ರಾಜ್ಯ ಸರ್ಕಾರದಿಂದ ಅಂಗನವಾಡಿ ಮಕ್ಕಳಿಗೆ ಬ್ಯಾಗ್, ಯೂನಿಫಾರ್ಮ್ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಘೋಷಣೆ

IMG 20240705 WA0035
Spread the love

ನ್ಯೂಸ್ ಆ್ಯರೋ : ರಾಜ್ಯ ಸರ್ಕಾರದಿಂದ ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭಿಸಲಾಗುತ್ತಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಎನ್ನುವಂತೆ ಅಂಗನವಾಡಿ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಬ್ಯಾಗ್, ಯೂನಿಫಾರ್ಮ್ ವಿತರಣೆಗೆ ಚಿಂತನೆ ನಡೆಸಿದೆ.

ಬೆಂಗಳೂರಿನ ಗೃಹಕಚೇರಿಯಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಶನ್ (ಎಐಟಿಯುಸಿ) ಕಾರ್ಯಕರ್ತರು ಭೇಟಿ ಮಾಡಿ, ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಲ್ಲಿಸಿದ ಮನವಿ ಸ್ವೀಕರಿಸಿ ಅವರು ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಅಂಗನವಾಡಿ ಮಕ್ಕಳಿಗೆ ಬ್ಯಾಗ್, ಯೂನಿಫಾರ್ಮ್ ಕೊಡುವ ಬಗ್ಗೆ ತೀರ್ಮಾನಿಸಿದೆ ಎಂದರು.

ಕರ್ನಾಟಕ ಪಬ್ಲಿಕ್ ಶಾಲೆ (ಕೆ ಪಿಎಸ್) ಹಾಗೂ ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲು ಸರ್ಕಾರ ತೀರ್ಮಾನಿಸಿದ್ದು, ಇದರಿಂದ ಅಂಗನವಾಡಿ ಶಿಕ್ಷಕರಿಗೆ ಯಾವುದೇ ತೊಂದರೆ ಆಗುವುದಿಲ್ಲ. ನಿಮ್ಮ ಹಾಗೂ ಮಕ್ಕಳ ಇಬ್ಬರ ಹಿತದೃಷ್ಟಿಯಿಂದ ಸರಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಾಲೆ ಆರಂಭಿಸುವ ಬಗ್ಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರೂ ಒಪ್ಪಿಗೆ ಸೂಚಿಸಿದ್ದಾರೆ ಎಂದರು.

ಇದಲ್ಲದೇ ಮಾಂಟೆಸ್ಸರಿ ತರಗತಿಗಳು ಆರಂಭಗೊಂಡ ನಂತರ ಅಂಗನವಾಡಿ ಹೆಸರನ್ನು ಬದಲಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಮಾಹಿತಿ ನೀಡಿದರು. ಅಂಗನವಾಡಿ ಕೇಂದ್ರಗಳ ಅಸ್ತಿತ್ವದ ಬಗ್ಗೆ ಸಿಎಂ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೂ ಚರ್ಚೆ ನಡೆಸಲಾಗಿದ್ದು, ಈ ಬಗ್ಗೆ ಕಾರ್ಯಕರ್ತೆಯರು ಯಾವುದೇ ಆತಂಕಕ್ಕೆ ಒಳಗಾಗಬೇಡಿ ಎಂದು ತಿಳಿಸಿದರು.

Leave a Comment

Leave a Reply

Your email address will not be published. Required fields are marked *

error: Content is protected !!