ಸಿಎಂ ಸಿದ್ದರಾಮಯ್ಯ ರಾಜಕೀಯ ಭವಿಷ್ಯ ಇಂದು ನಿರ್ಧಾರ – ಮುಡಾ ಹಗರಣದ ತೀರ್ಪು ನೀಡಲಿರುವ ಹೈಕೋರ್ಟ್
ನ್ಯೂಸ್ ಆ್ಯರೋ : ರಾಜ್ಯಾದ್ಯಂತ ಸುದ್ದಿಯಲ್ಲಿರುವ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಇಂದು ಮಧ್ಯಾಹ್ನ 3 ಗಂಟೆಗೆ ಹೈಕೋರ್ಟ್ ನಡೆಸಲಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಹಾಂ, ಸ್ನೇಹಮಯಿ ಕೃಷ್ಣ ಹಾಗೂ ಜೆಡಿಎಸ್ ವಕ್ತಾರ ಪ್ರದೀಪ್ ರಾಜ್ಯಪಾಲರಿಗೆ ದೂರು ನೀಡಿದ್ದರು.
ಇದಾದ ಬಳಿಕ ರಾಜ್ಯಪಾಲರು ಬಳಿಕ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಇಂದು ಹೈಕೋರ್ಟ್ ನಡೆಸಲಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ 19 ರಂದು ಹೈಕೋರ್ಟಿಗೆ 712 ಪುಟಗಳ ರಿಟ್ ಅರ್ಜಿ ಸಲ್ಲಿಸಿದ್ದರು. ಸೆಪ್ಟೆಂಬರ್ 2 ರಂದು ಹೈಕೋರ್ಟ್ ನಲ್ಲಿ ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ವಿಚಾರಣೆಯನ್ನು ಸೆ.9 ರ ಇಂದು ಮುಂದೂಡಿದ್ದರು.
Leave a Comment