗಳ- ವಿದ್ಯುತ್‌…

ನ್ಯೂಸ್ ಆರೋ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಜನರು ಭಾರತಕ್ಕೆ ಸೇರುತ್ತೇವೆ ಎಂದು ನಡೆಸುತ್ತಿದ್ದ ಪ್ರತಿಭಟನೆಗೆ ಪಾಕಿಸ್ತಾನದ ಸರ್ಕಾರ ಮಣಿದಿದೆ. ಹೌದು, ಜನರ ಪ್ರತಿಭಟನೆ ಬೆನ್ನಲ್ಲೇ ಪಾಕ್‌ ಆಕ್ರಮಿತ ಕಾಶ್ಮೀರದ…

Leave a Reply

Your email address will not be published. Required fields are marked *