ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೆ ಬಿಗ್‌ಶಾಕ್; 7 ಶೂಟರ್‌ಗಳನ್ನು ಹೆಡೆಮುರಿ ಕಟ್ಟಿದ ಪೊಲೀಸರು

Shooters Arrested
Spread the love

ನ್ಯೂಸ್ ಆ್ಯರೋ: ಕುಖ್ಯಾತ ಗ್ಯಾಂಗ್‌ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ವಿರುದ್ಧದ ಪ್ಯಾನ್ ಇಂಡಿಯಾ ಕಾರ್ಯಾಚರಣೆಯಲ್ಲಿ ದೆಹಲಿ ಪೊಲೀಸ್ ವಿಶೇಷ ಸೆಲ್ ಅದ್ಭುತ ಯಶಸ್ಸನ್ನು ಸಾಧಿಸಿದೆ. ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ 7 ಶೂಟರ್‌ಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದು, ಬಂಧಿತ ಎಲ್ಲಾ ಶೂಟರ್‌ಗಳನ್ನು ಪಂಜಾಬ್ ಮತ್ತು ಇತರ ರಾಜ್ಯಗಳಿಂದ ಬಂಧಿಸಲಾಗಿದೆ.

ಶೂಟರ್‌ಗಳಿಂದ ಆಯುಧಗಳನ್ನೂ ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕೂಡ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ವಿರುದ್ಧ ಕಠಿಣ ಕ್ರಮ ಕೈಗೊಂಡಿತ್ತು. ಲಾರೆನ್ಸ್ ಸಹೋದರ ಅನ್ಮೋಲ್ ಬಿಷ್ಣೋಯ್‌ ಹಿಡಿದುಕೊಟ್ಟವರಿಗೆ ಎನ್‌ಐಎ 10 ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಿತ್ತು.

ಅನ್ಮೋಲ್ ಬಿಷ್ಣೋಯ್ ಅಲಿಯಾಸ್ ಭಾನು ಕುಖ್ಯಾತ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಅವರ ಸಹೋದರನಾಗಿದ್ದು, ಈತ ಗಾಯಕ-ರಾಜಕಾರಣಿ ಸಿದ್ದು ಮೂಸೆವಾಲ ಹತ್ಯೆಯ ಆರೋಪಿಯೂ ಹೌದು.

ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಮುಂಬೈ ಕ್ರೈಂ ಬ್ರಾಂಚ್ ಆರೋಪಿಗಳ ವಿಚಾರಣೆ ವೇಳೆ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಜೊತೆ ಶೂಟರ್ ನೇರ ಸಂಪರ್ಕದಲ್ಲಿದ್ದುದು ತಿಳಿದು ಬಂದಿದೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಅವರನ್ನು ದಸರಾ ರಾತ್ರಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಇದುವರೆಗೆ ಮುಂಬೈ ಪೊಲೀಸರ ಕ್ರೈಂ ಬ್ರಾಂಚ್ 11 ಜನರನ್ನು ಬಂಧಿಸಿದೆ.

Leave a Comment

Leave a Reply

Your email address will not be published. Required fields are marked *

error: Content is protected !!