ರಾಜ್ಯಾದ್ಯಂತ ಕಬಾಬ್, ಫಿಶ್ ಗೆ ಬಳಸುವ ಕೃತಕ ಬಣ್ಣ ನಿಷೇಧ – ಉಲ್ಲಂಘಿಸಿದರೆ 10 ಲಕ್ಷ ದಂಡ, ಜೈಲೂಟ ಫಿಕ್ಸ್…!!

20240625 061709
Spread the love

ನ್ಯೂಸ್ ಆ್ಯರೋ : ಕರ್ನಾಟಕ ರಾಜ್ಯಾದ್ಯಂತ ಆಹಾರಗಳಲ್ಲಿ ಬಳಸುವ ಕೃತಕ ಬಣ್ಣವನ್ನು ನಿಷೇಧಿಸಿ ಸರ್ಕಾರ ಆದೇಶಿಸಿದೆ. ಅಂದರೆ ಕಬಾಬ್, ಫಿಶ್, ಚಿಕನ್ ಗೆ ಬಳಸುವಂತ ಕೃತಕ ಬಣ್ಣವನ್ನು ರಾಜ್ಯಾದ್ಯಂತ ನಿಷೇಧ ಮಾಡಿ, ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರು ಈ ಆದೇಶ ಹೊರಡಿಸಿದ್ದು, ಅದರಲ್ಲಿ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್‌ಗಳು ಗುಣಮಟ್ಟ ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಕಳಪೆಯಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದಾಗಿ ಮಾಧ್ಯಮಗಳಲ್ಲಿ ಮತ್ತು ಸಾರ್ವಜನಿಕರಿಂದ ವರದಿಯಾಗುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ವಿಶ್ಲೇಷಣೆಗೊಳಪಡಿಸಲಾಗಿರುತ್ತದೆ ಎಂದಿದ್ದಾರೆ.

Kn Bng 03 Artificial Colors In The Preparation Of Kebabs Is Prohibited Script 7208083 24062024183813 2406f 1719234493 884
Kn Bng 03 Artificial Colors In The Preparation Of Kebabs Is Prohibited Script 7208083 24062024183813 2406f 1719234493 20

ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ 39 ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ವಿಶ್ಲೇಷಣೆಗೊಳಪಡಿಸಲಾಗಿರುತ್ತದೆ. ವಿಶ್ಲೇಷಣೆಗೊಳಪಡಿಸಲಾದ ಮಾದರಿಗಳಲ್ಲಿ 08 ಕಬಾಬ್‌ ಮಾದರಿಗಳು ಕೃತಕ ಬಣ್ಣದಿಂದ (ಸನ್‌ಸೆಟ್ ಯೆಲ್ಲೋ 07 ಮಾದರಿಗಳು ಹಾಗೂ ಸನ್‌ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್ ಹೊಂದಿರುವ ಮಾದರಿಗಳು 01) ಕೂಡಿರುವುದರಿಂದ ಅಸುರಕ್ಷಿತ ಎಂದು ವಿಶ್ಲೇಷಣಾ ವರದಿಗಳಲ್ಲಿ ಕಂಡುಬಂದಿದ್ದು, The Food Safety and Standards Act, 2006 ರ ನಿಯಮ 3(1) (zz)(viii)ರನ್ವಯ ಅಸುರಕ್ಷಿತ ಎಂದು ವರದಿ ಮಾಡಲ್ಪಟ್ಟಿರುತ್ತವೆ ಎಂದು ತಿಳಿಸಿದ್ದಾರೆ.

The Food Safety and Standards (Food Products Standards and Food Additives) Regulations, 2011 ರ ನಿಯಮ 16.0 ರನ್ವಯ ಕಬಾಬ್‌ನ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಉಪಯೋಗಿಸುವಂತಿರುವುದಿಲ್ಲ. ಕೃತಕ ಬಣ್ಣಗಳು ಬಳಕೆದಾರರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟು ಮಾಡಬಹುದಾಗಿರುತ್ತದೆ ಎಂದಿದ್ದಾರೆ.

ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ ತಯಾರಿಸುವವರ ವಿರುದ್ಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 59ರಡಿ 7 ವರ್ಷಗಳಿಂದ ಜೀವಾವಧಿ ಅವಧಿಯವರೆಗೆ ಜೈಲು ಶಿಕ್ಷೆಯನ್ನು ಮತ್ತು ರೂ.10.00 ಲಕ್ಷಗಳವರೆಗೆ ದಂಡವನ್ನು ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂಬುದಾಗಿ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

Leave a Comment

Leave a Reply

Your email address will not be published. Required fields are marked *