ರಾಜ್ಯದ ಎಣ್ಣೆ ಪ್ರಿಯರಿಗೆ ಶಾಕಿಂಗ್ ಸುದ್ದಿ; ರಾಜ್ಯಾದ್ಯಂತ ಈ ದಿನ ಮದ್ಯ ಮಾರಾಟ ಬಂದ್!
ನ್ಯೂಸ್ ಆ್ಯರೋ: ಅಬಕಾರಿ ಇಲಾಖೆಯು ಮದ್ಯದಂಗಡಿಗಳಿಂದ ‘ಮಂಥ್ಲಿ ಮನಿ’ ಹೆಸರಿನಲ್ಲಿ ಲಂಚ ಪಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯ ಮಾರಾಟ ವ್ಯಾಪಾರಿಗಳಿಂದ ಮಾಸಿಕ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಕರ್ನಾಟಕ ವೈನ್ ಮರ್ಚೆಂಟ್ ಅಸೋಸಿಯೇಷನ್ ಆರೋಪಿಸಿದ್ದು, ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ನ.20ರಂದು ರಾಜ್ಯಾದ್ಯಂತ ಮದ್ಯದಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲು ಮುಂದಾಗಿದೆ.
ಹೌದು.. ಲಂಚ, ಅಕ್ರಮ ಲೈಸೆನ್ಸ್ ನವೀಕರಣ ಸೇರಿದಂತೆ ಅಬಕಾರಿ ಇಲಾಖೆಯಲ್ಲಿ ಭಾರೀ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ಇದನ್ನು ವಿರೋಧಿಸಿ ಫೆಡರೇಷನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಕರ್ನಾಟಕ, ನವೆಂಬರ್ 20ರಂದು ರಾಜ್ಯಾದ್ಯಂತ ಮದ್ಯದಂಗಡಿ ಬಂದ್ ಮಾಡಲು ತೀರ್ಮಾನಿಸಿದೆ.
ವರ್ಗಾವಣೆ, ಪ್ರಮೋಷನ್ಗೆ ಅಧಿಕಾರಿಗಳು ಲಕ್ಷ ಲಕ್ಷ ,ಕೋಟಿ ಕೋಟಿ ಲಂಚ ನೀಡಿದ್ದಾರೆ. ಹೀಗಾಗಿ ಅಧಿಕಾರಿಗಳು ಸನ್ನದುದಾರರಿಂದ ಮನಸೋ ಇಚ್ಚೆ ಲಂಚ ಪಡೆಯುತ್ತಿರುವ ಆರೋಪ ಕೇಳಿಬಂದಿದೆ. ಅಧಿಕಾರಿಗಳ ಲಂಚವತಾರದಿಂದ ಅಂತರಾಜ್ಯ ಮದ್ಯ, ನಕಲಿ ಮದ್ಯ ಹೆಚ್ಚಳವಾಗಿದೆ. ಅಬಕಾರಿ ಇಲಾಖೆಗೆ ಮಂತ್ರಿ ಬೇಕಾಗಿಲ್ಲ. ಹಣಕಾಸು ಸಚಿವರಿಗೆ ಅಬಕಾರಿ ಇಲಾಖೆ ಜವಾಬ್ದಾರಿಗೆ ವಹಿಸುಕೊಳ್ಳುವಂತೆ ಒತ್ತಾಯಿಸುತ್ತಿದೆ. ಅಲ್ಲದೇ ರಾಜ್ಯದ ಅಬಕಾರಿ ಇಲಾಖೆ ಭ್ರಷ್ಟಾಚಾರ ಖಂಡಿಸಿ ಮುಷ್ಕರ ನಡೆಸಲು ಮದ್ಯದಂಗಡಿ ಮಾಲೀಕರು ನಿರ್ಧರಿಸಿದ್ದು, ನವೆಂಬರ್20 ರಾಜ್ಯವ್ಯಾಪ್ತಿ ಮದ್ಯ ಮಾರಾಟ ಬಂದ್ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರಕ್ಕೆ ಮದ್ಯದಂಗಡಿಯವರು ಬೇಸತ್ತು ರಾಜಭವನ ಮೆಟ್ಟಿಲೇರಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಎಂದು ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.
Leave a Comment