‘ಪಾಗಲ್ ಪ್ರೇಮಿ’ಯ ಹುಚ್ಚಾಟಕ್ಕೆ ʼಪ್ರೇಮಾʼ ಬಲಿ: ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ
ನ್ಯೂಸ್ ಆ್ಯರೋ: ಕಾಲೇಜು ಕಟ್ಟಡದ ಮೇಲಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗ ನಗರದ ಚಿತ್ರಾ ಡಾನ್ ಬೋಸ್ಕೋ ಕಾಲೇಜಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಪ್ರೇಮಾ ಎಂದು ಗುರುತಿಸಲಾಗಿದ್ದು, ಕಾಲೇಜಿನಲ್ಲಿ ಪ್ರಥಮ ಬಿಎಸ್ಸಿ ಪದವಿ ವ್ಯಾಸಂಗ ಮಾಡುತ್ತಿದ್ದರು.
ಕಟ್ಟಡ ಮೇಲಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡುವ ಪ್ರಯತ್ನ ನಡೆಸಿದರೂ, ತೀವ್ರ ಗಾಯಗೊಂಡಿದ್ದ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಬಸವೇಶ್ವರ ಆಸ್ಪತ್ರೆಯ ವೈದ್ಯರು ಘೋಷಣೆ ಮಾಡಿದ್ದಾರೆ. ಮೃತ ಪ್ರೇಮಾ ಚಿತ್ರದುರ್ಗದ ಮೆದೆಹಳ್ಳಿ ನಿವಾಸಿಯಾಗಿದ್ದು, ಸ್ಥಳಕ್ಕೆ ಬಡಾವಣೆ ಪೊಲೀಸ್ ಠಾಣೆಯ PI ನಹೀಮ್, PSI ರಘು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿದ್ಯಾರ್ಥಿನಿಯ ಮೃತದೇಹ ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು JMIT ಶವಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಇನ್ನು, ಮಗಳ ಸಾವಿನ ಸುದ್ದಿ ಕೇಳಿ ತಂದೆಗರ ಆಕಾಶವೇ ಕಳಚಿ ಬಿದ್ದಂತಾಗಿದೆ.
ಬೆಳಗ್ಗೆ ಮಗಳು ಕಾಲೇಜಿಗೆ ಹೋಗಿದ್ದಳು, ಆಗ ಫೋನ್ ಮಾಡಿ ಕಾಲೇಜು ತಲುಪಿದೆ ಎಂದು ಕರೆ ಮಾಡಿ ಹೇಳಿದ್ದಳು. ಇದಾದ ಕೆಲ ಕ್ಷಣಗಳಲ್ಲೇ ನಿಮ್ಮ ಮಗಳು ಕೆಳಗೆ ಬಿದ್ದು ಸಾವನ್ನಪ್ಪಿದ್ದಾಳೆ ಅಂತಾ ಕಾಲೇಜಿಂದ ಫೋನ್ ಬಂತು. ಹುಡುಗ ನೋರ್ವ ನಮ್ಮ ಮಗಳ ಫೋನ್ಗೆ ಮೆಸೇಜ್ ಕಳುಹಿಸಿದ್ದನಂತೆ. ಚಾಕು ಫೋಟೋ ಕಳುಹಿಸಿ ಬೆದರಿಸಿದ್ದಕ್ಕೆ ಹೀಗೆ ಮಾಡಕೊಂಡಿದ್ದಾಳೆ. ನನ್ನ ಮಗಳು ಇನ್ನೋಸೆಂಟ್ ಅವಳ ಮೇಲೆ ಪ್ರಾಣ ಇಟ್ಟಿದ್ದೆ ಎಂದು ಪ್ರೇಮಾ ತಂದೆ ಕಣ್ಣೀರಿಟ್ಟಿದ್ದಾರೆ.
Leave a Comment