ಹರಿಯಾಣದಲ್ಲಿ ಬಿಜೆಪಿಗೆ ಬಿಗ್ ಶಾಕ್: ‘ಮ್ಯಾಜಿಕ್ ನಂಬರ್’ ದಾಟಿದ ಕಾಂಗ್ರೆಸ್

Election Result News
Spread the love

ನ್ಯೂಸ್ ಆ್ಯರೋ: ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ 2024 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ . ಹರಿಯಾಣದಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ ಸಾಧಿಸಿದೆ. ಇತ್ತ ಜಮ್ಮು& ಕಾಶ್ಮೀರದಲ್ಲಿ ಕಾಂಗ್ರೆಸ್ ಮೈತ್ರಿಕೂಟ ಭರ್ಜರಿ ಮುನ್ನಡೆ ಸಾಧಿಸಿದೆ. ಆರಂಭಿಕ ಸುತ್ತುಗಳಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ.

90 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಹರಿಯಾಣದಲ್ಲಿ ಬಹುಮತಕ್ಕೆ 46 ಸ್ಥಾನಗಳು ಬೇಕಿದ್ದು, ಕಾಂಗ್ರೆಸ್ ಪಕ್ಷ 51 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಬಿಜೆಪಿ 27 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಐ.ಎನ್.ಎಲ್.ಡಿ. ಎರಡು ಸ್ಥಾನಗಳಲ್ಲಿ ಹಾಗೂ ಇತರರು ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದಾರೆ.

ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷ ಮ್ಯಾಜಿಕ್ ನಂಬರ್ ದಾಟಿದೆ. ಸಮೀಕ್ಷೆಗಳಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಲಾಗಿತ್ತು. ಮಧ್ಯಾಹ್ನದೊಳಗೆ ಯಾವ ಪಕ್ಷ ಎಷ್ಟು ಸ್ಥಾನ ಗಳಿಸಿ ಅಧಿಕಾರಕ್ಕೆ ಬರಲಿದೆ ಎನ್ನುವುದರ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ. ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ಆಡಳಿತ ವಿರೋಧಿ ಅಲೆಯಿಂದ ಹಿನ್ನಡೆಯಾಗಿದೆ ಎನ್ನಲಾಗಿದೆ.

Leave a Comment

Leave a Reply

Your email address will not be published. Required fields are marked *