ಆಭರಣ ಪ್ರಿಯರಿಗೆ ಕಹಿ ಸುದ್ದಿ; ಚಿನ್ನದ ಬೆಲೆ ಹೆಚ್ಚಳ, ಇಲ್ಲಿದೆ ಇವತ್ತಿನ ದರಪಟ್ಟಿ

gold prices
Spread the love

ನ್ಯೂಸ್ ಆ್ಯರೋ: ಚಿನ್ನದ ಬೆಲೆ ಈ ವಾರ ಸಾಕಷ್ಟು ಏರಿಳಿತಗಳೊಂದಿಗೆ ಹೊಯ್ದಾಡುವುದು ಮುಂದುವರಿದಿದೆ. ಮೊನ್ನೆ ಭರ್ಜರಿ ಹೆಚ್ಚಳ ಕಂಡು, ನಿನ್ನೆ ಕಡಿಮೆಗೊಂಡಿದ್ದ ಚಿನ್ನದ ಬೆಲೆ ಇಂದು ಶುಕ್ರವಾರ ಮತ್ತೆ ಏರಿಕೆಯಾಗಿದೆ. ಬೆಳ್ಳಿ ಬೆಲೆಯೂ ಕೂಡ ಈ ವಾರ ಮೊದಲ ಬಾರಿಗೆ ಏರಿಕೆ ಆಗಿರುವುದು ವಿಶೇಷ. ಚಿನ್ನದ ಬೆಲೆ ಇಂದು 7,100 ರೂ ಗಡಿ ದಾಟಿದೆ.

24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 7,811 ರೂ ಆಗಿದೆ. ಬೆಳ್ಳಿ ಬೆಲೆ ಚೆನ್ನೈ ಮೊದಲಾದ ಕೆಲವೆಡೆ ಹಲವು ದಿನಗಳ ಬಳಿಕ 100 ರೂ ಗಡಿ ಮುಟ್ಟಿದೆ. ಬೆಂಗಳೂರಿನಲ್ಲಿ ಬೆಲೆ 91.50 ರೂಗೆ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 70,930 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 77,350 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,950 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 70,900 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,950 ರೂಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 29ಕ್ಕೆ)
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,600 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 78,110 ರೂ
18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,580 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 91.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)
ಬೆಂಗಳೂರು: 71,600 ರೂ
ಚೆನ್ನೈ: 71,600 ರೂ
ಮುಂಬೈ: 71,600 ರೂ
ದೆಹಲಿ: 71,750 ರೂ
ಕೋಲ್ಕತಾ: 71,600 ರೂ
ಕೇರಳ: 71,600 ರೂ
ಅಹ್ಮದಾಬಾದ್: 71,650 ರೂ
ಜೈಪುರ್: 71,750 ರೂ
ಲಕ್ನೋ: 71,750 ರೂ
ಭುವನೇಶ್ವರ್: 71,600 ರೂ

ಇನ್ನು ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

Leave a Comment

Leave a Reply

Your email address will not be published. Required fields are marked *

error: Content is protected !!