ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಐದನೇ ಪಟ್ಟಿ ರಿಲೀಸ್ ಮಾಡಿದ ಬಿಜೆಪಿ – ಹಾಲಿ ಸಂಸದರಾದ ಸುಮಲತಾ, ಅನಂತಕುಮಾರ್ ಹೆಗಡೆಗಿಲ್ಲ ಅವಕಾಶ..!!

ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಐದನೇ ಪಟ್ಟಿ ರಿಲೀಸ್ ಮಾಡಿದ ಬಿಜೆಪಿ – ಹಾಲಿ ಸಂಸದರಾದ ಸುಮಲತಾ, ಅನಂತಕುಮಾರ್ ಹೆಗಡೆಗಿಲ್ಲ ಅವಕಾಶ..!!

ನ್ಯೂಸ್ ಆ್ಯರೋ : ಬಿಜೆಪಿ ಪಕ್ಷದಿಂದ ಲೋಕಸಭಾ ಚುನಾವಣೆಗೆ 111 ಕ್ಷೇತ್ರಗಳಿಗೆ 5ನೇ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪಟ್ಟಿಯಲ್ಲಿ ಕರ್ನಾಟಕದ ಚಿಕ್ಕಬಳ್ಳಾಪುರ, ರಾಯಚೂರು, ಉತ್ತರ ಕನ್ನಡ ಹಾಗೂ ಬೀದರ್ ಜಿಲ್ಲೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.

ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಐದನೇ ಮತ್ತು ಅಂತಿಮ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದ್ದು, 111 ಅಭ್ಯರ್ಥಿಗಳನ್ನು ಘೋಷಿಸಿದೆ.

ಇಂದಿನ ಅಭ್ಯರ್ಥಿಗಳ ಪಟ್ಟಿ ಪ್ರಕಟಣೆಗೂ ಮುಂಚಿತವಾಗಿ ಹಿಂದೆ 291 ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿತ್ತು.

ಈ ಪೈಕಿ ಕರ್ನಾಟಕದ ನಾಲ್ಕು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆಯಾಗಿದ್ದು, ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ರಾಜಾ ಅಮರೇಶ್ವರ ನಾಯಕ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಡಾ.ಕೆ ಸುಧಾಕರ್, ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಜಗದೀಶ್ ಶೆಟ್ಟರ್ ಹೆಸರು ಅಂತಿಮಗೊಳಿಸಲಾಗಿದೆ.

ಇನ್ನುಳಿದಂತೆ ಮಂಡ್ಯ ಸಂಸದೆ ಸುಮಲತಾ, ಉತ್ತರ ಕನ್ನಡದ ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದೆ. ಆದರೆ ಸ್ಥಳೀಯ ನಾಯಕರ ವಿರೋಧದ ನಡುವೆಯೂ ಬೆಳಗಾವಿಯಿಂದ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ಸಿಕ್ಕಿರುವುದು ಅಚ್ಚರಿಗೆ ಕಾರಣವಾಗಿದೆ.

Related post

7 ದಿನ ಪರಪ್ಪನ ಅಗ್ರಹಾರ ಕಾರಾಗೃಹದ ಪಾಲಾದ ಮಾಜಿ ಸಚಿವ ಎಚ್. ಡಿ. ರೇವಣ್ಣ; ಮೇ 14 ರವರೆಗೆ ನ್ಯಾಯಾಂಗ ಬಂಧನ

7 ದಿನ ಪರಪ್ಪನ ಅಗ್ರಹಾರ ಕಾರಾಗೃಹದ ಪಾಲಾದ ಮಾಜಿ ಸಚಿವ ಎಚ್.…

ನ್ಯೂಸ್ ಆ್ಯರೋ : ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ (Hassan Pen Drive) ಹಾಗೂ ಸಂತ್ರಸ್ತೆಯನ್ನು…
TECH TIPS: ಕಿರಿಕಿರಿ ನೀಡುವ ಸ್ಪ್ಯಾಮ್ ಕರೆಗಳಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ..!

TECH TIPS: ಕಿರಿಕಿರಿ ನೀಡುವ ಸ್ಪ್ಯಾಮ್ ಕರೆಗಳಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ..!

ನ್ಯೂಸ್ ಆ್ಯರೋ : ಮನಸ್ಸಿಗೆ ಕಿರಿಕಿರಿ ನೀಡುವ ಮತ್ತು ತಮ್ಮ ಕೆಲಸದ ವೇಳೆಯಲ್ಲಿ ಅಡಚಣೆ ಉಂಟು ಮಾಡುವ ಸ್ಪ್ಯಾಮ್ ಕರೆಗಳನ್ನು (Spam call) ತಡೆಯುವುದು ಇಂದು ದೊಡ್ಡ ಸಾಹಸ…
ಡ್ರೈ ಸ್ಕಿನ್ ಸಮಸ್ಯೆಗೆ ಸೌತೆಕಾಯಿ ಫೇಸ್ ಪ್ಯಾಕ್ ಬೆಸ್ಟ್; ನೀವೂ ಟ್ರೈ ಮಾಡಿ

ಡ್ರೈ ಸ್ಕಿನ್ ಸಮಸ್ಯೆಗೆ ಸೌತೆಕಾಯಿ ಫೇಸ್ ಪ್ಯಾಕ್ ಬೆಸ್ಟ್; ನೀವೂ ಟ್ರೈ…

ನ್ಯೂಸ್ ಆ್ಯರೋ : ಅಡುಗೆ, ಸಲಾಡ್, ಜ್ಯೂಸ್​ನಲ್ಲೂ ಬಳಸುವ ಸೌತೆಕಾಯಿಗಳು ಸೌಂದರ್ಯದ ದೃಷ್ಟಿಯಿಂದಲೂ ಬಹಳ ಕೊಡುಗೆ ನೀಡುತ್ತವೆ. ಈ ಪೌಷ್ಟಿಕ ತರಕಾರಿ ನಿಮ್ಮ ಚರ್ಮಕ್ಕೆ ಚಿಕಿತ್ಸೆ ನೀಡಲು ಉತ್ತಮ…

Leave a Reply

Your email address will not be published. Required fields are marked *