Viral Video : ಹಾಡಹಗಲೇ ಯುವತಿಯೊಬ್ಬಳ ಮೇಲೆ ಚಾಕು ಇರಿದ ಯುವಕ‌ – ಭೀಕರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Viral Video : ಹಾಡಹಗಲೇ ಯುವತಿಯೊಬ್ಬಳ ಮೇಲೆ ಚಾಕು ಇರಿದ ಯುವಕ‌ – ಭೀಕರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ನ್ಯೂಸ್ ಆ್ಯರೋ : ಹಾಡಹಗಲೇ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಯುವಕನೊಬ್ಬ ಚಾಕುವಿನಿಂದ ಮನಬಂದಂತೆ ಇರಿದಿರುವ ಘಟನೆ ನವದೆಹಲಿಯಲ್ಲಿ ನಡೆದಿದ್ದು, ಭೀಕರ ವಿಡಿಯೋ ವೈರಲ್ ಆಗಿದೆ.

ದೆಹಲಿಯ ಮುಖರ್ಜಿ ನಗರದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ಈ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಬಾಲಕಿಗೆ ಗಂಭೀರ ಗಾಯಗಳಾಗಿಲ್ಲ, ಅಪಾಯದಿಂದ ಪಾರಾಗಿದ್ದಾಳೆ ಎನ್ನಲಾಗಿದೆ.

ಮಾರ್ಚ್ 22 ರಂದು ಈ ಘಟನೆ ನಡೆದಿದೆ ಎನ್ನಲಾಗಿದ್ದು, ಹಲ್ಲೆ ನಡೆಸಿದ ಯುವಕನನ್ನು ಅಮನ್ (22) ಎಂದು ಗುರುತಿಸಲಾಗಿದೆ.

ಸ್ಥಳದಲ್ಲಿದ್ದ ಜನರು ಮಧ್ಯ ಪ್ರವೇಶಿಸಿ ಆರೋಪಿಯನ್ನು ಯುವತಿಯಿಂದ ಬಿಡಿಸಲು ಯತ್ನಿಸಿದ ವೇಳೆ, ಆತ ಚಾಕು ತೋರಿಸಿ ಬೆದರಿಸಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಘಟನೆಯ ಬಳಿಕ ಸಾರ್ವಜನಿಕರು ಸೇರಿ ಪರಾರಿಯಾಗಲು ಯತ್ನಿಸಿದ ಆರೋಪಿಯನ್ನು ಹಿಡಿದಿದ್ದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *