ಕರ್ನಾಟಕ ಸೇರಿದಂತೆ ಈ ರಾಜ್ಯಗಳಲ್ಲಿ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
ನ್ಯೂಸ್ ಆ್ಯರೋ: ಕರ್ನಾಟಕ ಸೇರಿದಂತೆ ಈ ರಾಜ್ಯಗಳಲ್ಲಿ ಮುಂದಿನ 3-4 ದಿನ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತದ ವಿವಿಧ ಪ್ರದೇಶಗಳಲ್ಲಿ, ವಿಶೇಷವಾಗಿ ದಕ್ಷಿಣ ಪೆನಿನ್ಸುಲರ್ ಭಾರತದ ತಮಿಳುನಾಡು, ಪುದುಚೇರಿ, ಕೇರಳ ಮತ್ತು ಕರ್ನಾಟಕ, ಹಾಗೆಯೇ ಪಶ್ಚಿಮ ಮತ್ತು ಮಧ್ಯ ಭಾರತದ ಮಹಾರಾಷ್ಟ್ರ, ಗೋವಾ, ಗುಜರಾತ್ ಮತ್ತು ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತ ಹವಾಮಾನ ಇಲಾಖೆ ನೀಡಿದೆ.
ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ನಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದ ಒಳನಾಡು: ಮುಂದಿನ ಮೂರು ದಿನಗಳಲ್ಲಿ ಚದುರಿದ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಅಕ್ಟೋಬರ್ 15 ಮತ್ತು 16 ರಂದು ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮತ್ತು ಅಕ್ಟೋಬರ್ 17 ರಂದು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ಕೇರಳ ಮತ್ತು ಮಾಹೆ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ
Leave a Comment