ರೇಣುಕಾಸ್ವಾಮಿ ಕೊಲೆ ಕೇಸ್ ಚಾರ್ಜ್ ಶೀಟ್ ನ ಅಂಶಗಳ ಮಾಧ್ಯಮ ಪ್ರಸಾರಕ್ಕೆ ನಿರ್ಬಂಧ – ಕಿಲ್ಲಿಂಗ್ ಸ್ಟಾರ್ ದರ್ಶನ್ ಮನವಿಗೆ ಹೈಕೋರ್ಟ್ ಅಸ್ತು
ನ್ಯೂಸ್ ಆ್ಯರೋ : ರೇಣುಕಸ್ವಾಮಿ ಕೊಲೆ ಪ್ರಕರಣದ ಸಂಬಂಧಿತ ಆರೋಪ ಪಟ್ಟಿಯಲ್ಲಿನ ಗೌಪ್ಯ ಮಾಹಿತಿಯನ್ನು ಪ್ರಸಾರ, ಪ್ರಕಟ, ಹಂಚಿಕೆ ಮಾಡದಂತೆ ವಿದ್ಯುನ್ಮಾನ, ಮುದ್ರಣ ಮತ್ತು ಸಾಮಾಜಿಕ ಮಾಧ್ಯಮಗಳಿಗೆ ಕರ್ನಾಟಕ ಹೈಕೋರ್ಟ್ ನಿರ್ಬಂಧ ವಿಧಿಸಿದೆ.
ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಆರೋಪ ಪಟ್ಟಿ ಮತ್ತು ಅದಕ್ಕೆ ಪೂರಕವಾದ ಇತರೆ ಯಾವುದೇ ಅಂಶಗಳನ್ನು ಪ್ರಸಾರ ಮಾಡದಂತೆ ಮಾಧ್ಯಮ ಸಂಸ್ಥೆಗಳನ್ನು ನಿರ್ಬಂಧಿಸಲು ಕೇಂದ್ರ ಸರ್ಕಾರಕ್ಕೆ ಆದೇಶಿಸಬೇಕು ಎಂದು ಕೋರಿ ನಟ ದರ್ಶನ್ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ನ್ಯಾಯಾಲಯದ ಈ ಆದೇಶ ಉಲ್ಲಂಘಿಸಿದರೆ ಕ್ರಮಕೈಗೊಳ್ಳುವಂತೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದೆ. ಹಾಗೆಯೇ ಈ ಆದೇಶವನ್ನು ಪ್ರತಿವಾದಿ ಮಾಧ್ಯಮಗಳಿಗೆ ರವಾನಿಸಲು ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ.
ಹಾಗಾಗಿ ಇನ್ಮುಂದೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೋಲಿಸರು ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಉಲ್ಲೇಖವಾದ ಅಂಶಗಳನ್ನು ವರದಿ ಮಾಡದಂತೆ ಎಲ್ಲಾ ಮಾಧ್ಯಮಗಳಿಗೂ ಬ್ರೇಕ್ ಬೀಳಲಿದೆ.
Leave a Comment