ರೈತರಿಗೆ ಭರ್ಜರಿ ಗುಡ್ ನ್ಯೂಸ್: ಇಂದು ಬಿಡುಗಡೆಯಾಗಲಿದೆ ಪಿಎಂ ಕಿಸಾನ್ ಸಮ್ಮಾನ್ ನಿಧಿ
ನ್ಯೂಸ್ ಆ್ಯರೋ: ಪ್ರಧಾನಿ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆ ಪಿಎಂ ಕಿಸಾನ್ ಸಮ್ಮಾನ್ ನಿಧಿಯ 18ನೇ ಕಂತಿನ ಹಣವನ್ನು ಕೇಂದ್ರ ಸರ್ಕಾರ ಇಂದು ಬಿಡುಗಡೆ ಮಾಡಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ವಾಶಿಮ್‌ನಿಂದ ಪಿಎಂ ಕಿಸಾನ್‌ನ ಹಣವನ್ನುರೈತರ ಖಾತೆಗೆ ಕಳಿಸಲಿದ್ದಾರೆ ಎನ್ನಲಾಗಿದೆ.
ದೇಶದಲ್ಲಿ ಒಟ್ಟಾರೆ 9.5 ಕೋಟಿ ಫಲಾನುಭವಿ ರೈತರ ಖಾತೆಗಳಿಗೆ ಒಟ್ಟಾರೆಯಾಗಿ 20 ಸಾವಿರ ಕೋಟಿ ರೂಪಾಯಿ ಹಣ ವರ್ಗಾವಣೆ ಆಗಲಿದೆ ಎನ್ನಲಾಗಿದೆ. ರೈತರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಪ್ರತಿ ವರ್ಷ 6 ಸಾವಿರ ರೂಪಾಯಿಗಳನ್ನು ಮೂರು ಕಂತುಗಳಲ್ಲಿ ನೀಡುತ್ತದೆ. ಇಲ್ಲಿಯವರೆಗೂ 17 ಕಂತುಗಳಲ್ಲಿ ಹಣ ನೀಡಲಾಗಿದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಆರಂಭವಾದಾಗಿನಿಂದ ಇಲ್ಲಿಯವರೆಗೂ ಒಟ್ಟು 74, 492.71 ಕೋಟಿ ರೂಪಾಯಿಯನ್ನು ರೈತರ ಖಾತೆಗಳಿಗೆ ಹಾಕಲಾಗಿದೆ.
ಇಂದು ಒಟ್ಟಾರೆ ದೇಶದ 9.51 ಕೋಟಿ ರೈತರ ಖಾತೆಗಳಿಗೆ 20, 552 ಕೋಟಿ ರೂಪಾಯಿ ಹಣ ವರ್ಗಾವಣೆಯಾಗಲಿದೆ ಎನ್ನಲಾಗಿದೆ. ಇನ್ನು ಪಿಎಂ ಕಿಸಾನ್ ಯೋಜನೆಯಡಿ ರೈತರು ತಮ್ಮ ಕೆಲವು ದಾಖಲೆಗಳನ್ನು ನೀಡುವುದರ ಜೊತೆಗೆ ಇ-ಕೆವೈಸಿ ಮಾಡಿಸಿಕೊಳ್ಳಬೇಕು. ನೀವು ಕೂಡ ಈ ಯೋಜನೆಯ ಮುಂದಿನ ಕಂತಿಗಾಗಿ ಕಾಯುತ್ತಿದ್ದರೆ, ನಿಮ್ಮ ನೋಂದಣಿ ಸಂಖ್ಯೆಯನ್ನು ನೆನಪಿನಲ್ಲಿಟ್ಟುಕೊಳ್ಳಿ ಮತ್ತು ಇ-ಕೆವೈಸಿ ವಿವರಗಳನ್ನು ತಕ್ಷಣವೇ ನವೀಕರಿಸಿ. ಪಿಎಂ ಕಿಸಾನ್ ಯೋಜನೆಯಲ್ಲಿ ಇ-ಕೆವೈಸಿ ಕಡ್ಡಾಯ ಪ್ರಕ್ರಿಯೆಯಾಗಿದೆ. ಇದರಲ್ಲಿ ಆಧಾರ್‌ಗೆ ಲಿಂಕ್ ಮಾಡಲಾದ ಮೊಬೈಲ್ ಸಂಖ್ಯೆ ಅಥವಾ ಸಿಎಸ್‌ಸಿ ಕೇಂದ್ರದಿಂದ ಬಯೋಮೆಟ್ರಿಕ್ ಮೂಲಕ ಪೂರ್ಣಗೊಳಿಸಲಾಗುತ್ತದೆ.
ಪ್ರಧಾನ ಮಂತ್ರಿ ಕಿಸಾನ್ ಯೋಜನೆಗೆ ಸಂಬಂಧಿಸಿದಂತೆ ನಿಮಗೆ ಯಾವುದೇ ಸಮಸ್ಯೆ ಇದ್ದರೆ, pmkisan-ict@gov.in ಇಮೇಲ್ ಐಡಿಗೆ ಬರೆದು ಸಹಾಯ ಪಡೆಯಬಹುದು. ಇದಲ್ಲದೆ, 155261, 1800115526 ಅಥವಾ 011-23381092 ಟೋಲ್ ಫ್ರೀ ಸಹಾಯವಾಣಿ ಸಂಖ್ಯೆಗಳಲ್ಲಿ ಸಹ ನೀವು ಸಹಾಯ ಪಡೆಯಬಹುದು.
Leave a Comment