ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ: ʼಅತಿಥಿ ಶಿಕ್ಷಕರ’ ನೇಮಕಕ್ಕೆ ರಾಜ್ಯ ಸರ್ಕಾರ ಆದೇಶ

ನ್ಯೂಸ್ ಆ್ಯರೋ: ರಾಜ್ಯ ಸರ್ಕಾರದಿಂದ ಮತ್ತೆ 1,755 ಅತಿಥಿ ಶಿಕ್ಷಕರ ನೇಮಕಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿಯನ್ನು ನೀಡಲಾಗಿದೆ.
ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, 2024-25 ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಯಾವುದು ಮೊದಲೂ ಅಲ್ಲಿಯವರೆಗೆ ಶಿಕ್ಷಕರ ಕೊರತೆಯನ್ನು ನೀಗಿಸುವ ದೃಷ್ಟಿಯಿಂದ ಒಟ್ಟು 35000 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಸರ್ಕಾರದ ಆದೇಶ ಸಂಖ್ಯೆ ಇಪಿ 166 ಎಸ್ಇ.ಎಸ್.2023 ದಿನಾಂಕ 01.06.2023 ಆದೇಶದಲ್ಲಿ ಅನುಮತಿ ನೀಡಲಾಗಿದೆ ಎಂದಿದೆ.
ಅದರಂತೆ, ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಪ್ರಾಥಮಿಕ ಶಾಲಾ ಶಿಕ್ಷಕರು (1 ರಿಂದ 5 ನೇ ತರಗತಿ) ಹಾಗೂ ಪದವೀಧರ ಪ್ರಾಥಮಿಕ ಶಿಕ್ಷಕರು (6 ರಿಂದ 8 ನೇ ತರಗತಿ) ವೃಂದದ ಹುದ್ದೆಗಳಿಗೆ ಎದುರಾಗಿ ಅತಿಥಿ ಶಿಕ್ಷಕರನ್ನು ಷರತ್ತಿಗೊಳಪಟ್ಟು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅತಿಥಿ ಶಿಕ್ಷಕರ ಹುದ್ದೆಗಳನ್ನು ಹಂಚಿಕೆ ಮಾಡಿ ಆದೇಶಿಸಲಾಗಿತ್ತು ಎಂದು ತಿಳಿಸಿದ್ದಾರೆ.
Leave a Comment