ರಾಜ್ಯದಲ್ಲಿ ಕಬಾಬ್, ಗೋಬಿ ಮಂಚೂರಿ ಬಳಿಕ ಶವರ್ಮಾ ಮಾರಾಟಕ್ಕೂ ಕಂಟಕ – ಪಾನಿಪೂರಿ, ಮಸಾಲಪುರಿಗೂ ನಾಳೆಯಿಂದಲೇ ನಿಷೇಧ : ಸಚಿವ ದಿನೇಶ್ ಗುಂಡೂರಾವ್

20240630 142745
Spread the love

ನ್ಯೂಸ್ ಆ್ಯರೋ : ಗೋಬಿ ಮಂಚೂರಿ ಹಾಗೂ ಕಬಾಬ್‌ ಬಳಿಕ ಇದೀಗ ರಾಜ್ಯದಲ್ಲಿ ಶವರ್ಮಾ ಬ್ಯಾನ್‌ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಚಿಕನ್‌ ಶವರ್ಮಾಗಳಲ್ಲಿ ಬ್ಯಾಕ್ಟೀರಿಯಾ ಹಾಗೂ ಈಸ್ಟ್‌ ಪತ್ತೆಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಕೇರಳದಲ್ಲಿ ಈಗಾಗಲೇ ಶವರ್ಮಾ ತಿಂದು ಸಾಕಷ್ಟು ಜನ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ರಾಜ್ಯದಲ್ಲಿ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.ಬೆಂಗಳೂರಿನಲ್ಲಿ ಶವರ್ಮಾ ಗುಣಮಟ್ಟ ಪರಿಶೀಲನೆ ನಡೆಸಿದ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಗೆ ಬೆಚ್ಚಿ ಬೀಳಿಸುವ ಅಂಶ ಕಂಡು ಬಂದು ಬಂದಿದೆ. ಶವರ್ಮಾಗಳಲ್ಲಿ ಅನಾರೋಗ್ಯಕ್ಕೆ ಕಾರಣವಾಗುವ ಬ್ಯಾಕ್ಟೀರಿಯಾ, ಈಸ್ಟ್‌ ಪತ್ತೆಯಾಗಿದೆ. ಬೆಂಗಳೂರು ಮಾತ್ರವಲ್ಲ ಹುಬ್ಬಳ್ಳಿ, ಮೈಸೂರು, ತುಮಕೂರು, ಮಂಗಳೂರು, ಬಳ್ಳಾರಿ ಸೇರಿದಂತೆ ಹಲವೆಡೆ ಪರೀಕ್ಷೆ ನಡೆಸಲಾಗಿದೆ.

ಶವರ್ಮಾ ತಯಾರಿಕೆಯಲ್ಲಿ ನೈಮರ್ಲ್ಯದ ಕೊರತೆ ಕಂಡು ಬರುತ್ತಿದೆ. ಅಲ್ಲದೆ ಧೀರ್ಘ ಕಾಲದವರೆಗೂ ಶೇಖರಣೆ ಮಾಡುವುದರಿಂದ ಇದರಲ್ಲಿ ಅಪಾಯಕಾರಿ ಬ್ಯಾಕ್ಟೀರಿಯಾ, ಈಸ್ಟ್‌ ಉತ್ಪತ್ತಿಯಾಗಿ ಅಪಾಯಕಾರಿಯಾಗಿ ಪರಿಣಮಿಸುತ್ತದೆ. ಶವರ್ಮಾ ತಿನ್ನುವುದರಿಂದ ಆರೋಗ್ಯದಲ್ಲಿ ಭಾರೀ ಪರಿಣಾಮ ಬೀರುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಅಸುರಕ್ಷಿತ ಎಂದು ವರದಿಯಾಗಿರುವ ಆಹಾರ ಮಾದರಿಗಳ ತಯಾರಕರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಎಲ್ಲ ಶವರ್ಮಾ ತಯಾರಕರು ಆಹಾರ ತಯಾರಿಕೆ, ಸಂಗ್ರಹಣೆ ಮತ್ತು ವಿತರಣೆಯ ಸಂದರ್ಭದಲ್ಲಿ ಸಂಪೂರ್ಣ ನೈರ್ಮಲ್ಯತೆ ಮತ್ತು ಗುಣಮಟ್ಟವನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ 2006ರ ಶೆಡ್ಯೂಲ್‌ 4ರ ಅನುಸಾರ ಕಾಪಾಡಲು ಸೂಚಿಸಲಾಗಿದೆ.

