Udupi : ತಗ್ಗದ ಮುಂಗಾರು ಮಳೆಯ ಅಬ್ಬರ – ಉಡುಪಿ ಜಿಲ್ಲೆಯ ಈ ಎರಡು ತಾಲೂಕುಗಳಲ್ಲಿ ಪಿಯುಸಿವರೆಗಿನ ಮಕ್ಕಳಿಗೆ ರಜೆ ಘೋಷಣೆ
ನ್ಯೂಸ್ ಆ್ಯರೋ : ಈ ಬಾರಿಯ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಅದರಲ್ಲೂ ಮುಖ್ಯವಾಗಿ ಕುಂದಾಪುರ ಮತ್ತು ಬ್ರಹ್ಮಾವರ ಭಾಗದಲ್ಲಿ ತಗ್ಗು ಪ್ರದೇಶಗಳು ನೆರೆ ಭೀತಿ ಎದುರಾಗಿದೆ.
ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕುಂದಾಪುರ ಮತ್ತು ಬ್ರಹ್ಮಾವರ ವಲಯದ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಶನಿವಾರ (ಜುಲೈ 6) ರಜೆ ಘೋಷಣೆ ಮಾಡಲಾಗಿದೆ.
ಇಂದು ಮಳೆಯ ಅಬ್ಬರ ಜೋರಾಗಿದ್ದು, ನಾಳೆಯೂ ಮಳೆ ವಿಪರೀತವಾಗಿ ಬೀಳುವ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಹಾಗಾಗಿ ಭಾರೀ ಮಳೆ ಸುರಿಯುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಿ ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಅವರು ಆದೇಶ ನೀಡಿದ್ದಾರೆ.
ಸಾರ್ವಜನಿಕರು ಮಳೆ ಹೆಚ್ಚಾಗಿರುವ ಕಾರಣ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಡಳಿತ ಸಲಹೆ ನೀಡಿದೆ. ನೆರೆ ಸಂಬಂಧಿತ ಜನರ ನೆರವಿಗೆ ಬರಲು ವ್ಯವಸ್ಥೆಗಳನ್ನೂ ಮಾಡಿಕೊಂಡಿದೆ. ಇಂದೂ ಕೂಡ ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ ಈ ತಾಲೂಕುಗಳಲ್ಲಿ ರಜೆ ಘೋಷಿಸಲಾಗಿತ್ತು.
Leave a Comment