ಎಚ್ಎಸ್ಆರ್​ಪಿ ನಂಬರ್ ಪ್ಲೇಟ್ ಅಳವಡಿಕೆ ವಿಚಾರ; ವಾಹನ ಮಾಲೀಕರಿಗೆ ಗುಡ್‌ ನ್ಯೂಸ್‌ ಕೊಟ್ಟ ರಾಜ್ಯ ಸರ್ಕಾರ

HSRP Number Plate Karnataka
Spread the love

ನ್ಯೂಸ್ ಆ್ಯರೋ: 2019ರ ಏಪ್ರಿಲ್ ತಿಂಗಳಿಗೂ ಮೊದಲು ನೋಂದಾಯಿಸಲಾದ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ(ಎಚ್‌ಎಸ್‌ಆರ್‌ಪಿ) ಅಳವಡಿಕೆ ಗಡುವನ್ನು ರಾಜ್ಯ ಸರ್ಕಾರ ಇಂದು(ನ.04) ಮತ್ತೊಮ್ಮೆ ಗಡುವು ವಿಸ್ತರಣೆ ಮಾಡಿದೆ.

ಬರೋಬ್ಬರಿ ನಾಲ್ಕು ಬಾರಿ ಗಡವು ವಿಸ್ತರಿಸಿದರೂ ಬಹುತೇಕ ವಾಹನ ಮಾಲೀಕರು ಇನ್ನೂ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಕೊಂಡಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಇಂದು ಮತ್ತೊಮ್ಮೆ ಗಡುವು ವಿಸ್ತರಣೆ ಮಾಡಿದ್ದು, ಈ ತಿಂಗಳು ಕೊನೆಯವರೆಗೆ ಅಂದರೆ ನವೆಂಬರ್ 30ರವರೆಗೆ ಎಚ್ಎಸ್ಆರ್​ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಮಯ ನೀಡಿ ಆದೇಶ ಹೊರಡಿಸಿದೆ.

ಒಂದು ವೇಳೆ ನವೆಂಬರ್ 30ರೊಳಗೆ ನಂಬರ್ ಪ್ಲೇಟ್ ಬದಲಾವಣೆ ಮಾಡಿಕೊಳ್ಳದಿದ್ದರೆ ಡಿಸೆಂಬರ್ 1ರಿಂದ ದಂಡ ವಿಧಿಸಲು ಸಾರಿಗೆ ಇಲಾಖೆ ತೀರ್ಮಾನಿಸಿದೆ.ದ್ವಿಚಕ್ರ ವಾಹನಗಳು, ಆಟೋ ಮತ್ತು ನಾಲ್ಕು ಚಕ್ರಗಳ ವಾಹನಗಳು ಸೇರಿದಂತೆ ರಾಜ್ಯದ ಎಲ್ಲಾ ವಾಹನಗಳಿಗೂ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸುವುದನ್ನು ಕಡ್ಡಾಗೊಳಿಸಲಾಗಿದೆ.

ವಂಚನೆ ಮತ್ತು ಕಳ್ಳತನದಿಂದ ರಕ್ಷಿಸಲು ಹೆಚ್ಚುವರಿ ಭದ್ರತಾ ಕ್ರಮಗಳನ್ನು ಒಳಗೊಂಡಿರುವ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ ಅನ್ನು ಕಡ್ಡಾಯಾವಾಗಿ ಅಳವಡಿಸಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ.

Leave a Comment

Leave a Reply

Your email address will not be published. Required fields are marked *

error: Content is protected !!