ರೇಣುಕಾಸ್ವಾಮಿ ಕೊಲೆಯಾಗಿ ಐದು ತಿಂಗಳು; ಮಗುವಿಗೆ ಜನ್ಮ ನೀಡಿದ ಪತ್ನಿ ಸಹನಾ

renukaswamy wife
Spread the love

ನ್ಯೂಸ್ ಆ್ಯರೋ: ಚಿತ್ರದುರ್ಗದ ರೇಣುಕಾ ಸ್ವಾಮಿಯ ಹತ್ಯೆ ನಡೆದು ನಾಲ್ಕು ತಿಂಗಳು ಕಳೆದಿದೆ. ಈ ಕೊಲೆ ಮಾಡಿದ್ದು ನಟ ದರ್ಶನ್ ಹಾಗೂ ಗ್ಯಾಂಗ್ ಎನ್ನುವ ಆರೋಪ ಇದೆ. ಈ ಪ್ರಕರಣ ಕೋರ್ಟ್ ಅಂಗಳದಲ್ಲಿ ಇದೆ. ರೇಣುಕಾ ಸ್ವಾಮಿ ನಿಧನ ಹೊಂದುವಾಗ ಅವರ ಪತ್ನಿ ಸಹನಾಗೆ ಐದು ತಿಂಗಳು. ಈಗ ಅವರು ಗಂಡುಮಗುವಿಗೆ ಜನ್ಮ ನೀಡಿದ್ದಾರೆ. ಈ ವಿಚಾರ ಕುಟುಂಬದ ಖುಷಿ ಹೆಚ್ಚಿಸಿದೆ.

ದರ್ಶನ್ ಆಪ್ತ ಗೆಳತಿ ಪವಿತ್ರಾಗೆ ರೇಣುಕಾ ಸ್ವಾಮಿ ಫೇಕ್ ಖಾತೆ ಮೂಲಕ ಮೆಸೇಜ್ ಮಾಡಿದ್ದರು. ಈ ವಿಚಾರ ದರ್ಶನ್ ಅವರ ಕೋಪಕ್ಕೆ ಕಾರಣ ಆಗಿತ್ತು. ರೇಣುಕಾ ಸ್ವಾಮಿಯನ್ನು ಪತ್ತೆ ಹಚ್ಚಿಸಿ ಬೆಂಗಳೂರಿಗೆ ಕರೆತರುವ ಕೆಲಸ ದರ್ಶನ್ ಗ್ಯಾಂಗ್​ನಿಂದ ಆಗಿತ್ತು. ಬೆಂಗಳೂರಿನ ಪಟ್ಟಣಗೆರೆಯ ಶೆಡ್​ನಲ್ಲಿ ರೇಣುಕಾಸ್ವಾಮಿ ಕೊಲೆ ನಡೆಯಿತು.

ರೇಣುಕಾ ಸ್ವಾಮಿ ಕೊಲೆಯ ಬಳಿಕ ಇಡೀ ಕುಟುಂಬ ಕಣ್ಣೀರಲ್ಲೇ ಕೈ ತೊಳೆಯುತ್ತಾ ಬಂದಿದೆ. ‘ಮಗ ಕೈ ಮುಗಿದು ಕೇಳಿಕೊಂಡಾಗ ಅವರು ಬಿಟ್ಟುಬಿಡಬೇಕಿತ್ತು’ ಎಂದು ತಂದೆ-ತಾಯಿ ಕಣ್ಣೀರು ಹಾಕಿದ್ದರು. ಅಲ್ಲದೆ, ದರ್ಶನ್​ಗೆ ಒಳ್ಳೆಯದಾಗಲ್ಲ ಎಂದು ಶಾಪ ಕೂಡ ಹಾಕಿದ್ದರು.

ಈಗ ನೊಂದಿದ್ದ ಕುಟುಂಬಕ್ಕೆ ಖುಷಿ ಆಗುವಂಥ ಸುದ್ದಿ ಸಿಕ್ಕಿದೆ. ರೇಣುಕಾಸ್ವಾಮಿ ಪತ್ನಿ ಗಂಡುಮಗುವಿಗೆ ಜನ್ಮ ನೀಡಿದ್ದಾರೆ. ಚಿತ್ರದುರ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಹನಾಗೆ ಹೆರಿಗೆ ಆಗಿದೆ.

Leave a Comment

Leave a Reply

Your email address will not be published. Required fields are marked *

error: Content is protected !!