ಕಾಂಗ್ರೆಸ್ ನ ಲೋಕಸಭಾ ಅಭ್ಯರ್ಥಿಗಳ ಮೂರನೇ ಪಟ್ಟಿ ರಿಲೀಸ್ – ದ.ಕ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಪದ್ಮರಾಜ್ ಅಧಿಕೃತ ಘೋಷಣೆ

ಕಾಂಗ್ರೆಸ್ ನ ಲೋಕಸಭಾ ಅಭ್ಯರ್ಥಿಗಳ ಮೂರನೇ ಪಟ್ಟಿ ರಿಲೀಸ್ – ದ.ಕ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಪದ್ಮರಾಜ್ ಅಧಿಕೃತ ಘೋಷಣೆ

ನ್ಯೂಸ್ ಆ್ಯರೋ : ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಅವರ ಹೆಸರು ಅಧಿಕೃತವಾಗಿ ಘೋಷಣೆಯಾಗಿದ್ದು, ಪದ್ಮರಾಜ್ ಸೇರಿದಂತೆ ಕಾಂಗ್ರೆಸ್ ಕರ್ನಾಟಕದ 17 ಅಭ್ಯರ್ಥಿಗಳು ಸೇರಿದಂತೆ ಒಟ್ಟು 57 ಅಭ್ಯರ್ಥಿಗಳ ಮೂರನೇ ಪಟ್ಟಿ ರಿಲೀಸ್ ಮಾಡಿದೆ.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ವೃತ್ತಿಯಲ್ಲಿ ವಕೀಲರಾಗಿದ್ದು, ಬಿಲ್ಲವ ನಾಯಕ ಜನಾರ್ಧನ ಪೂಜಾರಿ ಅವರ ಪಟ್ಟ ಶಿಷ್ಯ. ಅಷ್ಟೇ ಅಲ್ಲದೇ ಬಿಲ್ಲವ ಸಮುದಾಯದ ಯುವ ನಾಯಕರಾಗಿದ್ದು, ಗುರುಬೆಳದಿಂಗಳು ಸೇವಾ ಸಂಸ್ಥೆಯ ಅಧ್ಯಕ್ಷರಾಗಿ ಹಾಗೂ ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಖಜಾಂಚಿಯಾಗಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಇತ್ತೀಚೆಗೆ ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿಯೂ ಇವರು ಕಣಕ್ಕಳಿಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಆದರೆ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನೂ ಹೊಂದಿರದ, ಕನಿಷ್ಠ ಟಿಕೆಟ್‌ಗಾಗಿ ಅರ್ಜಿಯನ್ನೂ ಸಲ್ಲಿಸದ ಇವರಿಗೆ ಟಿಕೆಟ್ ನೀಡಿದರೆ ಪಕ್ಷದ ಕಾರ್ಯಕರ್ತರು ಬಂಡಾಯವೇಳ ಬಹುದು ಎನ್ನುವ ಕಾರಣಕ್ಕೆ ಇವರಿಗೆ ಟಿಕೆಟ್ ಕೈತಪ್ಪಿದೆ ಎಂದು ಹೇಳಲಾಗಿತ್ತು.

ಇದೇ ಕಾರಣಕ್ಕೆ ಚುನಾವಣಾ ಹೊತ್ತಿನಲ್ಲೇ ಆರ್ ಪದ್ಮರಾಜ್ ಅವರನ್ನು ಪಕ್ಷ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿತ್ತು. ಇದೀಗ ಕಾಂಗ್ರೆಸ್ ನ ದಕ್ಷಿಣ ಕನ್ನಡ ಅಭ್ಯರ್ಥಿಯಾಗಿ ಹೆಸರು ಅಂತಿಮಗೊಳಿಸಿದೆ‌. ಬಿಜೆಪಿ ಈಗಾಗಲೇ ತನ್ನ ಅಭ್ಯರ್ಥಿಯಾಗಿ ಬ್ರಿಜೇಶ್ ಚೌಟ ಅವರನ್ನು ಈಗಾಗಲೇ ಘೋಷಿಸಿದ್ದು, ಈ ಬಾರಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಭಾರೀ ಚರ್ಚೆಯ ಕಣವಾಗುವ ನಿರೀಕ್ಷೆ ಹುಟ್ಟುಹಾಕಿದೆ.

