ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣ; ಕಟ್ಟಡ ಮಾಲೀಕ ಸೇರಿ ಇಬ್ಬರ ಬಂಧನ

building collapse
Spread the love

ನ್ಯೂಸ್ ಆ್ಯರೋ:ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು, 6 ಕಾರ್ಮಿಕರು ಮೃತಪಟ್ಟಿದ್ದಾರೆ. ಈವರೆಗೆ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 13 ಜನರನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಈನಡುವೆ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡದ ಮಾಲೀಕ ಭ್‌ಉವನ್ ರೆಡ್ಡಿ ಹಾಗೂ ಗುತ್ತಿಗೆದಾರರ ಮುನಿಯಪ್ಪ ಎಂಬುವವರನ್ನು ಬಂಧಿಸಲಾಗಿದೆ.

ಕಟ್ಟಡ ಮಾಲೀಕ ಭುವನ್ ರೆಡ್ಡಿ 4 ಅಂತಸ್ತಗಳನ್ನು ಕಟ್ಟಲು ಮಾತ್ರ ಅನುಮತಿ ಪಡೆದಿದ್ದರು. ಆದರೆ 6 ಅಂತಸ್ತಗಳನ್ನು ನಿರ್ಮಾಣ ಮಾಡಲಾಗಿತ್ತು. ತಳಪಾಯದಲ್ಲಿ ಕಬ್ಬಿಣದ ರಾಡುಗಳನ್ನು ಸರಿಯಾಗಿ ಅಳವಡಿಕೆ ಮಾಡಿರಲಿಲ್ಲ. ಹಾಗೇ ಕಾಂಪೌಡ್​ ನಿರ್ಮಾಣಕ್ಕೆ ಅಗೆಯಲಾಗಿದ್ದ ಗುಂಡಿಯಲ್ಲಿ ಅಪಾರ ಪ್ರಮಾಣದ ಮಳೆ ನೀರು ಶೇಖರಣೆಗೊಂಡು ಭೂಮಿ ಸಡಿಲವಾಗಿ ಕಟ್ಟಡ ಕುಸಿದಿದೆ. ಅವೈಜ್ಞಾನಿಕ ಕಟ್ಟಡ ನಿರ್ಮಾಣದಿಂದಾಗಿ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.

Leave a Comment

Leave a Reply

Your email address will not be published. Required fields are marked *

error: Content is protected !!