ʼಮಾರ್ಟಿನ್ʼ ಬಗ್ಗೆ ನೆಗೆಟಿವ್ ರಿವ್ಯೂವ್: ಯೂಟ್ಯೂಬರ್ ನನ್ನು ಬಂಧಿಸಿದ ಪೊಲೀಸರು

Dhruva Sarja
Spread the love

ನ್ಯೂಸ್ ಆ್ಯರೋ: ನಟ ಧ್ರುವ ಸರ್ಜಾ ಅವರ ಪ್ಯಾನ್ ಇಂಡಿಯಾ ಸಿನಿಮಾ ಮಾರ್ಟಿನ್ ಸಿನಿಮಾದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀರಾ ಕೆಟ್ಟದಾಗಿ ಮಾತನಾಡಿ ವಿಡಿಯೋ ಪೋಸ್ಟ್ ಮಾಡಿಕೊಂಡಿದ್ದ ಖ್ಯಾತ ಯೂಟೂಬರ್ ಸ್ಟ್ರಾಂಗ್ ಸುಧಾಕರ್ ಅಲಿಯಾಸ್ ಸುಧಾಕರ ಗೌಡನನ್ನು ಪೊಲೀಸರು ಅರೆಸ್ಟ್‌ ಮಾಡಿ ಮೆತ್ತಗೆ ಮಾಡಿ ಕಳುಹಿಸಿದ್ದಾರೆ.

ಮಾರ್ಟಿನ್ ಸಿನಿಮಾ ಬಿಡುಗಡೆಯಾದ ನಂತರ ಈ ಸಿನಿಮಾದ ಬಗ್ಗೆ ಪರ ವಿರೊಧ ಚರ್ಚೆಗಳು ಹರಿದಾಡುತ್ತಿವೆ. ಇದರಲ್ಲಿ ಬಹುತೇಕರು ಉತ್ತಮವಾಗಿದೆ ಎಂದು ಕಾಮೆಂಟ್ ಮಾಡಿದರೆ, ಇನ್ನು ಕೆಲವರು ಸಿನಿಮಾ ಸರಿಯಾಗಿಲ್ಲ ಎಂದು ಕೆಟ್ಟದಾಗಿ ರಿವ್ಯೂ ನೀಡಿದ್ದರು. ಸಿನಿಮಾದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಲು ಎಲ್ಲರಿಗೂ ಮುಕ್ತ ಅವಕಾಶವಿದೆ. ಆದರೆ, ಅದನ್ನು ಬೇರೊಬ್ಬರ ಮೇಲೆ ಹೇರುವುದಕ್ಕೆ ಅವಕಾಶವಿಲ್ಲ. ಸಿನಿಮಾದ ಬಗ್ಗೆ ಕೆಟ್ಟದಾಗಿ ರಿವ್ಯೂ ನೀಡುವುದರಲ್ಲಿ ಎಲ್ಲರಿಗಿಂತ ಮುಂದೆ ಹೋಗಿ ತಾನು ಹೆಚ್ಚು ವೀಕ್ಷಣೆ ಪಡೆದುಕೊಳ್ಳಬೇಕೆಂದ ಉದ್ದೇಶದಿಂದ ಖ್ಯಾತ ಯ್ಯೂಟೂಬರ್ ಆಗಿರುವ ಸೋಶಿಯಲ್ ಮಿಡಿಯಾ ಇನ್ಫ್ಲೂಯೆನ್ಸರ್ ಸ್ಟ್ರಾಂಗ್ ಸುಧಾಕರ್ ಅಲಿಯಾಸ್ ಸುಧಾಕರ್ ಗೌಡ ತೀರಾ ಕೆಟ್ಟದಾಗಿ ಮಾರ್ಟಿನ್ ಸಿನಿಮಾದ ಬಗ್ಗೆ ರಿವ್ಯೂ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

Sudhakar1

ಇದರ ಬೆನ್ನಲ್ಲಿಯೇ ಪೊಲೀಸರಿಗೆ ಈ ಬಗ್ಗೆ ಮಾರ್ಟಿನ್ ಚಿತ್ರದ ನಾಯಕ ಧ್ರುವ ಸರ್ಜಾ ಅವರ ಅಭಿಮಾನಿಗಳು ದೂರು ನೀಡಿದ್ದರು. ಇದರ ಬೆನ್ನಲ್ಲಿಯೇ ಈ ಹಿಂದೆ ಯೂಟೂಬರ್ ಸುಧಾಕರನ ವಿರುದ್ಧ ಹಲ್ಲೆಗೆ ಸಂಬಂಧಪಟ್ಟಂತೆ ಒಂದು ಕೇಸಿನಲ್ಲಿ ವಾರೆಂಟ್ ಇಶ್ಯೂ ಆಗಿದ್ದರೂ ಪೊಲೀಸ್ ಠಾಣೆಗೆ ಹಾಜರಾಗದೇ ತಲೆ ಮರೆಸಿಕೊಂಡು ಓಡಾಡುತ್ತಿರುವ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ.

ಇನ್ನು ಮಾರ್ಟಿನ್ ಸಿನಿಮಾದ ಬಗ್ಗೆ ಕೆಟ್ಟದಾಗಿ ರಿವ್ಯೂ ಮಾಡಿದ್ದಕ್ಕೆ ದೂರು ಬಂದ ಬೆನ್ನಲ್ಲಿಯೇ ಆತನ್ನು ಬೆಂಗಳೂರು ಹೊರವಲಯದ ಆದನಾಯಕನಹಳ್ಳಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹಲ್ಲೆ ಪ್ರಕರಣದ ಸಂಬಂಧ ಆತನನ್ನು ಕೆಲವೊಂದಿಷ್ಟು ವಿಚಾರಣೆ ಮಾಡಿ ಎಚ್ಚರಿಕೆಯನ್ನೂ ನೀಡಿದ್ದಾರೆ.

ಇನ್ನು ಮಾದನಾಯಕನಹಳ್ಳಿ ಠಾಣೆಯ ಪೊಲೀಸರು ರಿವ್ಯೂ ಮಾಡಿದ ವಿಡಿಯೋವನ್ನು ಡಿಲೀಟ್ ಮಾಡಿಸಿದ್ದಾರೆ. ಜೊತೆಗೆ, ಸ್ಟಾಂಗ್ ಸುಧಾಕರನಿಗೆ ಪೊಲೀಸ್ ಠಾಣೆಯಲ್ಲಿ ಕೂರಿಸಿ ಎಚ್ಚರಿಕೆ ನೀಡುವ ಮೂಲಕ ಆತನನ್ನು ಮೆತ್ತಗೆ ಮಾಡಿದ್ದಾರೆ. ಕೊನೆಗೆ ಆತನಿಂದ ತಪ್ಪೊಪ್ಪಿಗೆ ಪತ್ರವನ್ನು ಬರೆಸಿಕೊಂಡು ವಿಡಿಯೋ ಡಿಲೀಟ್ ಮಾಡಿದ್ದರ ಬಗ್ಗೆ ಅಧಿಕೃತ ಮಾಹಿತಿ ಖಚಿತಪಡಿಸಿಕೊಂಡಿದ್ದಾರೆ.

Leave a Comment

Leave a Reply

Your email address will not be published. Required fields are marked *

error: Content is protected !!