ಥೈಲ್ಯಾಂಡ್​ನಲ್ಲಿ ಶಾಲಾ ಬಸ್​ಗೆ ಬೆಂಕಿ, 25 ವಿದ್ಯಾರ್ಥಿಗಳು ಸಾವು

At least 25 students dead as school bus with 44 catches fire
Spread the love

ಥೈಲ್ಯಾಂಡ್: ಥೈಲ್ಯಾಂಡ್​ನಲ್ಲಿ​ 44 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಶಾಲಾ ಬಸ್​ ಬೆಂಕಿಯಿಂದ ಹೊತ್ತಿ ಉರಿದಿದ್ದು ಪರಿಣಾಮ 25 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ರಕ್ಷಣಾ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿರುವಾಗ ಹೆಚ್ಚಿನ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಬೆಂಕಿಯ ಕಾರಣ ಇದುವರೆಗೆ ತಿಳಿದಿಲ್ಲ.

ಸ್ಥಳೀಯ ಕಾಲಮಾನ ಮಧ್ಯಾಹ್ನ 12.30 ರ ಸುಮಾರಿಗೆ ಥೈಲ್ಯಾಂಡ್​ನ ರಂಗ್‌ಸಿಟ್ ಶಾಪಿಂಗ್ ಮಾಲ್ ಬಳಿಯ ಫಾಹೋನ್ ಯೋಥಿನ್ ರಸ್ತೆಯಲ್ಲಿ ಅವಘಡ ಸಂಭವಿಸಿದೆ. ಲಾನ್ ಸಕ್ ಜಿಲ್ಲೆಯ ವಾಟ್ ಖಾವೊ ಪ್ರಾಯ ಸಂಘರಮ್‌ನಿಂದ ಆಯೋಜಿಸಲಾದ ಶೈಕ್ಷಣಿಕ ಪ್ರವಾಸದಲ್ಲಿ ಆರು ಶಿಕ್ಷಕರು ಸಹ ಭಾಗವಹಿಸಿದ್ದರು. ಅವರ ಬಗ್ಗೆ ಮಾಹಿತಿ ಇದುವರೆಗೂ ಲಭ್ಯವಾಗಿಲ್ಲ. ಗೃಹ ಸಚಿವ ಅನುತಿನ್ ಚರಣ್ವಿರಾಕುಲ್ ಅವರು ಘಟನಾ ಸ್ಥಳದಲ್ಲಿ ತನಿಖೆಯನ್ನು ಪೂರ್ಣಗೊಳಿಸದ ಕಾರಣ ಸಾವಿನ ಸಂಖ್ಯೆಯನ್ನು ಅಧಿಕಾರಿಗಳು ಇನ್ನೂ ಖಚಿತಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಆದರೆ ಬದುಕುಳಿದವರ ಸಂಖ್ಯೆಯನ್ನು ಆಧರಿಸಿ, 25 ಜನರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಇಡೀ ಬಸ್ ಬೆಂಕಿಗೆ ಆಹುತಿಯಾಗಿರುವುದು ಕಂಡು ಬಂದಿದೆ.

Leave a Comment

Leave a Reply

Your email address will not be published. Required fields are marked *

error: Content is protected !!