ಹರಿಯಾಣದಲ್ಲಿ ಕಾಂಗ್ರೆಸ್-ಬಿಜೆಪಿ ಮಧ್ಯೆ ಬಿಗ್ ಫೈಟ್: ಗೆಲ್ತಾರಾ ವಿನೇಶ್ ಫೋಗಟ್?
ನ್ಯೂಸ್ ಆ್ಯರೋ: ಹರಿಯಾಣ ವಿಧಾನಸಭೆಯ ಚುನಾವಣಾ ಫಲಿತಾಂಶ ರೋಚಕ ಹಂತ ತಲುಪಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ಜಿದ್ದಾಜಿದ್ದಿನ ಹೋರಾಟ ಕಂಡು ಬಂದಿದ್ದು, ಮತದಾರನ ತೀರ್ಪು ತೀವ್ರ ಕುತೂಹಲ ಕೆರಳಿಸಿದೆ. ಕಾಂಗ್ರೆಸ್ ಅನ್ನು ಹಿಂದಿಕ್ಕಿರುವ ಬಿಜೆಪಿ ಮುನ್ನಡೆ ಸಾಧಿಸಿದ್ರೆ ಚುನಾವಣಾ ಫಲಿತಾಂಶದಲ್ಲಿ ಹಾವ-ಏಣಿ ಆಟ ಇನ್ನೂ ಮುಂದುವರೆದಿದೆ.
90 ಸ್ಥಾನಕ್ಕೆ ನಡೆದಿರುವ ಚುನಾವಣೆಯಲ್ಲಿ 46 ಮ್ಯಾಜಿಕ್ ನಂಬರ್. ಸದ್ಯದ ಮತ ಎಣಿಕೆಯಲ್ಲಿ ಬಿಜೆಪಿಗೆ 48 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಅಭ್ಯರ್ಥಿಗಳು ಕೂಡ 35 ಕ್ಷೇತ್ರಗಳಲ್ಲಿ ಗೆಲುವಿಗಾಗಿ ಹೋರಾಡುತ್ತಿದ್ದಾರೆ. INLD ಮೂರು ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.
ಮತ ಎಣಿಕೆಯ ಪ್ರಾರಂಭದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು 45ಕ್ಕಿಂತ ಹೆಚ್ಚಿನ ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದ್ದರು. ಇದರಿಂದ ಹರಿಯಾಣದಲ್ಲಿ ಈ ಭಾರಿ ಕಾಂಗ್ರೆಸ್‌ಗೆ ಅಧಿಕಾರದ ಗದ್ದುಗೆ ಸಿಗುವ ಮುನ್ಸೂಚನೆ ಸಿಕ್ಕಿತ್ತು. ಆದರೆ ಈಗ ಕಾಂಗ್ರೆಸ್ ಲೆಕ್ಕಾಚಾರ ಸಂಪೂರ್ಣ ತಲೆ ಕೆಳಗಾಗಿದೆ. ಬಿಜೆಪಿ ಪಕ್ಷ ಮ್ಯಾಜಿಕ್ ನಂಬರ್ ತಲುಪಿದ್ರೆ ಹ್ಯಾಟ್ರಿಕ್ ಗೆಲುವು ಪಕ್ಕಾ ಅನ್ನೋ ಲೆಕ್ಕಾಚಾರದಲ್ಲಿದೆ.
ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ಅವರು ಹರಿಯಾಣದ ಜೂಲಾನಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಜೂಲಾನಾ ಕ್ಷೇತ್ರ ಹೈವೋಲ್ಟೇಜ್ ಅಖಾಡವಾಗಿದ್ದು ವಿನೇಶ್ ಫೋಗಟ್ ಅವರು ಸಹ ಆರಂಭದಲ್ಲಿ ಹಿನ್ನಡೆ ಸಾಧಿಸಿದ್ದು ಆಘಾತ ಎದುರಾಗಿತ್ತು. ಆದರೆ 10ನೇ ಸುತ್ತಿನ ಮತ ಎಣಿಕೆಯಲ್ಲಿ ಫೋಗಟ್ ಅವರು 4000 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಜೂಲಾನಾ ಕ್ಷೇತ್ರದಲ್ಲಿ ವಿನೇಶ್ ಫೋಗಟ್ ಅವರ ವಿರುದ್ಧ ಬಿಜೆಪಿಯ ಯೋಗೇಶ್ ಕುಮಾರ್ ಅವರು ಹಿನ್ನಡೆ ಅನುಭವಿಸಿದ್ದಾರೆ. ಮತ ಎಣಿಕೆಯಲ್ಲಿ ಇನ್ನೂ ಹಾವು-ಏಣಿಯಾಟ ಮುಂದುವರಿದಿದ್ದು, ವಿನೇಶ್ ಫೋಗಟ್ ಸೋಲು, ಗೆಲುವು ತೀವ್ರ ಕುತೂಹಲ ಕೆರಳಿಸಿದೆ.
Leave a Comment