5 ಭಾಷೆಗಳಿಗೆ ಶಾಸ್ತ್ರೀಯ ಭಾಷೆ ಸ್ಥಾನಮಾನ; ಕೇಂದ್ರ ಸಚಿವ ಸಂಪುಟ ಅನುಮೋದನೆ

5 new classical languages
Spread the love

ನ್ಯೂಸ್ ಆ್ಯರೋ: ಕೇಂದ್ರ ಸಚಿವ ಸಂಪುಟವು ಇನ್ನೂ ಐದು ಭಾಷೆಗಳನ್ನು “ಶಾಸ್ತ್ರೀಯ” ಎಂದು ಗುರುತಿಸಲು ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಗುರುವಾರ ಹೇಳಿದ್ದಾರೆ. ಮರಾಠಿ, ಪಾಲಿ, ಪ್ರಾಕೃತ, ಅಸ್ಸಾಮಿ, ಬೆಂಗಾಲಿ ಭಾಷೆಗಳನ್ನು ಪ್ರತಿಷ್ಠಿತ ವಿಭಾಗದಲ್ಲಿ ಸೇರಿಸಲಾಗಿದೆ ಎಂದು ವೈಷ್ಣವ್ ಹೇಳಿದರು.

ಪ್ರಧಾನಿ ಮೋದಿಯವರು ಯಾವಾಗಲೂ ಭಾರತೀಯ ಭಾಷೆಗಳ ಮೇಲೆ ಗಮನ ಕೇಂದ್ರೀಕರಿಸಿದ್ದಾರೆ.ಇಂದು ಐದು ಭಾಷೆಗಳು ಮರಾಠಿ, ಪಾಲಿ, ಪ್ರಾಕೃತ, ಅಸ್ಸಾಮಿ ಮತ್ತು ಬೆಂಗಾಲಿಯನ್ನು ಶಾಸ್ತ್ರೀಯ ಭಾಷೆಗಳಾಗಿ ಅಂಗೀಕರಿಸಲಾಗಿದೆ ಎಂದು ವೈಷ್ಣವ್ ಹೇಳಿದರು.

ಈ ಭಾಷೆಗಳು ಈಗಾಗಲೇ ಶಾಸ್ತ್ರೀಯವೆಂದು ಗುರುತಿಸಲ್ಪಟ್ಟಿರುವ ಇತರ ಆರು ಭಾಷೆಗಳಾದ ತಮಿಳು, ಸಂಸ್ಕೃತ, ತೆಲುಗು, ಕನ್ನಡ, ಮಲಯಾಳಂ ಮತ್ತು ಒಡಿಯಾದ ಪಟ್ಟಿಗೆ ಸೇರುತ್ತವೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅಸ್ಸಾಮಿಯನ್ನು ಶಾಸ್ತ್ರೀಯ ಭಾಷೆಯಾಗಿ ಸೇರ್ಪಡೆ ಮಾಡಿದ್ದಕ್ಕೆ ಧನ್ಯವಾದ ತಿಳಿಸಿದ್ದಾರೆ.

Leave a Comment

Leave a Reply

Your email address will not be published. Required fields are marked *