ನಕಲಿ ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಶಾಕ್; ರಾಜ್ಯ ಸರ್ಕಾರದಿಂದ ಬಂತು ಆದೇಶ….!
ನ್ಯೂಸ್ ಆ್ಯರೋ : ರಾಜ್ಯದಲ್ಲಿ ನಕಲಿ ದಾಖಲೆ ನೀಡಿ ಅಕ್ರಮವಾಗಿ ಬಿಪಿಎಲ್ ಕಾರ್ಡ್ ಪಡೆದುಯುವವರ ಸಂಖ್ಯೆ ಹೆಚ್ಚುತ್ತಿರುವುದರಿಂದ, ಅಕ್ರಮವಾಗಿ ಬಿಪಿಎಲ್ ಕಾರ್ಡ್ ಪಡೆದುಕೊಂಡವರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ.
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಚಿವರು ಅಕ್ರಮ ಬಿಪಿಎಲ್ ಕಾರ್ಡ್ ಪಡೆದವರಿಗೆ ಕಡಿವಾಣ ಹಾಕುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದರು. ಇದೀಗ ಸಿಎಂ ಅಕ್ರಮ ಬಿಪಿಎಲ್ ಕಾರ್ಡ್ ಕಡಿವಾಣಕ್ಕೆ ಸೂಚನೆಯನ್ನು ನೀಡಿದ್ದಾರೆ.
ಈ ಮೂಲಕ ರಾಜ್ಯ ಸರ್ಕಾರ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಬಿಸಿ ಮುಟ್ಟಿಸಿದೆ. ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದಿದ್ಧವರು ನ್ಯಾಯ ಬೆಲೆ ಅಂಗಡಿಗಳಲ್ಲಿ ಈವರೆಗೆ ಪಡೆದ ಅಕ್ಕಿ ಹಾಗೂ ಇತರೆ ಧಾನ್ಯಗಳ ಮೊತ್ತವನ್ನು ನೀಡುವುದರ ಜೊತೆಗೆ, ಅಂತಹವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಲಾಗುವುದು ಎಂದು ಎಚ್ಚರಿಸಿದೆ.
ರಾಜ್ಯದಲ್ಲಿ ಈವರೆಗೆ 10,97,621 ಅಕ್ರಮ ಬಿಪಿಎಲ್ ಕಾರ್ಡ್ ಪತ್ತೆಯಾಗಿದ್ದು, ಇದರಲ್ಲಿ 98,431 ಮಂದಿ ಆದಾಯ ತೆರಿಗೆ ಪಾವತಿದಾರರು, 10,04,716 ಮಂದಿ 1.20 ಲಕ್ಷ ರೂ.ಗಳ ಅಧಿಕ ಆದಾಯ ಹೊಂದಿದವವರು, 4,036 ಮಂದಿ ಸರ್ಕಾರಿ ನೌಕರರು ಪಡೆದಿರುವುದು ತಿಳಿದು ಬಂದಿದೆ.
Leave a Comment