ಉಡುಪಿ ‌: ಮೆಡಿಕಲ್ ಕಾಲೇಜು ಶೌಚಾಲಯದಲ್ಲಿ ಗೆಳತಿಯ ವಿಡಿಯೋ ಚಿತ್ರೀಕರಣ ಪ್ರಕರಣ – ಚಾರ್ಜ್ ಶೀಟ್ ಸಲ್ಲಿಸಿದ ಸಿಐಡಿ ; ವರದಿಯಲ್ಲಿ ನಿಜಾಂಶ ಬಯಲು…!!

ಉಡುಪಿ ‌: ಮೆಡಿಕಲ್ ಕಾಲೇಜು ಶೌಚಾಲಯದಲ್ಲಿ ಗೆಳತಿಯ ವಿಡಿಯೋ ಚಿತ್ರೀಕರಣ ಪ್ರಕರಣ – ಚಾರ್ಜ್ ಶೀಟ್ ಸಲ್ಲಿಸಿದ ಸಿಐಡಿ ; ವರದಿಯಲ್ಲಿ ನಿಜಾಂಶ ಬಯಲು…!!

ನ್ಯೂಸ್ ಆ್ಯರೋ : ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್‌ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಮಾಡಿರುವ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಆರೋಪಿತ ವಿದ್ಯಾರ್ಥಿನಿಯರೇ ಶೌಚಾಲಯದಲ್ಲಿ ಸಹಪಾಠಿಯ ವಿಡಿಯೋ ಚಿತ್ರೀಕರಿಸಿರುವುದು ದೃಢಪಟ್ಟಿದೆ.

ವರ್ಷದ ಹಿಂದೆ ಉಡುಪಿಯಲ್ಲಿ ನಡೆದ ಕಾಲೇಜಿನ ಶೌಚಾಲಯ ಪ್ರಕರಣ ರಾಜ್ಯಮಟ್ಟದಲ್ಲಿ ಸುದ್ದಿಯಾಗಿತ್ತು. ವಿಪಕ್ಷ ಬಿಜೆಪಿ ಈ ಪ್ರಕರಣದ ವಿರುದ್ಧ ಸಾಕಷ್ಟು ಪ್ರತಿಭಟನೆ ನಡೆಸಿತ್ತು. ಬಳಿಕ ಸರ್ಕಾರ ತನಿಖೆಯನ್ನು ಸಿಐಡಿಗೆ ವಹಿಸಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಉಡುಪಿಯ ಪ್ರಧಾನ ಸಿವಿಲ್‌ ಮತ್ತು ಜೆಎಂಎಫ್ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ.

ಆರೋಪಿ ವಿದ್ಯಾರ್ಥಿನಿಯರು ಗೆಳತಿಯ ವಿಡಿಯೋ ಮಾಡಲು ಹೋಗಿ ಬೇರೆ ಯುವತಿಯ ಖಾಸಗಿ ವಿಡಿಯೋ ಮಾಡಿರುವುದು, ಬಳಿಕ ಸಾಕ್ಷ್ಯ ನಾಶಮಾಡಲು ಮೊಬೈಲ್‌ನಲ್ಲಿದ್ದ ವಿಡಿಯೋ ಡಿಲೀಟ್‌ ಮಾಡಿರುವುದು ತನಿಖೆಯಲ್ಲಿ ಸಾಬೀತಾಗಿದೆ ಎಂದು ಸಿಐಡಿ ಅಧಿಕಾರಿಗಳು ಆರೋಪಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ.

2023ರ ಜುಲೈ 18ರಂದು ಕಾಲೇಜಿನ ಶೌಚಾಲಯದಲ್ಲಿ ಆರೋಪಿತ ವಿದ್ಯಾರ್ಥಿನಿಯರು ತಮ್ಮ ಗೆಳತಿಯ ವಿಡಿಯೋ ಮಾಡಿದ್ದರು. ಆದರೆ, ಆ ವಿಡಿಯೋದಲ್ಲಿ ಗೆಳತಿಯ ಬದಲಾಗಿ ಬೇರೆ ಯುವತಿ ಇರುವುದು ಅರಿವಿಗೆ ಬಂದಿದೆ. ಕೂಡಲೇ ವಿಡಿಯೋವನ್ನು ಡಿಲೀಟ್ ಮಾಡಿ ಸಂತ್ರಸ್ತೆಗೆ ವಿಡಿಯೋ ಮಾಡಿರುವ ವಿಚಾರ ತಿಳಿಸಿ ಕ್ಷಮೆಯಾಚಿಸಿದ್ದರು.

