ವಿಶ್ವ ವಿಖ್ಯಾತ ಜಂಬೂಸವಾರಿ ಆರಂಭ: ನಾಡದೇವಿ ಹೊತ್ತು ಕ್ಯಾಪ್ಟನ್ ಅಭಿಮನ್ಯು ಹೆಜ್ಜೆ
ನ್ಯೂಸ್ ಆ್ಯರೋ: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಆರಂಭಗೊಂಡಿದೆ. ಅರಮನೆಯ ಆವರಣದಲ್ಲಿ ನಾಡಿನ ಅಧಿ ದೇವತೆ ತಾಯಿ ಚಾಮುಂಡೇಶ್ವರಿಯನ್ನು ಚಿನ್ನದ ಅಂಬಾರಿಯಲ್ಲಿ ಹೊತ್ತಂತ ಕ್ಯಾಪ್ಟನ್ ಅಭಿಮನ್ಯು ಹೆಜ್ಜೆ ಹಾಕೋದಕ್ಕೆ ಆರಂಭಸಿದ್ದಾನೆ.
ಇಂದು ಮಧ್ಯಾಹ್ನ 1.41ರಿಂದ 2.10ರ ನಡುವೆ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜಪೂಜೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನೆರವೇರಿಸಿದರು. ಆ ಬಳಿಕ ಸಂಜೆ 4 ಗಂಟೆಯಿಂದ 4.30ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿಯ ಜಂಬೂ ಸವಾರಿಗೆ ಕ್ಷಣಗಣನೆ ಆರಂಭಗೊಂಡಿತ್ತು.
ನಾಡಿನ ಅಧಿದೇವತೆಯನ್ನು ಚಿನ್ನದ ಅಂಬಾರಿಯಲ್ಲಿ ಹೊತ್ತು ಬಂದಾಗ ಸಿಎಂ ಸಿದ್ಧರಾಮಯ್ಯ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆಯನ್ನು ಮಾಡುವ ಮೂಲಕ ಜಂಬೂ ಸವಾರಿಗೆ ಚಾಲನೆಯನ್ನು ನೀಡಿದರು.
ಸತತ 5ನೇ ಬಾರಿ 750 ಕೆಜಿ ಚಿನ್ನದ ಅಂಬಾರಿ ಹೊತ್ತು ಕ್ಯಾಪ್ಟನ್ ಅಭಿಮನ್ಯು ಸಾಗುತ್ತಿದ್ದಾರೆ. ಕ್ಯಾಪ್ಟನ್ ಅಭಿಮನ್ಯುಗೆ ನಿಶಾನೆ ಆನೆಯಾಗಿ ಧನಂಜಯ ಆನೆ, ಗೋಪಿ ನೌಫತ್, ಲಕ್ಷ್ಮಿ, ವರಲಕ್ಷ್ಮಿ ಆನೆ ,ಕುಮ್ಕಿ ಆನೆಗಳಾಗಿ ಭಾಗಿಯಾಗಿದ್ದಾವೆ.
Leave a Comment