ಸರ್ಕಾರಿ ಶಾಲೆಗಳಲ್ಲಿ ಹೆಚ್ಚುವರಿ ‘ಇಂಗ್ಲಿಷ್ ಮೀಡಿಯಂ’ ವಿಭಾಗ – ರಾಜ್ಯ ಸರ್ಕಾರದ ಮಹತ್ವದ ಆದೇಶ

20240626 180420
Spread the love

ನ್ಯೂಸ್ ಆ್ಯರೋ : 2024-25ನೇ ಸಾಲಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಹಾಲಿ ನಡೆಯುತ್ತಿರುವ 25 ದ್ವಿಭಾಷಾ ಮಾಧ್ಯಮದ ಶಾಲೆಗಳಲ್ಲಿ ಹೆಚ್ಚುವರಿಯಾಗಿ ಮತ್ತೊಂದು ಆಂಗ್ಲ ಮಾಧ್ಯಮದ (Bilingual) ವಿಭಾಗವನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿ ಆದೇಶ ಹೊರಡಿಸಿದೆ.

2024-25 ನೇ ಸಾಲಿನಿಂದ ಉಲ್ಲೇಖಿತ ಸರ್ಕಾರಿ ಆದೇಶದ ಅನುಬಂಧದಲ್ಲಿನ 25 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಹಾಲಿ ನಡೆಯುತ್ತಿರುವ ದ್ವಿಭಾಷಾ ಮಾಧ್ಯಮದ ಜೊತೆಗೆ ಹೆಚ್ಚುವರಿಯಾಗಿ ಮತ್ತೊಂದು ಆಂಗ್ಲ ಮಾಧ್ಯಮದ (Bilingual)] ವಿಭಾಗವನ್ನು ಯಾವುದೇ ಆರ್ಥಿಕ ಹೊರೆಯಾಗದಂತೆ, ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಉಲ್ಲೇಖಿತ ಆದೇಶದನ್ವಯ ಅನುಮತಿ ನೀಡಿ ಆದೇಶಿಸಲಾಗಿದೆ.

N6194085151719405068828a269c9cd0adea9b82d7f826475a29dbed77c5e971971496f02afb97688d207f73576217456296039631

ಸರ್ಕಾರದ ಉಲ್ಲೇಖಿತ ಆದೇಶದಲ್ಲಿನ ಅಂಶಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕೂಡಲೇ ನಿಯಮಾನುಸಾರ ಅಗತ್ಯ ಕ್ರಮಗಳನ್ನು ವಹಿಸುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಈ ಮೂಲಕ ತಿಳಿಸಲಾಗಿದೆ.

Leave a Comment

Leave a Reply

Your email address will not be published. Required fields are marked *