ಬಳಿಕ ವಿಷಯ ಕಾಲೇಜಿನ ಆಡಳಿತ ಮಂಡಳಿಗೆ ಗೊತ್ತಾಗಿ, ವಿದ್ಯಾರ್ಥಿನಿಯರನ್ನು ವಿಚಾರಣೆಗೊಳಪಡಿಸಿದಾಗ ವಿಡಿಯೋ ಮಾಡಿರುವುದಾಗಿ ಒಪ್ಪಿಕೊಂಡು ಕ್ಷಮಾಪಣೆ ಪತ್ರ ಬರೆದುಕೊಟ್ಟಿದ್ದರು.

ವಿದ್ಯಾರ್ಥಿನಿಯರ ಕೈಬರಹ ಹಾಗೂ ಕ್ಷಮಾಪಣಾ ಪತ್ರದ ಬರಹ ತಾಳೆಯಾಗುತ್ತಿದೆ ಎಂದು ಎಫ್‌ಎಸ್‌ಎಲ್‌ ವರದಿ ದೃಢೀಕರಿಸಿದೆ. ಒಟ್ಟಾರೆ ರಾಜ್ಯದಲ್ಲಿ ತೀವ್ರ ವಿವಾದಕ್ಕೆ ಈಡಾಗಿದ್ದ ಈ ಪ್ರಕರಣ ಇದೀಗ ಆರೋಪ ಪಟ್ಟಿ ಸಲ್ಲಿಕೆ ಬಳಿಕ ಮತ್ತೆ ಸದ್ದು ಮಾಡಿದ್ದು, ಪ್ರಕರಣದ ತೀರ್ಪು ಕುತೂಹಲ ಕೆರಳಿಸಿದೆ.

Related post

ಡೈರೆಕ್ಟರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ UIDAI; ತಿಂಗಳಿಗೆ 2 ಲಕ್ಷಕ್ಕೂ ಅಧಿಕ ಸಂಬಳ

ಡೈರೆಕ್ಟರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ UIDAI; ತಿಂಗಳಿಗೆ 2 ಲಕ್ಷಕ್ಕೂ ಅಧಿಕ…

ನ್ಯೂಸ್ ಆರೋ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಡೈರೆಕ್ಟರ್, ಅಸಿಸ್ಟೆಂಟ್ ಡೈರೆಕ್ಟರ್​ ಹುದ್ದೆಗಳು…
ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಆದೇಶ

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಆದೇಶ

ನ್ಯೂಸ್ ಆ್ಯರೋ : ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರಿಗೆ ಮಧ್ಯಂತರ ಜಾಮೀನು ನೀಡಿ ಇಂದು…
ಆರೋಗ್ಯ ಸಮಸ್ಯೆ; 14 ತಿಂಗಳ ಬಳಿಕ ಸ್ಯಾಂಟ್ರೋ ರವಿಗೆ ಜಾಮೀನು ನೀಡಿದ ನ್ಯಾಯಾಲಯ

ಆರೋಗ್ಯ ಸಮಸ್ಯೆ; 14 ತಿಂಗಳ ಬಳಿಕ ಸ್ಯಾಂಟ್ರೋ ರವಿಗೆ ಜಾಮೀನು ನೀಡಿದ…

ನ್ಯೂಸ್ ಆ್ಯರೋ : ಅತ್ಯಾಚಾರ, ಕೊಲೆ ಬೆದರಿಕೆ ಪ್ರಕರಣದ ಆರೋಪಿ ಕೆ.ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಗೆ ಮೈಸೂರಿನ ಆರನೇ ಹೆಚ್ಚುವರಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಬಂಧಿತನಾಗಿ…

Leave a Reply

Your email address will not be published. Required fields are marked *