ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ – ದಕ್ಷಿಣ ಕನ್ನಡ ಜಿಲ್ಲಾದ್ಯಂತ ಈ‌ ದಿನಗಳಲ್ಲಿ ಮದ್ಯ ಮಾರಾಟ ಇಲ್ಲ..!

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ – ದಕ್ಷಿಣ ಕನ್ನಡ ಜಿಲ್ಲಾದ್ಯಂತ ಈ‌ ದಿನಗಳಲ್ಲಿ ಮದ್ಯ ಮಾರಾಟ ಇಲ್ಲ..!

ನ್ಯೂಸ್ ಆ್ಯರೋ ‌: ಈ ಬಾರಿಯ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಸಂಬಂಧಿಸಿದಂತೆ ಏಪ್ರಿಲ್ 24ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಜಿಲ್ಲಾಡಳಿತ ನಿಷೇಧ ಹೇರಿ ಆದೇಶ ಹೊರಡಿಸಿದೆ.

ಚುನಾವಣಾ ಮತದಾನ ಹಾಗೂ ಮತ ಎಣಿಕಾ ಕಾರ್ಯ ನಡೆಯುವ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಏಪ್ರಿಲ್ 24ರ ಸಂಜೆ 6 ಗಂಟೆಯಿಂದ ಏಪ್ರಿಲ್ 26ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಮತ ಎಣಿಕೆಯ ದಿನ ಜೂನ್ 3ರಂದು ರಾತ್ರಿ 12 ಗಂಟೆಯಿಂದ ಜೂನ್ 4ರಂದು ಮಧ್ಯರಾತ್ರಿ 12 ಗಂಟೆಯವರೆಗಿನ ಅವಧಿಯನ್ನು ಮಧ್ಯಮುಕ್ತ ದಿನಗಳು ಎಂದು ಘೋಷಿಸಲಾಗಿದೆ.

ಘೋಷಿತ ದಿನಗಳಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿಗಳು, ಮದ್ಯ ಮಾರಾಟ ಅಂಗಡಿಗಳು, ಮದ್ಯ ತಯಾರಿಕಾ ಡಿಸ್ಟಿಲರಿಗಳು, ಸ್ಟಾರ್ ಹೋಟೆಲ್ ಗಳು ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಆದೇಶ ಹೊರಡಿಸಿದ್ದಾರೆ.

ಒಟ್ಟಾರೆಯಾಗಿ ಚುನಾವಣೆ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧವಿದ್ದು, ಮದ್ಯಪ್ರಿಯರು ಬಾರ್ ಬಂದ್ ಗೂ ಮೊದಲೇ ಮದ್ಯ ದಾಸ್ತಾನಿಗೆ ಮುಗಿ ಬೀಳುವ ನಿರೀಕ್ಷೆ ಇದೆ.

Related post

7 ದಿನ ಪರಪ್ಪನ ಅಗ್ರಹಾರ ಕಾರಾಗೃಹದ ಪಾಲಾದ ಮಾಜಿ ಸಚಿವ ಎಚ್. ಡಿ. ರೇವಣ್ಣ; ಮೇ 14 ರವರೆಗೆ ನ್ಯಾಯಾಂಗ ಬಂಧನ

7 ದಿನ ಪರಪ್ಪನ ಅಗ್ರಹಾರ ಕಾರಾಗೃಹದ ಪಾಲಾದ ಮಾಜಿ ಸಚಿವ ಎಚ್.…

ನ್ಯೂಸ್ ಆ್ಯರೋ : ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ (Hassan Pen Drive) ಹಾಗೂ ಸಂತ್ರಸ್ತೆಯನ್ನು…
TECH TIPS: ಕಿರಿಕಿರಿ ನೀಡುವ ಸ್ಪ್ಯಾಮ್ ಕರೆಗಳಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ..!

TECH TIPS: ಕಿರಿಕಿರಿ ನೀಡುವ ಸ್ಪ್ಯಾಮ್ ಕರೆಗಳಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ..!

ನ್ಯೂಸ್ ಆ್ಯರೋ : ಮನಸ್ಸಿಗೆ ಕಿರಿಕಿರಿ ನೀಡುವ ಮತ್ತು ತಮ್ಮ ಕೆಲಸದ ವೇಳೆಯಲ್ಲಿ ಅಡಚಣೆ ಉಂಟು ಮಾಡುವ ಸ್ಪ್ಯಾಮ್ ಕರೆಗಳನ್ನು (Spam call) ತಡೆಯುವುದು ಇಂದು ದೊಡ್ಡ ಸಾಹಸ…
ಡ್ರೈ ಸ್ಕಿನ್ ಸಮಸ್ಯೆಗೆ ಸೌತೆಕಾಯಿ ಫೇಸ್ ಪ್ಯಾಕ್ ಬೆಸ್ಟ್; ನೀವೂ ಟ್ರೈ ಮಾಡಿ

ಡ್ರೈ ಸ್ಕಿನ್ ಸಮಸ್ಯೆಗೆ ಸೌತೆಕಾಯಿ ಫೇಸ್ ಪ್ಯಾಕ್ ಬೆಸ್ಟ್; ನೀವೂ ಟ್ರೈ…

ನ್ಯೂಸ್ ಆ್ಯರೋ : ಅಡುಗೆ, ಸಲಾಡ್, ಜ್ಯೂಸ್​ನಲ್ಲೂ ಬಳಸುವ ಸೌತೆಕಾಯಿಗಳು ಸೌಂದರ್ಯದ ದೃಷ್ಟಿಯಿಂದಲೂ ಬಹಳ ಕೊಡುಗೆ ನೀಡುತ್ತವೆ. ಈ ಪೌಷ್ಟಿಕ ತರಕಾರಿ ನಿಮ್ಮ ಚರ್ಮಕ್ಕೆ ಚಿಕಿತ್ಸೆ ನೀಡಲು ಉತ್ತಮ…

Leave a Reply

Your email address will not be published. Required fields are marked *