ಕರ್ನಾಟಕದ 17 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ

  • ಬಾಗಲಕೋಟೆ ಲೋಕಸಭಾ ಕ್ಷೇತ್ರ-ಸಂಯುಕ್ತಾ ಪಾಟೀಲ್‌
  • ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ-ಸೌಮ್ಯಾರೆಡ್ಡಿ
  • ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ-ಎಂ.ವಿ.ರಾಜೀವ್ ಗೌಡ
  • ಮೈಸೂರು ಲೋಕಸಭಾ ಕ್ಷೇತ್ರ-ಎಂ.ಲಕ್ಷ್ಮಣ್‌
  • ಚಿತ್ರದುರ್ಗ ಲೋಕಸಭಾ ಕ್ಷೇತ್ರ-ಬಿ.ಎನ್.ಚಂದ್ರಪ್ಪ
  • ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ-ಪದ್ಮರಾಜ್‌
  • ಉಡುಪಿ, ಚಿಕ್ಕಮಗಳೂರು ಕ್ಷೇತ್ರ-ಜಯಪ್ರಕಾಶ್ ಹೆಗ್ಡೆ
  • ಕಲಬುರಗಿ ಲೋಕಸಭಾ ಕ್ಷೇತ್ರ-ರಾಧಾಕೃಷ್ಣ ದೊಡ್ಡಮನಿ
  • ದಾವಣಗೆರೆ ಲೋಕಸಭಾ ಕ್ಷೇತ್ರ-ಪ್ರಭಾ ಮಲ್ಲಿಕಾರ್ಜುನ
  • ಬೆಂಗಳೂರು ಸೆಂಟ್ರಲ್‌ ಕ್ಷೇತ್ರ-ಮನ್ಸೂರ್ ಅಲಿಖಾನ್‌
  • ಉತ್ತರ ಕನ್ನಡ ಕ್ಷೇತ್ರ-ಡಾ.ಅಂಜಲಿ ನಿಂಬಾಳ್ಕರ್‌
  • ಧಾರವಾಡ ಲೋಕಸಭಾ ಕ್ಷೇತ್ರ-ವಿನೋದ್ ಅಸೋಟಿ
  • ಕೊಪ್ಪಳ ಲೋಕಸಭಾ ಕ್ಷೇತ್ರ-ರಾಜಶೇಖರ್ ಹಿಟ್ನಾಳ್‌
  • ಬೀದರ್ ಲೋಕಸಭಾ ಕ್ಷೇತ್ರ-ಸಾಗರ್ ಖಂಡ್ರೆ

Related post

ಅಕ್ರಮ ಭ್ರೂಣ ಹತ್ಯೆ ಹಗರಣ; ವೈದ್ಯರ ವಿರುದ್ಧದ ಪ್ರಕರಣ ರದ್ದು ಸಾಧ್ಯವಿಲ್ಲ…

ನ್ಯೂಸ್ ಆ್ಯರೋ : ಕರ್ನಾಟಕದಲ್ಲಿ ವ್ಯಾಪಿಸಿರುವ ಅಕ್ರಮ ಭ್ರೂಣ ಹತ್ಯೆ ಹಗರಣದಲ್ಲಿ ಆರೋಪ ಎದುರಿಸುತ್ತಿರುವ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರ ವಿರುದ್ಧದ ಪ್ರಕರಣವನ್ನು ರದ್ದುಪಡಿಸಲು ಕರ್ನಾಟಕ ಹೈಕೋರ್ಟ್‌ ನಿರಾಕರಿಸಿದೆ. “ಪ್ರಕರಣ…
ದಿನ‌ ಭವಿಷ್ಯ 12-05-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 12-05-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಹೆಚ್ಚು ಆಶಾವಾದಿಗಳಾಗಿರಲು ನಿಮ್ಮನ್ನು ನೀವೇ ಪ್ರೇರೇಪಿಸಿಕೊಳ್ಳಿ. ಇದು ವಿಶ್ವಾಸ ಮತ್ತು ನಮ್ಯತೆಯನ್ನು ಹೆಚ್ಚಿಸುತ್ತದಾದರೂ ಅದೇ ಸಮಯದಲ್ಲಿ ಭಯ, ದ್ವೇಷ, ಅಸೂಯೆ, ಸೇಡಿನಂಥ ನಕಾರಾತ್ಮಕ ಭಾವನೆಗಳನ್ನು ಹಿಂದೆ ಬಿಡಲು ಸಿದ್ಧವಾಗಿ.…
ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ…

ನ್ಯೂಸ್ ಆ್ಯರೋ : ಬರದಿಂದ ಕಂಗೆಟ್ಟಿರುವ ರಾಜ್ಯದ ರೈತರಿಗೆ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದೆ. ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…

Leave a Reply

Your email address will not be published. Required fields are marked *