ಜತೆಗೆ ಶವರ್ಮಾವನ್ನು ಪ್ರತಿ ದಿನ ಹೊಸದಾಗಿ ತಯಾರಿಸಿ ತಾಜಾ ಸ್ಥಿತಿಯಲ್ಲಿ ಮಾರಾಟ ಮಾಡಲು ಸೂಚಿಸಲಾಗಿದೆ. ಅಲ್ಲದೆ ಎಲ್ಲ ಶವರ್ಮಾ ಆಹಾರ ತಯಾರಕರು ತಮ ಉದ್ದಿಮೆಗೆ ಎಫ್‌ಎಸ್‌‍ಎಸ್‌‍ಎಐ ನೋಂದಣಿ ಅಥವಾ ಪರವಾನಿಗೆಯನ್ನು ಪಡೆದುಕೊಳ್ಳುವುದಲ್ಲದೇ ಅದನ್ನು ತಮ ವ್ಯಾಪಾರ ಸ್ಥಳದಲ್ಲಿ ಪ್ರದರ್ಶಿಸಲು ಸೂಚಿಸಿದೆ. ಜತೆಗೆ ಸಾರ್ವಜನಿಕರು ನೋಂದಣಿ / ಪರವಾನಿಗೆಯನ್ನು ಪಡೆದುಕೊಂಡ ಮಾರಾಟಗಾರರಿಂದಲೇ ಶವರ್ಮಾವನ್ನು ಖದೀದಿಸಲು ಸೂಚಿಸಲಾಗಿದೆ.

ಮುಂದಿನ ಪರಿಶೀಲನೆ ವೇಳೆ ಆಹಾರ ತಯಾರಕರು ಲೋಪದೋಷಗಳನ್ನು ಸರಿಪಡಿಸಿಕೊಳ್ಳದೇ ಇದ್ದಲ್ಲಿ ನಿಯಮಾನುಸಾರ ಕಾನೂನಾತ್ಮಕ ಕ್ರಮಗಳನ್ನು ಜರುಗಿಸಲಾಗುವುದು ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಪ್ರಕಟಣೆ ತಿಳಿಸಿದೆ.

ಪಾನಿಪುರಿ, ಮಸಾಲಪುರಿಗೂ ನಾಳೆಯಿಂದ ನಿಷೇಧ..!

ಪಾನಿಪುರಿ ಹಾಗೂ ಮಸಾಲೆಪುರಿಗಳಲ್ಲಿ ಬಳಸುವ ಕೃತಕ ಬಣ್ಣಗಳಲ್ಲಿ ಹಾನಿಕಾರಕ ಐದು ರಾಸಾಯನಿಕ ಬಣ್ಣಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಪಾನಿಪುರಿ ಹಾಗೂ ಮಸಾಲೆಪುಗಳಲ್ಲಿ ಕೃತಕ ಬಣ್ಣ ಬಳಕೆ ನಿಷೇಧಿಸಿ ಜುಲೈ 1 ರ ನಾಳೆ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ಕಾಟನ್ ಕ್ಯಾಂಡಿ, ಗೋಬಿ ಹಾಗು ಕಬಾಬ್ ತಯಾರಿಕೆಯಲ್ಲಿ ಕೃತಕ ಬಣ್ಣಗಳ ಬಳಕೆಯನ್ನು ನಿಷೇಧಿಸಿರುವಂತೆಯೇ ರಾಜ್ಯದಲ್ಲಿ ಮಾರಾಟವಾಗುತ್ತಿರುವ ಪಾನಿಪೂರಿ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ಪಾನಿಪುರಿಯ ಹಲವು ಮಾದರಿಗಳೂ ಸಹ ಆಹಾರ ಸುರಕ್ಷತೆಯ ಪರೀಕ್ಷೆಯಲ್ಲಿ ವಿಫಲವಾಗಿದ್ದು ಇವುಗಳಲ್ಲಿ ಕಾನ್ಸರ್ ಕಾರಕ ಅಂಶಗಳಿರುವುದು ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.

ಸದ್ಯ ಹೆಚ್ಚಿನ ವಿಶ್ಲೇಷಣೆ ನಡೆಸಲಾಗುತ್ತಿದ್ದು ಪರೀಕ್ಷಾ ವರದಿ ಬಂದ ಬಳಿಕ ಆರೋಗ್ಯ ಇಲಾಖೆಯು ಸೂಕ್ತ ಕ್ರಮ ಕೈಗೊಳ್ಳಲಿದೆ. ಇದೇ ಸಮಯದಲ್ಲಿ ಸಾರ್ವಜನಿಕರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಮತ್ತು ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುವ ಆಹಾರ ಪದಾರ್ಥಗಳ ಸೇವನೆಯಿಂದ ದೂರವಿರಬೇಕು. ಸ್ವಚ್ಛತೆ ಮತ್ತು ಶುಚಿತ್ವಕ್ಕೆ ಹೆಚ್ಚಿನ ಮಹತ್ವ ಕೊಡಬೇಕು ಎಂದು ಸೂಚನೆ ನೀಡಿದ್ದಾರೆ.

Leave a Comment

Leave a Reply

Your email address will not be published. Required fields are marked *

error: Content is protected !!