Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ – 102 ಕ್ಷೇತ್ರಗಳಲ್ಲಿ ಅದೃಷ್ಟ ಪರೀಕ್ಷೆಗಿಳಿದ 1625 ಅಭ್ಯರ್ಥಿಗಳು

Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ – 102 ಕ್ಷೇತ್ರಗಳಲ್ಲಿ ಅದೃಷ್ಟ ಪರೀಕ್ಷೆಗಿಳಿದ 1625 ಅಭ್ಯರ್ಥಿಗಳು

ನ್ಯೂಸ್ ಆ್ಯರೋ : ದೇಶದ ಚುಕ್ಕಾಣಿ ಹಿಡಿಯಲು ಐದು ವರ್ಷಗಳಿಗೊಮ್ಮೆ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯ 7 ಹಂತದ ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ಶುಕ್ರವಾರ ಚಾಲನೆ ಸಿಗಲಿದ್ದು, ಮೊದಲ ಹಂತದಲ್ಲಿ 102 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ 16.63 ಕೋಟಿ ಮತದಾರರು ತಮ್ಮ ಹಕ್ಕು ಚಲಾವಣೆ ಮಾಡಲಿದ್ದಾರೆ.

ಒಟ್ಟಾರೆಯಾಗಿ ಇಂದು 35.67 ಲಕ್ಷ ಮಂದಿ ಮೊದಲ ಬಾರಿಗೆ ಮತದಾನ ಮಾಡುತ್ತಿದ್ದಾರೆ. 3.51 ಕೋಟಿ ಮತದಾರರು 20ರಿಂದ 29ರ ಪ್ರಾಯದೊಳಗಿದ್ದಾರೆ. ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದೆ.

ಚುನಾವಣಾ ಆಯೋಗ 18 ಲಕ್ಷ ಸಿಬ್ಬಂದಿಯನ್ನು ಚುನಾವಣಾ ಕೆಲಸಕ್ಕೆ ನಿಯೋಜನೆ ಮಾಡಿದೆ.9 ಕೇಂದ್ರ ಮಂತ್ರಿಗಳು, ಇಬ್ಬರು ಮಾಜಿ ಮುಖ್ಯಮಂತ್ರಿಗಳು, ಓರ್ವ ಮಾಜಿ ರಾಜ್ಯಪಾಲೆ ಕಣದಲ್ಲಿದ್ದಾರೆ. ಡಿಎಂಕೆಯ ಕನಿಮೋಳಿ, ಬಿಜೆಪಿಯ ಕೆ. ಅಣ್ಣಾಮಲೈ ಅವರು ಮೊದಲ ಹಂತದಲ್ಲಿ ಕಣದಲ್ಲಿರುವ ಪ್ರಮುಖರು.

ಇದೇ ವೇಳೆ, ಅರುಣಾಚಲಪ್ರದೇಶ ವಿಧಾನಸಭೆಯ ಎಲ್ಲ 60 ಹಾಗೂ ಸಿಕ್ಕಿಂ ವಿಧಾನಸಭೆಯ ಎಲ್ಲ 32 ಸ್ಥಾನಗಳಿಗೂ ಶುಕ್ರವಾರವೇ ಚುನಾವಣೆ ನಡೆಯಲಿದೆ. ಮತ ಚಲಾಯಿಸಲು 16.63 ಕೋಟಿಗೂ ಹೆಚ್ಚು ಮಂದಿ ಅರ್ಹತೆ ಪಡೆದಿದ್ದಾರೆ.

ಮೊದಲ ಹಂತದ ಮತದಾನದಲ್ಲಿ 102 ಸ್ಥಾನಗಳಲ್ಲಿ 1625 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಅದರಲ್ಲಿ 134 ಮಹಿಳಾ ಅಭ್ಯರ್ಥಿಗಳು ಮತ್ತು 1491 ಪುರುಷ ಅಭ್ಯರ್ಥಿಗಳಾಗಿದ್ದಾರೆ.
ತಮಿಳುನಾಡಿನ 39, ಉತ್ತರ ಪ್ರದೇಶದ 8, ಮಹಾರಾಷ್ಟ್ರದ 5, ರಾಜಸ್ಥಾನದ 12, ಬಿಹಾರದ 4, ನಾಗಾಲ್ಯಾಂಡ್‌ನ 1, ಅಸ್ಸಾಂನ 4, ಛತ್ತೀಸ್‌ಗಡದ 1, ಮಧ್ಯಪ್ರದೇಶದ 6, ಮಣಿಪುರದ 2, ಮಿಜೋರಾಂ ನ 1, ಮೇಘಾಲಯದ 2, ಅರುಣಾಚಲ ಪ್ರದೇಶದ 2, ಉತ್ತರಾಖಂಡದ 5, ಪಶ್ಚಿಮ ಬಂಗಾಳದ 3, ತ್ರಿಪುರಾದ 1, ಸಿಕ್ಕಿಂನ 1 ಹಾಗೂ ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು ಮತ್ತು ಕಾಶ್ಮೀರದ 1, ಲಕ್ಷದ್ವೀಪದ 1 ಹಾಗೂ ಪುದುಚೇರಿಯ 1 ಲೋಕಸಭಾ ಕ್ಷೇತ್ರಕ್ಕೆ ಮತದಾನ ನಡೆಯುತ್ತಿದೆ.

ಮತದಾನವು ಬೆಳಿಗ್ಗೆ 7 ಗಂಟೆಗೆ ಶುರುವಾಗಿದ್ದು, ಸಂಜೆ 6ಕ್ಕೆ ಮುಕ್ತಾಯವಾಗಲಿದೆ. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿಯನ್ನು ಒಂದೆಡೆಯಿಂದ ಇನ್ನೊಂದೆಡೆ ಕರೆದೊಯ್ಯಲು 41 ಹೆಲಿಕಾಪ್ಟರ್‌ಗಳು, 84 ವಿಶೇಷ ರೈಲುಗಳು ಹಾಗೂ ಸರಿಸುಮಾರು ಒಂದು ಲಕ್ಷ ವಾಹನಗಳ ವ್ಯವಸ್ಥೆ ಮಾಡಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗವು ಮಾಹಿತಿ ನೀಡಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *