ಮುರಿದುಬಿದ್ದ ಖ್ಯಾತ ಸಂಗೀತ ಮಾಂತ್ರಿಕನ ದಾಂಪತ್ಯ; ವಿಚ್ಛೇದನ ಘೋಷಿಸಿದ ಪತ್ನಿ

AR Rahman's wife Saira announced separation
Spread the love

ನ್ಯೂಸ್ ಆ್ಯರೋ: ಸಂಗೀತ ಮಾಂತ್ರಿಕ ಎಆರ್ ರೆಹಮಾನ್ ಪತ್ನಿ ಸಾಯಿರಾ ಪತಿಯಿಂದ ಬೇರ್ಪಡುವುದಾಗಿ ಘೋಷಿಸಿದ್ದಾರೆ. ಸಾಯಿರಾ ಅವರ ವಕೀಲ ವಂದನಾ ಶಾ ದಂಪತಿಗಳು ಬೇರ್ಪಟ್ಟ ನಿರ್ಧಾರದ ಬಗ್ಗೆ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದರು. “ಮದುವೆಯಾಗಿ ಹಲವು ವರ್ಷಗಳ ನಂತರ, ಸಾಯಿರಾ ಅವರು ತಮ್ಮ ಪತಿ ಎಆರ್ ರೆಹಮಾನ್‌ನಿಂದ ಬೇರ್ಪಡುವ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.

Ar Rahman Saira001

ಇವರ ಸಂಬಂಧದಲ್ಲಿ ಆಳವಾದ ಭಾವನಾತ್ಮಕ ಒತ್ತಡದ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಒಬ್ಬರಿಗೊಬ್ಬರ ನಡುವೆ ಪ್ರೀತಿ ಇದ್ದರೂ, ತಮ್ಮ ನಡುವೆ ಆಗುವ ಮನಸ್ತಾಪಗಳು ಹಾಗೂ ಸಮಸ್ಯೆಗಳು ದೊಡ್ಡ ಅಂತರವನ್ನು ಸೃಷ್ಟಿಸಿದೆ ಎಂಧು ದಂಪತಿಗಳು ಕಂಡುಕೊಂಡಿದ್ದಾರೆ. ಈ ಹಂತದಲ್ಲಿ ಯಾರೂ ಕೂಡ ತಮ್ಮ ನಡುವೆ ಸೇತುವೆಯಾಗಲು ಸಾಧ್ಯವಿಲ್ಲ ಎಂದು ಅವರು ಭಾವಿಸಿದ್ದಾರೆ. ಈ ಕಾರಣದಿಂದಾ ಸಾಯಿರಾ ಅವರು ನೋವು ಹಾಗೂ ಸಂಕಟದಿಂದಲೇ ಈ ನಿರ್ಧಾರ ತೆಗೆದುಕೊಂಡಿದ್ದಾರೆ’ ಎಂದು ಹೇಳಲಾಗಿದೆ.

ಸಾಯಿರಾ ಅವರ ಈ ಸವಾಲಿನ ಸಮಯದಲ್ಲಿ ಅಭಿಮಾನಿಗಳು ತಮ್ಮ ಪ್ರೈವಸಿಯನ್ನು ಗೌರಿಸವೇಕು ಎಂದು ಬಯಸುತ್ತಾರೆ. ಏಕೆಂದರೆ, ಅವರೀಗ ತಮ್ಮ ಜೀವನದ ಅತ್ಯಂತ ಕಷ್ಟಕರ ಅಧ್ಯಾಯದಲ್ಲಿದ್ದಾರೆ ಎಂದು ವಕೀಲರು ತಿಳಿಸಿದ್ದಾರೆ. ಸಾಯಿರಾ ಗುಜರಾತಿ ಹಿನ್ನೆಲೆಯಿಂದ ಬಂದವರಾಗಿದ್ದಾರೆ. ಉತ್ತರ ಭಾರತದ ಸಂಪ್ರದಾಯಗಳು ಮತ್ತು ಸಂಸ್ಕೃತಿಯಲ್ಲಿ ಬೆಳೆದವರಾಗಿದ್ದಾರೆ. ಇವರಿಬ್ಬರು ಖತೀಜಾ, ರಹೀಮಾ ಮತ್ತು ಅಮೀನ್ ಎನ್ನುವ ಮೂರು ಮಕ್ಕಳಿಗೆ ತಂದೆ-ತಾಯಿ ಆಗಿದ್ದಾರೆ.. 29 ವರ್ಷಗಳ ಕಾಲ ಎಆರ್‌ ರೆಹಮಾನ್‌ ಹಾಗೂ ಸಾಯಿರಾ ಜೊತೆಯಾಗಿ ಬದುಕಿದ್ದರು. 1995ರ ಮಾರ್ಚ್‌ 12 ರಂದು ಇವರಿಬ್ಬರ ವಿವಾಹ ನೆರವೇರಿತ್ತು.

ಎಆರ್‌ ರೆಹಮಾನ್‌ ಪತ್ನಿ ಸಾಯಿರಾ ಬಾನು ಅವರೊಂದಿಗೆ ಕಾಣಿಸಿಕೊಳ್ಳುವುದು ಬಹಳ ಅಪರೂಪವಾಗಿತ್ತು. ಪ್ರಶಸ್ತಿ ಪ್ರದಾನ ಸಮಾರಂಭಗಳಲ್ಲಿ ಸಾಮಾನ್ಯವಾಗಿ ಅವರು ಏಕಾಂಗಿಯಾಗಿ ಭಾಗವಹಿಸುತ್ತಿದ್ದರು. 2024ರ ಜುಲೈನಲ್ಲಿ ಅನಂತ್‌ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್‌ ಅವರ ವಿವಾಹದ ವೇಳೆ ಇಬ್ಬರೂ ಜೊತೆಯಾಗಿ ಇರುವ ಫೋಟೋವನ್ನು ಎಆರ್‌ ರೆಹಮಾನ್‌ ತಮ್ಮ ಇನ್ಸ್‌ಟಾಗ್ರಾಮ್‌ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದರು.

Leave a Comment

Leave a Reply

Your email address will not be published. Required fields are marked *

error: Content is protected !!