ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್

madhu bangarappa distributie egg
Spread the love

ಶಿವಮೊಗ್ಗ: ವಾರದ ಏಳು ದಿನಗಳ ಕಾಲ ಮಧ್ಯಾನದ ಬಿಸಿ ಊಟದೊಂದಿಗೆ ಪೌಷ್ಟಿಕ ಆಹಾರ ಮೊಟ್ಟೆ ವಿತರಣೆ ಮಾಡಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಹೇಳಿದರು.

ಇಂದು ಅಜೀಮ್ ಪ್ರೇಮ್ ಜಿ ಫೌಂಡೇಶನ್ ಸಹಯೋಗದೊಂದಿಗೆ ಸಾಗರದ ಗಾಂಧಿ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ಈ ಹಿಂದೆ ವಾರದಲ್ಲಿ ಒಂದು ದಿನ ನೀಡಲಾಗುತ್ತಿದ್ದ ಮೊಟ್ಟೆಯನ್ನು 2ದಿನಗಳಿಗೆ ಹೆಚ್ಚಿಸಲಾಗಿತ್ತು. ಇದೀಗ ವಿಪ್ರೊ ಸಂಸ್ಥೆಯ ಮುಖ್ಯಸ್ಥ ಅಜೀಮ್ ಪ್ರೇಮ್ ಜಿ ಅವರ 1591ಕೋಟಿ ರೂ. ಗಳ ಆರ್ಥಿಕ ನೆರವಿನಿಂದ ಮುಂದಿನ ಮೂರು ವರ್ಷಗಳ ಅವಧಿಗೆ ಮೊಟ್ಟೆ ವಿತರಿಸಲು ಒಡಂಬಡಿಕೆ ಮಾಡಿಕೊಂಡಿದೆ ಎಂದರು.

ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಕಾರ್ಯಕ್ರಮವನ್ನು ಅನುಷ್ಠಾನ ಗೊಳಿಸಲಾಗುತ್ತಿದೆ. ಕಳೆದ ವಾರ ರಾಜ್ಯದ ಯಾದಗಿರಿ ಜಿಲ್ಲಾ ಕೇಂದ್ರದಲ್ಲಿ ಮುಖ್ಯಮಂತ್ರಿಗಳು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ ಈಗಾಗಲೇ ಪೌಸ್ತಿಕ ಆಹಾರ ಹಾಲು, ರಾಗಿಮಾಲ್ಟ್ ನ್ನು ಮಕ್ಕಳಿಗೆ ನೀಡಲಾಗುತ್ತಿದೆ. ರಾಜ್ಯದಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಸೇರಿದಂತೆ 1 ರಿಂದ 10ನೇ ತರಗತಿಯವರೆಗಿನ ಒಟ್ಟು 76,000 ಶಾಲೆಗಳ 57 ಲಕ್ಷ ಮಕ್ಕಳಿಗೆ ವಾರದ ಏಳು ದಿನವೂ ಮೊಟ್ಟೆ ವಿತರಣೆ ಮಾಡಲಾಗುತ್ತದೆ ಎಂದರು.

Leave a Comment

Leave a Reply

Your email address will not be published. Required fields are marked *