ಮಾಜಿ ವಕ್ಫ್ ಸಚಿವೆಯ ಮಗನ ಆಸ್ತಿಗೂ ಈಗ ವಕ್ಫ್ ಕಂಟಕ; ಸರ್ಕಾರದ ವಿರುದ್ಧ ಜೊಲ್ಲೆ ವಾಗ್ದಾಳಿ
ನ್ಯೂಸ್ ಆ್ಯರೋ: ರಾಜ್ಯದಲ್ಲಿ ಇದೀಗ ವಕ್ಫ್ ಆಸ್ತಿ ವಿಚಾರ ಭಾರೀ ಸದ್ದು ಮಾಡುತ್ತಿದೆ. ಮೊದಲಿಗೆ ರೈತರ ಜಮೀನುಗಳ ಮೇಲೆ ವಕ್ಫ್ ವಕ್ರದೃಷ್ಟಿ ಹರಿಯಿತು, ಆನಂತರ ಮಠ, ಶಿಕ್ಷಣ ಸಂಸ್ಥೆಯಾಯಿತು ಇದೀಗ ವಕ್ಫ್‌ನ ಮಾಜಿ ಸಚಿವರ ಜಮೀನಿನ ಮೇಲೂ ವಕ್ಫ್‌ನ ವಕ್ರದೃಷ್ಠಿ ಬಿದ್ದಿದೆ.
ಹೌದು, ಮಾಜಿ ಸಚಿವೆ ಹಾಗೂ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಹಾಗೂ ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಅವರ ಕಿರಿಯ ಪುತ್ರ ಬಸವ ಪ್ರಸಾದ್ ಜೊಲ್ಲೆ ಮಾಲೀಕತ್ವದ ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ನಮೂದಾಗಿದೆ.
ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿರುವ ಬಸವಪ್ರಭು ಜೊಲ್ಲೆಗೆ ಸೇರಿದ ಸರ್ವೆ ನಂಬರ್ 337ನಲ್ಲಿರುವ 2 ಎಕರೆ 13 ಗುಂಟೆ ಜಮೀನಿನ ಮೇಲೆ ವಕ್ಫ್ ಕಣ್ಣು ಹಾಕಿದೆ. ಇಷ್ಟೇ ಅಲ್ಲದೇ ಯಕ್ಸಂಬಾ ಪಟ್ಟಣದ ಜೊಲ್ಲೆ ಕುಟುಂಬದ ಹಲವರ ಜಮೀನುಗಳ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿದೆ. ಅಜ್ಜ ತಂದೆಯ ಕಾಲದಿಂದಲೂ ಇದೇ ಜಮೀನಿನಲ್ಲಿ ಜೊಲ್ಲೆ ಕುಟುಂಬ ಉಳಿಮೆ ಮಾಡುತ್ತಾ ಬಂದಿದೆ. ಇದೀಗ ಜಮೀನಿನ ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿದೆ.
ಈ ಬಗ್ಗೆ ಮಾತನಾಡಿರುವ ಮಾಜಿ ಸಂಸದ ಅಣ್ಣಾಸಾಹೇಬ ಜೋಲ್ಲೆ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡುತ್ತೇವೆ . ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಈ ರೀತಿಯಲ್ಲಿ ಮಾಡುತ್ತಿದ್ದಾರೆ. ಬಿಜೆಪಿ ಈ ವಿಚಾರದಲ್ಲಿ ಹೋರಾಟ ಮುಂದುವರೆಸುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.
Leave a Comment