ರೇಣುಕಸ್ವಾಮಿ ಹತ್ಯೆ ಕೇಸ್; ದರ್ಶನ್ ಬೇಲ್ ಕನಸು ಭಗ್ನ !
ನ್ಯೂಸ್ ಆ್ಯರೋ: ಅ. 14ರಂದು ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ2 ಆರೋಪಿ ದರ್ಶನ್ರ ಜಾಮೀನು ಅರ್ಜಿ ವಿಚಾರಣೆಯನ್ನು ನಡೆಸಿದ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ, ಅರ್ಜಿಯನ್ನು ವಜಾಗೊಳಿಸಿತು.
ಸಿವಿಲ್ ಕೋರ್ಟ್ನಲ್ಲಿ ಜಾಮೀನು ಸಿಗದ ಕಾರಣ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ ದರ್ಶನ್ಗೆ ನ್ಯಾಯಾಲಯ ಅ.22ರಂದು ವಿಚಾರಣೆಗೆ ಕರೆದಿತ್ತು.
ಇಂದು ಆರೋಪಿ ದರ್ಶನ್ರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಇದೀಗ ವಿಚಾರಣೆಯನ್ನು ಇದೇ ತಿಂಗಳ 28ಕ್ಕೆ ಮುಂದೂಡಿದೆ. ಈ ಮೂಲಕ ಮತ್ತೊಮ್ಮೆ ದರ್ಶನ್ ಬೇಲ್ ಕನಸು ಭಗ್ನಗೊಂಡಿದೆ.
ಅಕ್ಟೋಬರ್ 28ರ ಒಳಗಾಗಿ ಬಳ್ಳಾರಿ ಜೈಲು ಅಧಿಕಾರಿಗಳು ದರ್ಶನ್ರ ಆರೋಗ್ಯ ಸ್ಥಿತಿಯ ಬಗ್ಗೆ ವರದಿಯನ್ನು ಹೈಕೋರ್ಟ್ಗೆ ನೀಡಬೇಕಿದ್ದು, ವರದಿ ಆಧರಿಸಿ ದರ್ಶನ್ಗೆ ಜಾಮೀನು ನೀಡಬೇಕೊ ಇಲ್ಲವೋ ಅಥವಾ ಜೈಲಿನಲ್ಲಿಯೇ ಚಿಕಿತ್ಸೆ ಮುಂದುವರೆಸಬೇಕೋ ಎಂಬುದನ್ನು ನಿಶ್ಚಯ ಮಾಡಲಾಗುತ್ತದೆ.
Leave a Comment