ʼನನ್ನ ಗೆಳೆಯ ಡೋನಾಲ್ಡ್ ಟ್ರಂಪ್‌ಗೆ ಅಭಿನಂದನೆʼ; ಶುಭಾಶಯದಲ್ಲೂ ಸಂದೇಶ ರವಾನಿಸಿದ ಪಿಎಂ ಮೋದಿ

US Presidential Election
Spread the love

ನ್ಯೂಸ್ ಆ್ಯರೋ: ಅಮೆರಿಕದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆಲುವು ಸಾಧಿಸಿದ್ದಾರೆ. ಕಮಲಾ ಹ್ಯಾರಿಸ್ ಹಾಗೂ ಟ್ರಂಪ್ ನಡುವೆ ಭಾರಿ ಜಿದ್ದಾಜಿದ್ದಿ ಏರ್ಪಟ್ಟಿತ್ತು. ಆದರೆ ಅಂತಿಮವಾಗಿ ಭಾರತೀಯ ಮೂಲದ ಕಮಲಾ ಹ್ಯಾರಿಸ್ ವಿರುದ್ದ ಟ್ರಂಪ್ ಗೆಲುವು ಸಾಧಿಸಿದ್ದಾರೆ. ಅಮೆರಿಕದ 47ನೇ ಅಧ್ಯಕ್ಷರಾಗಿ ಟ್ರಂಪ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಡೋನಾಲ್ಡ್ ಟ್ರಂಪ್ ಗೆಲುವು ಸಾಧಿಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಟ್ರಂಪ್ ಜೊತೆಗಿನ ಫೋಟೋ ಹಂಚಿಕೊಂಡಿರುವ ಮೋದಿ, ಭಾರತ ಹಾಗೂ ಅಮೆರಿಕ ದ್ವಿಪಕ್ಷೀಯ ಸಂಬಂಧ, ವ್ಯಾಪಾರ ವಹಿವಾಟು ಮತ್ತಷ್ಟು ಉತ್ತಮಪಡಿಸಲು ಜಂಟಿಯಾಗಿ ಹೆಜ್ಜೆ ಹಾಕೋಣ ಎಂದಿದ್ದಾರೆ.

ಟ್ವೀಟ್ ಮೂಲಕ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ನನ್ನ ಸ್ನೇಹಿತ ಡೊನಾಲ್ಡ್ ಟ್ರಂಪ್ ಅವರಿಗೆ ಐತಿಹಾಸಿಕ ಚುನಾವಣಾ ಗೆಲುವಿಗೆ ಹೃದಯಪೂರ್ವಕ ಅಭಿನಂದನೆಗಳು. ನಿಮ್ಮ ಹಿಂದಿನ ಅವಧಿಯ ಯಶಸ್ಸನ್ನು ಮುಂದುವರೆಸುತ್ತಿದ್ದೀರಿ. ಭಾರತ-ಅಮೆರಿಕ ವ್ಯಾಪಕ ಜಾಗತಿಕ ಮತ್ತು ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು, ನಮ್ಮ ಸಹಯೋಗವನ್ನು ನವೀಕರಿಸಲು ನಾನು ಎದುರು ನೋಡುತ್ತಿದ್ದೇನೆ. ನಮ್ಮ ಜನರ ಒಳಿತಿಗಾಗಿ ಒಟ್ಟಾಗಿ ಕೆಲಸ ಮಾಡೋಣ. ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸೋಣ ಎಂದು ಮೋದಿ ಟ್ವೀಟ್ ಮೂಲಕ ಸಂದೇಶ ರವಾನಿಸಿದ್ದಾರೆ.

ಅಮೆರಿಕದಲ್ಲಿ ಅಧ್ಯಕ್ಷರ ಚುನಾವಣೆ ಸಂಕೀರ್ಣ ಪ್ರಕ್ರಿಯೆಯ ಮೂಲಕ ನಡೆಯುತ್ತದೆ. ಸಾಮಾನ್ಯ ಜನರು ನೇರವಾಗಿ ಅಧ್ಯಕ್ಷರನ್ನು ಆಯ್ಕೆ ಮಾಡಲು ಮತ ಚಲಾಯಿಸುವುದಿಲ್ಲ. ಬದಲಾಗಿ ಅವರು ಚುನಾವಣಾ ಮಂಡಳಿಯ ಸದಸ್ಯರನ್ನು ಆಯ್ಕೆ ಮಾಡುತ್ತಾರೆ. ಚುನಾವಣಾ ಮಂಡಳಿಯ ಸದಸ್ಯರು ನಂತರ ಅಧ್ಯಕ್ಷರನ್ನು ಆಯ್ಕೆ ಮಾಡಲು ಮತ ಚಲಾಯಿಸುತ್ತಾರೆ.

Leave a Comment

Leave a Reply

Your email address will not be published. Required fields are marked *

error: Content is protected !!