ಪ್ರಧಾನಿ ಮೋದಿಗೆ ಭೂತಾನ್ ನ ಅತ್ಯುನ್ನತ ನಾಗರಿಕ ಗೌರವ – ಇದು 140 ಕೋಟಿ ಭಾರತೀಯರಿಗೆ ಒಲಿದ ಗೌರವ : ಮೋದಿ

ಪ್ರಧಾನಿ ಮೋದಿಗೆ ಭೂತಾನ್ ನ ಅತ್ಯುನ್ನತ ನಾಗರಿಕ ಗೌರವ – ಇದು 140 ಕೋಟಿ ಭಾರತೀಯರಿಗೆ ಒಲಿದ ಗೌರವ : ಮೋದಿ

ನ್ಯೂಸ್ ಆ್ಯರೋ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭೂತಾನ್ ನ ಅತ್ಯುನ್ನತ ನಾಗರಿಕ ಗೌರವವಾದ ‘ಆರ್ಡರ್ ಆಫ್ ದಿ ಡ್ರಕ್ ಗ್ಯಾಲ್ಪೊ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಭೂತಾನ್ ದೊರೆ ಜಿಗ್ಮೆ ಖೇಸರ್ ನಾಂಗೇಲ್ ವಾಂಗ್ ಚುಕ್ ಅವರು ಈ ಪ್ರಶಸ್ತಿ ನೀಡಿ ಅಭಿನಂದಿಸಿದ್ದಾರೆ.

ಪ್ರಧಾನಿ ಮೋದಿ ಈ ಪ್ರಶಸ್ತಿ ಪಡೆದುಕೊಂಡ ಮೊದಲ ವಿದೇಶಿ ಸರ್ಕಾರದ ಮುಖ್ಯಸ್ಥರಾಗಿದ್ದಾರೆ. 2021ರ ಡಿಸೆಂಬರ್ 17 ರಂದು ಭೂತಾನ್ ನ 114ನೇ ರಾಷ್ಟ್ರೀಯ ದಿನಾಚರಣೆ ಸಂದರ್ಭದಲ್ಲಿ ಈ ಪ್ರಶಸ್ತಿ ಘೋಷಿಸಲಾಗಿತ್ತು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮೋದಿ, ʻಈ ಪ್ರಶಸ್ತಿ ನನ್ನ ವೈಯಕ್ತಿಕ ಸಾಧನೆಯಲ್ಲ, ಬದಲಿಗೆ 140 ಕೋಟಿ ಭಾರತೀಯರಿಗೆ ಒಲಿದ ಗೌರವವಾಗಿದೆ. ಹೀಗಾಗಿ ಭಾರತೀಯರ ಪರವಾಗಿ ನಾನು ಭೂತಾನ್‌ನ ಈ ಪ್ರಶಸ್ತಿಯನ್ನ ಅತಿ ವಿನಮ್ರವಾಗಿ ಸ್ವೀಕರಿಸುತ್ತೇನೆʼ ಎಂದು ಹೇಳಿದ್ದಾರೆ.

ಜೊತೆಗೆ ಭೂತಾನಿಯರ ಭರವಸೆಯ BB ಅಂದ್ರೆ ಬ್ರಾಂಡ್‌ ಭೂತಾನ್‌ & ಭೂತಾನ್‌ ಬಿಲೀವ್‌ (Brand Bhutan & Bhutan Believe) ಯೋಜನೆಗೆ ಭಾರತ ಬದ್ದವಾಗಿದೆ. ಹಾಗೂ ಮುಂಬರೊ 5 ವರ್ಷಗಳಲ್ಲಿ ಸಂಪರ್ಕ, ಮೂಲಸೌಕರ್ಯ, ವ್ಯಾಪಾರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರತ-ಭೂತಾನ್‌ ದ್ವಿಪಕ್ಷೀಯ ಸಂಬಂಧಕ್ಕೆ ಹೊಸ ಶಕ್ತಿ ನೀಡೋದಾಗಿ ಆಶಯ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಗಡಿಯಲ್ಲಿ ಭಾರತದ ವಿರುದ್ದ ಬಾಲ ಬಿಚ್ಚಿ, ಭೂತಾನ್‌ನ್ನ ಭಾರತದ ವಿರುದ್ದ ಎತ್ತಿ ಕಟ್ಟಲು ಪ್ರಯತ್ನಿಸುತ್ತಿರುವ ಚೀನಾಗೆ ಕೌಂಟರ್‌ ಕೊಟ್ಟಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಭೂತಾನ್ ನ ಅತ್ಯುನ್ನತ ನಾಗರಿಕ ಗೌರವ ‘ ಆರ್ಡರ್ ಆಫ್ ದಿ ಗ್ಯಾಲ್ಪೊ’ ಪ್ರಶಸ್ತಿ ಸ್ವೀಕರಿಸಲು ನನಗೆ ಸಂತಸವಾಗಿದೆ. ಈ ಪ್ರಶಸ್ತಿಯನ್ನು 140 ಕೋಟಿ ಭಾರತೀಯರಿಗೆ ಅರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *